ಕಿಚ್ಚ ಸುದೀಪ್ ಅವಾರ್ಡ್ ನಿರಾಕರಿಸಿದ ಬೆನ್ನಲ್ಲೇ 2020ರ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ
ಬೆಂಗಳೂರು, ಮಾರ್ಚ್ 12: ಕನ್ನಡ ಚಿತ್ರರಂಗ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತಿ ವರ್ಷ ಕನ್ನಡ ಚಿತ್ರಗಳಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿಕೊಂಡು ಬರುತ್ತಿದೆ. ಆದರೆ ಕಳೆದ ನಾಲ್ಕೈದು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿತ್ತು. ಇದೀಗ ಬಾಕಿ ಉಳಿದ ಎಲ್ಲಾ ವರ್ಷಗಳ ಪ್ರಶಸ್ತಿಗಳನ್ನು ಸರ್ಕಾರ ಘೋಷಣೆ ಮಾಡುತ್ತಿದೆ.
ಇತ್ತೀಚಿಗಷ್ಟೆ 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿತ್ತು. ಪೈಲ್ವಾನ್ ಚಿತ್ರದ ನಟನೆಗಾಗಿ ಕಿಚ್ಚ ಸುದೀಪ್ ಅತ್ಯುತ್ತಮ ನಟ ಹಾಗೂ ದಯಾಳ್ ಪದ್ಮನಾಭನ್ ನಿರ್ದೇಶನದ ತ್ರಯಂಬಕಂ ಚಿತ್ರದ ನಟನೆಗಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರಕಿತ್ತು. ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ನಟ ಕಿಚ್ಚ ಸುದೀಪ್ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿದ್ದರು. ತಮಗಿಂತ ಅತ್ಯುತ್ತಮ ನಟರಿದ್ದು ಅವರನ್ನು ಆರಿಸಿ ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದರು. ಈ ಗೊಂದಲದ ನಡುವೆಯೇ ಇದೀಗ 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ.

ನಿನ್ನೆ ಮಾರ್ಚ್ 11ರದು 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಜಂಟಲ್ಮ್ಯಾನ್ ಚಿತ್ರದ ಅಭಿನಯಕ್ಕಾಗಿ ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. ಇನ್ನು ಪಿಂಕಿ ಎಲ್ಲಿ ಎನ್ನುವ ಚಿತ್ರ ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ಆಯ್ಕೆಯಾಗಿದ್ದರೆ, ಇದೇ ಚಿತ್ರದ ನಟನೆಗಾಗಿ ನಟಿ ಅಕ್ಷತಾ ಪಾಂಡವಪುರ ಅತ್ಯುತ್ತಮ ನಟಿ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

ಇನ್ನು ಒಟ್ಟು 20ಕ್ಕೂ ವಿಭಾಗಗಳಿಗೆ 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದ್ದು, ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ
* ಅತ್ಯುತ್ತಮ ನಟ: ಪ್ರಜ್ವಲ್ ದೇವರಾಜ್ (ಜಂಟಲ್ಮ್ಯಾನ್)
* ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಪಿಂಕಿ ಎಲ್ಲಿ)
* ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ
* 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ
* 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು
* ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು
* ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್
* ಅತ್ಯುತ್ತಮ ಮಕ್ಕಳ ಚಿತ್ರ: ಪದಕ
* ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ( ಗಣೇಶ್ ಹೆಗ್ಡೆ)
* ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ: ಜೀಟಿಗೆ( ತುಳು)
* ಅತ್ಯುತ್ತಮ ಸಂಗೀತ ನಿರ್ದೇಶಕ: ಗಗನ್ ಬಡೇರಿಯಾ (ಮಾಲ್ಗುಡಿ ಡೇಸ್)
* ಅತ್ಯುತ್ತಮ ಪೋಷಕ ನಟ: ರಮೇಶ್ ಪಂಡಿತ್(ತಲೆದಂಡ)
* ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ (ದಂತ ಪುರಾಣ)
* ಅತ್ಯುತ್ತಮ ಕಥೆ: ಶಶಿಕಾಂತ್ ಗಟ್ಟಿ (ರಾಂಚಿ)
* ಅತ್ಯುತ್ತಮ ಚಿತ್ರಕಥೆ: ರಾಘವೇಂದ್ರ ಕುಮಾರ್ (ಚಾಂದಿನಿ ಬಾರ್)
*ಅತ್ಯುತ್ತಮ ಬಾಲ ನಟ: ಅಹಿಲ್ ಅನ್ಸಾರಿ (ದಂತ ಪುರಾಣ)
*ಅತ್ಯುತ್ತಮ ಬಾಲ ನಟಿ: ಬೇಬಿ ಹಿತೈಶಿ ಪೂಜಾರ (ಪಾರು)
*ಅತ್ಯುತ್ತಮ ಕಲಾ ನಿರ್ದೇಶನ: ಗುಣಶೇಖರ (ಬಿಚ್ಚುಗತ್ತಿ)
*ತೀರ್ಪುಗಾರರ ವಿಶೇಷ ಪ್ರಶಸ್ತಿ: ಸಂಚಾರಿ ವಿಜಯ್ (ಮರಣೋತ್ತರ ಪ್ರಶಸ್ತಿ)












Click it and Unblock the Notifications