ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಪಾನಿ ಪೂರಿ ಫ್ರೀ
ಕರ್ನಾಟಕ ರತ್ನ ಪವರ್‌ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 50ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಸಂಭ್ರಮಾಚರಣೆ ಆರಂಭವಾಗಿದೆ. ಈಗಾಗಲೇ ಪುನೀತ್ ರಾಜ್‌ಕುಮಾರ್ ಹೀರೋ ಆಗಿ ನಟಿಸಿದ ಚೊಚ್ಚಲ ಸಿನಿಮಾ ಅಪ್ಪು ಭರ್ಜರಿಯಾಗಿ ರೀ-ರಿಲೀಸ್ ಆಗಿದೆ. ಕರ್ನಾಟಕದಾದ್ಯಂತ ಅಪ್ಪು ಸಿನಿಮಾ ಬಿಡುಗಡೆಯಾಗಿದ್ದು, ಮತ್ತೆ ದೊಡ್ಡ ಪರದೆ ಮೇಲೆ ಪುನೀತ್ ರಾಜ್‌ಕುಮಾರ್ ಅವರನ್ನು ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ.
ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬವನ್ನು ಅವರಿಲ್ಲದೇ ಆಚರಿಸಲು ನೋವಿದ್ದರೂ ಕೂಡ ನಗುವಿನ ಒಡೆಯನ 50ನೇ ಹುಟ್ಟುಹಬ್ಬವನ್ನು ಸಂಭ್ರಮಿಸಬೇಕು ಎಂದು ಅಭಿಮಾನಿಗಳು ನಿರ್ಧರಿಸಿದ್ದಾರೆ. ಮಾರ್ಚ್ 17 ಅಪ್ಪು ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳು ರಾಜ್ಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅನ್ನದಾನ, ರಕ್ತದಾನ ಸೇರಿದಂತೆ ಸಮಾಜಮುಖಿ ಕೆಲಸಗಳನ್ನು ಸಹ ಮಾಡುತ್ತಿದ್ದಾರೆ.

ಅಪ್ಪು ಅಭಿಮಾನಿಯಾಗಿ ತಮ್ಮ ಕೈಲಾದ ರೀತಿಯಲ್ಲಿ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಬೇಕು ಎಂದು ಬೆಂಗಳೂರಿನ ಅಭಿಮಾನಿಯೊಬ್ಬರು ಮಸಾಲ ಪುರಿ ಹಾಗೂ ಪಾನಿ ಪೂರಿಯನ್ನು ಉಚಿತವಾಗಿ ನೀಡುವುದಾಗಿ ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಅನಿಲ್ ಚಾಟ್ಸ್ ಸೆಂಟರ್ ಅವರು ಮಾರ್ಚ್ 17ರಂದು ಸಂಜೆ 5 ಗಂಟೆಯ ನಂತರ ತಮ್ಮ ಅಂಗಡಿಗೆ ಬರುವ ಗ್ರಾಹಕರಿಗೆ ಉಚಿತವಾಗಿ ಪಾನಿ ಪೂರಿ ಹಾಗೂ ಮಸಾಲ ಪುರಿ ನೀಡುವುದಾಗಿ ಬ್ಯಾನರ್ ಅಳವಡಿಸಿದ್ದಾರೆ.
'ಪುನೀತ್ ರಾಜ್ಕುಮಾರ್ ಅವರ 50ನೇ ಹುಟ್ಟುಹಬ್ಬ ಪ್ರಯುಕ್ತ ಹಾಗೂ ಟೀಮ್ ಇಂಡಿಯಾ 2025ರ ಐಸಿಸಿ ಚಾಂಪಿಯನ್ ಟ್ರೋಫಿ ಗೆದ್ದಿದ್ದಕ್ಕಾಗಿ ಪಾನಿ ಪೂರಿ ಹಾಗೂ ಮಸಾಲ ಪುರಿಯನ್ನು ಉಚಿತವಾಗಿ ನೀಡಲಾಗುತ್ತದೆ' ಎನ್ನುವ ಬ್ಯಾನರ್ ಎಲ್ಲರ ಗಮನ ಸೆಳೆಯುತ್ತಿದೆ. ಸದ್ಯ ಅನಿಲ್ ಚಾಟ್ಸ್ ಸೆಂಟರ್ ಅವರ ಈ ಬ್ಯಾನರ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪಾನಿ ಪೂರಿ ಪ್ರಿಯರಿಗೆ ಹೆಚ್ಚಾಗಿ ಟ್ಯಾಗ್ ಮಾಡಲಾಗುತ್ತಿದೆ.

ಹೀಗಾಗಿ ಮಸಾಲ ಪುರಿ ಹಾಗೂ ಪಾನಿ ಪೂರಿ ಪ್ರಿಯರು ಮಾರ್ಚ್ 17ರಂದು ಸಂಜೆ 5 ಗಂಟೆಯ ಬಳಿಕ ಮಹಾಲಕ್ಷ್ಮಿ ಲೇಔಟ್ನ ಸ್ವಿಮ್ಮಿಂಗ್ ಪೂಲ್ ಎದುರುಗಡೆ ಇರುವ ಅನಿಲ್ ಚಾಟ್ಸ್ ಸೆಂಟರ್ಗೆ ಭೇಟಿ ನೀಡಿ ಉಚಿತವಾಗಿ ಚಾಟ್ಸ್‌ಗಳನ್ನು ತಿಂದು ಪುನೀತ್ ರಾಜ್ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮಿಸಿ. ಇನ್ನು ಅಪ್ಪು ಹೆಸರಿನಲ್ಲಿ ನೂರಾರು ಅಭಿಮಾನಿಗಳು ಹೋಟೆಲ್‌ಗಳನ್ನು ತೆರೆದಿದ್ದು, ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬಕ್ಕೆ ವಿಶೇಷ ಆಫರ್‌ಗಳನ್ನು ನೀಡುತ್ತಿದ್ದಾರೆ.












Click it and Unblock the Notifications