CCL 2025: ಕರ್ನಾಟಕ ಬುಲ್ಡೋಜರ್ಸ್ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು?
ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) 2025ರ ಪಂದ್ಯಾವಳಿಯ ಕೊನೆಯ ಹಂತದ ಲೀಗ್ ಪಂದ್ಯಗಳು ಈ ವಾರಾಂತ್ಯದಲ್ಲಿ ನಡೆಯಲಿವೆ. ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ಈ ಬಾರಿ ಪಂದ್ಯಾವಳಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದು ಲೀಗ್ ಹಂತದಲ್ಲಿ ಇನ್ನೊಂದು ಪಂದ್ಯವನ್ನು ಆಡಲಿದೆ.
ಕರ್ನಾಟಕ ಬುಲ್ಡೋಜರ್ಸ್ ಮುಂದಿನ ಪಂದ್ಯದಲ್ಲಿ ಪಂಜಾಬ್ ದಿ ಶೇರ್ ತಂಡವನ್ನು ಎದುರಿಸಲಿದೆ. ಫೆಬ್ರವರಿ 22ರಂದು ಶನಿವಾರ ಈ ಪಂದ್ಯ ನಡೆಯಲಿದೆ. ಸಂಜೆ 6.30ರಿಂದ ಈ ಪಂದ್ಯ ಆರಂಭವಾಗಲಿದ್ದು, ಸೂರತ್‌ನ ಲಾಲ್‌ಭಾಯಿ ಕಾಂಟ್ರಾಕ್ಟರ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಜಿಯೋ ಹಾಟ್‌ಸ್ಟಾರ್ ನಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಕರ್ನಾಟಕ ಬುಲ್ಡೋಜರ್ಸ್ ಮೂರು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಂಜಾಬ್ ದಿ ಶೇರ್ ಈವರೆಗೂ ಎರಡು ಪಂದ್ಯ ಆಡಿದ್ದು ಒಂದರಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನುಳಿದ ಎರಡೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ತಲುಪುವ ವಿಶ್ವಾಸದಲ್ಲಿದೆ.
ಮೈಸೂರಿನಲ್ಲಿ ಸೆಮಿಫೈನಲ್ ಮತ್ತು ಫೈನಲ್
ಲೀಗ್ ಹಂತದ ಕೊನೆಯ ಪಂದ್ಯಗಳು ಫೆಬ್ರವರಿ 22 ಮತ್ತು 23 ರಂದು ಸೂರತ್‌ನಲ್ಲಿ ನಡೆಯಲಿದ್ದು, ಸಿಸಿಎಲ್ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಸಾಂಸ್ಕೃತಿಕ ನಗರಿ ಮೈಸೂರು ಆತಿಥ್ಯ ವಹಿಸಲಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್ ಈ ವಿಚಾರವನ್ನು ಮಂಗಳವಾರ ಖಚಿತಪಡಿಸಿದ್ದಾರೆ. ಮಾರ್ಚ್ 1 ರಂದು ಶನಿವಾರ ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಮಾರ್ಚ್ 2ರಂದು ಭಾನುವಾರ ಸಿಸಿಎಲ್ 2025ರ ಫೈನಲ್ ಪಂದ್ಯ ನಡೆಯಲಿದೆ.
ಉಭಯ ತಂಡಗಳ ಆಡುವ ಬಳಗ
ಕರ್ನಾಟಕ ಬುಲ್ಡೋಜರ್ಸ್: ಸುದೀಪ್ (ನಾಯಕ), ಡಾರ್ಲಿಂಗ್ ಕೃಷ್ಣ, ರಾಜೀವ್ ಹನು, ಗೋಲ್ಡನ್ ಸ್ಟಾರ್ ಗಣೇಶ್, ಜಯರಾಮ್ ಕಾರ್ತಿಕ್, ಕರಣ್ ಆರ್ಯನ್, ಮಂಜುನಾಥ್ ಗೌಡ, ಸುನೀಲ್ ರಾವ್, ಅನೂಪ್ ಭಂಡಾರಿ, ಚಂದನ್ ಕುಮಾರ್, ಪ್ರತಾಪ್ ನಾರಾಯಣ್.
ಪಂಜಾಬ್ ದಿ ಶೇರ್: ಮಯೂರ್ ಮೆಹ್ತಾ, ನಿಂಜಾ, ಹಾರ್ಡಿ ಸಂಧು (ನಾಯಕ), ಅನುಜ್ ಖುರಾನ, ದಕ್ಷ್ ಸಿಂಗ್, ರಾಹುಲ್ ಜೈಟ್ಲಿ, ಬಬ್ಬಲ್ ರಾಜ್, ಜಸ್ಸೀ ಗಿಲ್, ಕರಣ ವಾಹಿ, ಸುಯ್ಯಶ್ ರೈ, ರೌನಕ್ ಭಿಂದರ್.












Click it and Unblock the Notifications