Shankar Nag: ಆಟೋ ರಾಜ ಶಂಕರ್‌ನಾಗ್ ಹೆಸರಿನಲ್ಲಿ ಮಹತ್ವದ ಘೋಷಣೆ ಮಾಡಲಿದೆ ಕರ್ನಾಟಕ ಸರ್ಕಾರ
ಬೆಂಗಳೂರು, ಮೇ. 05: ನಟ, ನಿರ್ದೇಶಕ ಶಂಕರ್ ನಾಗ್ ನಮ್ಮನ್ನು ಅಗಲಿ ದಶಕಗಳೇ ಕಳೆದರೂ ಕೂಡ ಅವರ ನೆನಪು ಸದಾ ಕನ್ನಡಿಗರ ಮನದಲ್ಲಿ ಹಸಿರಾಗಿರುತ್ತದೆ. ಆಟೋ ರಾಜ ಎಂದು ನಾಡಿನ ಎಲ್ಲಾ ಆಟೋ ರಿಕ್ಷಾ ಚಾಲಕರು ಅವರನ್ನು ತಮ್ಮ ಮನೆ ಮನದಲ್ಲಿ ತುಂಬಿಕೊಂಡಿದ್ದಾರೆ. ಸದ್ಯ ಕರ್ನಾಟಕ ಸರ್ಕಾರ ಈ ಚಾಲಕರಿಗೆ ಮತ್ತು ಕನ್ನಡಿಗರಿಗೆ ಸಿಹಿ ಸುದ್ದಿ ನೀಡುತ್ತಿದೆ.
ಅಸಂಘಟಿತ ವಾಹನ ಚಾಲಕರ ಶ್ರಮಕ್ಕೆ ಸಾರಿಗೆ ಇಲಾಖೆ ಗೌರವ ಸಲ್ಲಿಸಲು ಮುಂದಾಗಿದೆ. ವರ್ಷವಿಡೀ ಕೆಲಸ ಮಾಡುವ, ಅಸಂಘಟಿತ ವಲಯದ ಕಾರ್ಮಿಕರ ವ್ಯಾಪ್ತಿಯಲ್ಲಿ ಬರುವ ವಾಹನ ಚಾಲಕರ ಶ್ರಮಕ್ಕೆ ಗೌರವ ಸಲ್ಲಿಸಲು ಸರ್ಕಾರ ಮುಂದಾಗಿದೆ. ಅಪಘಾತ ರಹಿತ ಚಾಲನೆ ಮಾಡಿದ ಚಾಲಕರನ್ನು ಗುರುತಿಸಿ ಪ್ರಶಸ್ತಿ ನೀಡಲು ಮತ್ತು 'ಚಾಲಕರ ದಿನಾಚರಣೆ'ಯನ್ನು ಆಚರಿಸಲು ಕರ್ನಾಟಕ ಸಾರಿಗೆ ಇಲಾಖೆ ನಿರ್ಧಾರ ಮಾಡಿದೆ.

ಚಾಲಕರ ದಿನ, ಪ್ರಶಸ್ತಿ ಪ್ರದಾನಕ್ಕೆ ಸರ್ಕಾರ ನಿರ್ಧಾರ
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಸಾರಿಗೆ ಒಕ್ಕೂಟದ ವಿವಿಧ ಸಂಘಟನೆಗಳು ಕಳೆದ ವರ್ಷ ಪ್ರತಿಭಟನೆ ನಡೆಸಿದ್ದರು. ಅವರ ಬೇಡಿಕೆಗಳ ಪಟ್ಟಿಯಲ್ಲಿ ಚಾಲಕರ ಶ್ರಮವನ್ನು ಗುರುತಿಸಿ, ಗೌರವಿಸುವ ಸಲುವಾಗಿ 'ಚಾಲಕರ ದಿನಾಚರಣೆ'ಯನ್ನು ಆಚರಿಸಬೇಕು ಎಂಬ ಬೇಡಿಕೆಯನ್ನೂ ಇಡಲಾಗಿತ್ತು.
ಆಗ ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದ ರಾಜ್ಯ ಸರ್ಕಾರ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ ನೀಡಿತ್ತು. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಸದ್ಯ ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಚಾಲಕರ ದಿನ ಆಚರಣೆ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ. ಚಾಲಕರ ದಿನ ಯಾವಾಗ...? ಯಾವ ರೀತಿಯಲ್ಲಿ ಆಚರಿಸಬೇಕು ಎಂಬ ಬಗ್ಗೆ ಸಾರಿಗೆ ಇಲಾಖೆ ನಿರ್ಧರಿಸಲಿದೆ.
