Actor Darshan: ಸುಪ್ರೀಂಗೆ 1,492 ಪುಟಗಳ ದಾಖಲೆ ಸಲ್ಲಿಕೆ, ನಟ ದರ್ಶನ್ ಜಾಮೀನು ರದ್ದು?
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ಸಿಕ್ಕಿ ತಿಂಗಳಷ್ಟೇ ಕಳೆದಿದೆ. ಆಗಲೇ ಜಾಮೀನು ರದ್ದಾಗುವ ಆತಂಕ ಎಲ್ಲರಲ್ಲೂ ಇದೆ. ಏಕೆಂದರೆ ಕೊಲೆ ಕೇಸ್‌ನಲ್ಲಿ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣ ಸಂಬಂಧ 1,492 ಪುಟಗಳ ಮಹತ್ವದ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ಪೊಲೀಸರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನವರಿ 24ರಂದು ಸುಪ್ರೀಂಕೋರ್ಟ್‌ನಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಸುಮಾರು 1,492 ಪುಟಗಳ ದಾಖಲೆಯನ್ನು ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ ಎನ್ನಲಾಗಿದೆ.

ಮೊದಲಿಗೆ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸ್ಟೇಷನ್‌ನಲ್ಲಿ ದಾಖಲಾಗಿದ್ದ ಎಫ್‌ಐಆರ್, ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ, ಆರೋಪಿಗಳ ಹಿನ್ನೆಲೆ ಮಾಹಿತಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ, ಜಾಮೀನು ಅರ್ಜಿ ಮೊದಲಿಗೆ ವಜಾಗೊಂಡಿದ್ದ ದಾಖಲೆ, ದರ್ಶನ್ ಅವರ ಅನಾರೋಗ್ಯ ಸಂಬಂಧಿಸಿದಂತೆ ವೈದ್ಯರ ವರದಿ, ಮಧ್ಯಂತರ ಜಾಮೀನು ಸೇರಿದಂತೆ ಒಟ್ಟಾರೆ ಎಲ್ಲ ಮಹತ್ವದ ದಾಖಲೆಗಳನ್ನು ಪೊಲೀಸರು ಸುಪ್ರೀಂಕೋರ್ಟ್ ಮುಂದಿಟ್ಟಿದ್ದಾರೆ.
ಪ್ರತ್ಯಕ್ಷ ದರ್ಶಿಗಳ ಹೇಳಿಕೆಗಳು, ಎಫ್‌ಎಸ್‌ಎಲ್ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳು ಸೇರಿದಂತೆ ಈ ಕೇಸ್ ವಾದಿಸಲು ರಾಜ್ಯ ಸರ್ಕಾರ ನೇಮಿಸಿರುವ ಅನಿಲ್ ನಿಶಾನಿ ಅವರ ಮುಖಾಂತರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆಯಾಗಿದ್ದು, ಜನವರಿ 24ರಂದು ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಜಾಮೀನು ಪಡೆದು ರಿಲೀಫ್ ಆಗಿದ್ದ ದರ್ಶನ್ ಅವರು ಕೆಲಕಾಲ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಕಾಲ ಕಳೆದಿದ್ದರು. ಇನ್ನೇನು ಎಲ್ಲ ಸರಿಹೋಯಿತು ಎಂದು ಹಾಯಾಗಿದ್ದ ನಟ ದರ್ಶನ್ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿನ ವಿಚಾರಣೆಗೆ ಆತಂಕ ತರಿಸಿದೆ. ದರ್ಶನ್ ಅವರ ಜಾಮೀನು ಭವಿಷ್ಯವನ್ನು ಸುಪ್ರೀಂಕೋರ್ಟ್ ನಿರ್ಧರಿಸಲಿದ್ದು, ವಿಚಾರಣೆಗೆ ಇನ್ನೆರಡೇ ದಿನ ಬಾಕಿ ಇದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಇದೇ ಸಮಯದಲ್ಲಿ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜನವರಿ 24ರಂದು ನಡೆಸಲಿದ್ದು, ಪೊಲೀಸರು ನೀಡಿರುವ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಜಾಮೀನು ರದ್ದು ಮಾಡಿದರೆ, ದರ್ಶನ್ ಹಾಗೂ ಇತರ ಆರೋಪಿಗಳು ಮತ್ತೆ ಜೈಲಿಗೆ ತೆರಳಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.
ಸದ್ಯ ದರ್ಶನ್ ಅವರು ಈ ಕೇಸ್‌ನಿಂದ ಹಲವು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿ ರಿಲೀಫ್ ಆಗಿದ್ದರು. ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಹತ್ತಿರಕ್ಕೆ ಬಂದಿರುವುದರಿಂದ ಸದ್ಯ ಢವಢವ ಶುರುವಾಗಿದೆ. ಶುಕ್ರವಾರ ನಡೆಯಲಿರುವ ವಿಚಾರಣೆಯಿಂದಾಗಿ ಕೊಲೆ ಕೇಸ್ ಆರೋಪಿಗಳಿಗೆ ಟೆನ್ಷನ್ ಶುರುವಾಗಿದೆ.












Click it and Unblock the Notifications