Interim Bail To Darshan: ದರ್ಶನ್‌ಗೆ ಮಧ್ಯಂತರ ಜಾಮೀನು: ಕೋರ್ಟ್ ಷರತ್ತೇನು..?
ಬೆಂಗಳೂರು, ಅಕ್ಟೋಬರ್ 30: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಕನ್ನಡದ ನಟ ದರ್ಶನ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಬಳ್ಳಾರಿ ಜೈಲು ಸೇರಿದ ಬಳಿಕ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್‌ಗೆ ಚಿಕಿತ್ಸೆಯ ಅನಿವಾರ್ಯತೆ ಇರುವ ಕಾರಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಐದು ತಿಂಗಳು ಜೈಲು ವಾಸ ಅನುಭವಿಸಿದ್ದ ದರ್ಶನ್‌ಗೆ ಚಿಕಿತ್ಸೆ ಅನಿವಾರ್ಯತೆ ಇರುವ ಕಾರಣ ಕೋರ್ಟ್ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿ ಕೋರ್ಟ್ ಅಲ್ಪಾವಧಿಯ ಮುಕ್ತಿ ನೀಡಿದೆ. ಸದ್ಯ ಮುಂದಿನ 6 ವಾರಗಳ ಕಾಲ ಜಾಮೀನು ಮಂಜೂರು ಮಾಡಲಾಗಿದ್ದು, ನಿಗದಿತ ಅವಧಿಯ ಜಾಮೀನು ಮಂಜೂರಾಗಿದೆ.

ವೈದ್ಯಕೀಯ ಜಾಮೀನು ಕೋರಿರುವ ನಟ ದರ್ಶನ್ ಅವರ ಮಧ್ಯಂತರ ಅರ್ಜಿಯನ್ನು ಆರು ವಾರಗಳಿಗೆ ಸೀಮಿತಗೊಳಿಸಿ ಪುರಸ್ಕರಿಸಲಾಗಿದೆ. ದರ್ಶನ್ ತಮ್ಮ ಪಾಸ್‌ಪೋರ್ಟ್ ಅನ್ನು ವಿಚಾರಣಾಧೀನ ನ್ಯಾಯಾಲಯದ ವಶಕ್ಕೆ ಸಲ್ಲಿಸಬೇಕು. ದರ್ಶನ್ ತಮ್ಮ ಇಚ್ಛೆಯ ಆಸ್ಪತ್ರೆಯಲ್ಲಿ ತಕ್ಷಣ ಚಿಕಿತ್ಸೆಗೆ ಒಳಗಾಗಬಹುದು. ಆರೋಗ್ಯ ಪರಿಸ್ಥಿತಿ, ಪ್ರಸ್ತಾವಿತ ಚಿಕಿತ್ಸೆ ಮತ್ತು ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಮತ್ತು ಆನಂತರದ ಚಿಕಿತ್ಸೆಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.












Click it and Unblock the Notifications