ಶಂಕರನಾಗ್ ಜನ್ಮದಿನಾಚರಣೆಯಂದು ಚಾಲಕರ ದಿನಾಚರಣೆ!
ಈಗಾಗಲೇ ಆಟೋ ಚಾಲಕರು ಸೇರಿದಂತೆ ಹಲವು ಚಾಲಕರು ಶಂಕರ್ ನಾಗ್ ಹುಟ್ಟುಹಬ್ಬವನ್ನೇ ಚಾಲಕರ ದಿನಾಚರಣೆಯಾಗಿ ಮಾಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ. ಅವರ ಹುಟ್ಟುಹಬ್ಬವನ್ನು ತಮ್ಮದೆ ದಿನ ಎಂಬಂತೆ ಸೆಲಬ್ರೆಟ್ ಮಾಡುತ್ತಿದ್ದಾರೆ. ಹೀಗಾಗಿ ಅದೇ ದಿನದಂದು ಚಾಲಕರ ದಿನಾಚರಣೆ ಮಾಡಬೇಕು ಎಂಬ ಒತ್ತಡ ಕೂಡ ಇದೆ. ಶಂಕರ್ ನಾಗ್ ಅವರ ಜನ್ಮದಿನವನ್ನು ಪ್ರತಿವರ್ಷ ನವೆಂಬರ್ 9ರಂದು ಆಚರಿಸಲಾಗುತ್ತದೆ.

ಇನ್ನು, ಏನೋ ಮಾಡಬೇಕಲ್ಲ ಎಂದೋ, ಚಾಲಕರ ಒತ್ತಾಯವಿದೆ ಎಂದೋ ಕಾಟಾಚಾರಕ್ಕೆ ಚಾಲಕರ ದಿನವನ್ನು ಆಚರಿಸುವ ಬದಲು ಅದನ್ನು ಅರ್ಥಪೂರ್ಣವಾಗಿಸಲು ಚಾಲಕರಿಗೆ ಪ್ರೇರಣೆ ಸಿಗುವಂತೆ ಮಾಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಹೀಗಾಗಿಯೇ ಸಕಲ ಯೋಜನೆಗಳನ್ನು ಸಾರಿಗೆ ಇಲಾಖೆ ರೂಪಿಸುತ್ತಿದೆ.
ಹತ್ತು ಅಥವಾ ಅದಕ್ಕಿಂತ ಹೆಚ್ಚಿನ ವರ್ಷ ಚಾಲನಾ ವೃತ್ತಿಯಲ್ಲಿ ತೊಡಗಿಕೊಂಡಿರುವ, ರಾಜ್ಯ ಸಾರಿಗೆ ಇಲಾಖೆಯಿಂದ ಪಡೆಯುವ ಎಲ್ಲ ದಾಖಲೆಗಳನ್ನು ಪಡೆದಿರುವ ಚಾಲಕರನ್ನು ಗುರುತಿಸಲಾಗುತ್ತದೆ. ತಮ್ಮ ವೃತ್ತಿ ಜೀವನದಲ್ಲಿ ಅಪಘಾತ ರಹಿತ ಚಾಲನೆ ಮಾಡಿರುವ ಚಾಲಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ.
ಚಾಲಕರ ದಿನದಂದು ಈ ಪ್ರಶಸ್ತಿಯು ರಾಜ್ಯ ಮಟ್ಟದಲ್ಲಿ ಮಾತ್ರ ನೀಡ ಬೇಕೆ ಅಥವಾ ಜಿಲ್ಲಾ ಮಟ್ಟದಲ್ಲೂ ನೀಡಬೇಕೆ ಎಂಬ ಬಗ್ಗೆಯೂ ಚರ್ಚಿಸಲಾಗುತ್ತಿದೆ. ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವವರ ಮಾನದಂಡ ಹೀಗೆ ಎಲ್ಲವನ್ನೂ ಶೀಘ್ರದಲ್ಲಿ ನಿಗದಿ ಮಾಡಿ ರಾಜ್ಯ ಸರ್ಕಾರ ಘೋಷಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications