Get Updates
Get notified of breaking news, exclusive insights, and must-see stories!

KCC: ಶಿವಣ್ಣ ತಂಡಕ್ಕೆ ಸೋಲು! ಕನ್ನಡ ಚಲನಚಿತ್ರ ಕಪ್ ಗೆದ್ದ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್

ಕನ್ನಡ ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರನ್ನೊಳಗೊಂಡ ಕ್ರಿಕೆಟ್‌ ಪಂದ್ಯಾವಳಿ ಕನ್ನಡ ಚಲನಚಿತ್ರ ಕಪ್‌ಗೆ ತೆರೆ ಬಿದ್ದಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ಈ ಬಾರಿ ಕನ್ನಡ ಚಲನಚಿತ್ರ ಕಪ್ ಗೆದ್ದು ಬೀಗಿದೆ.

ಡಿಸೆಂಬರ್ 24 ರಿಂದ ಡಿಸೆಂಬರ್ 26 ರವರೆಗೆ ನಡೆದ ಅದ್ದೂರಿ ಕನ್ನಡ ಚಲನಚಿತ್ರ ಕಪ್‌ಗೆ ತೆರೆ ಬಿದ್ದಿದೆ. ಶಿವರಾಜ್‌ ಕುಮಾರ್, ಸುದೀಪ್, ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್, ರಿಯಲ್ ಸ್ಟಾರ್ ಉಪೇಂದ್ರ, ಡಾಲಿ ಧನಂಜಯ ನಾಯಕತ್ವದಲ್ಲಿ ಆರು ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

KCC: Ganga Warriors Secure Kannada Chalanachitra Cup 2023 Title

ಸಿನಿಮಾ ತಾರೆಯರಿಗೆ ಸ್ಟಾರ್ ಕ್ರಿಕೆಟಿಗರು ಕೂಡ ಜೊತೆಯಾಗಿದ್ದರು. ಸುರೇಶ್ ರೈನಾ, ಎಸ್ ಬದ್ರಿನಾಥ್, ರಾಬಿನ್ ಉತ್ತಪ್ಪ, ತಿಲಕರತ್ನೆ ದಿಲ್ಷಾನ್, ಹರ್ಷಲ್ ಗಿಬ್ಸ್, ಮುರಳಿ ವಿಜಯ್ ಕೂಡ ಈ ಟೂರ್ನಿಯ ಭಾಗವಾಗಿದ್ದರು.

ಸೋಮವಾರ ಪಂದ್ಯಾವಳಿಗೆ ತೆರೆ ಬಿದ್ದಿದ್ದು, ಗಂಗಾ ವಾರಿಯರ್ಸ್ ಮತ್ತು ರಾಷ್ಟ್ರಕೂಟ ಫ್ಯಾಂಥರ್ಸ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಪ್ರಶಸ್ತಿ ಗೆದ್ದಿದೆ.

4 ರನ್‌ಗಳ ರೋಚಕ ಗೆಲುವು

ಸೋಮವಾರ ನಡೆದ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಗಂಗಾ ವಾರಿಯರ್ಸ್ ತಂಡವು ಹೊಯ್ಸಳ ಈಗಲ್ಸ್ ವಿರುದ್ಧ 10 ರನ್‌ಗಳ ಜಯ ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿತ್ತು. ಅಂತಿಮ ಗುಂಪು ಹಂತದ ಪಂದ್ಯದಲ್ಲಿ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡ ಕದಂಬ ಲಯನ್ಸ್ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆಯಿತು.

KCC: Ganga Warriors Secure Kannada Chalanachitra Cup 2023 Title

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರಾಷ್ಟ್ರಕೂಟ ಪ್ಯಾಂಥರ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಅವಿನಾಶ್ 12 ಎಸೆತಗಳಲ್ಲಿ 40 ರನ್ ಗಳಿಸುವ ಮೂಲಕ ಗಂಗಾ ವಾರಿಯರ್ಸ್ 10 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 111 ರನ್ ಕಲೆ ಹಾಕಿತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ರಾಷ್ಟ್ರಕೂಟ ಪ್ಯಾಂಥರ್ಸ್ ಆಕ್ರಮಣಕಾರಿಯಾಗಿ ಇನ್ನಿಂಗ್ಸ್ ಪ್ರಾರಂಭಿಸಿದರು. ಮೊದಲ 5 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 53 ರನ್ ಗಳಿಸಿ ಗೆಲುವಿನ ಭರವಸೆ ಮೂಡಿಸಿದರು. ಆದರೂ ಗಂಗಾ ವಾರಿಯರ್ಸ್ ಬೌಲರ್‌ಗಳು ಉಳಿದ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿದರು, ಅಂತಿಮವಾಗಿ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು 107 ರನ್‌ಗಳಿಗೆ ಕಟ್ಟಿಹಾಕುವ ಮೂಲಕ 4 ರನ್‌ಗಳ ರೋಚಕ ಗೆಲುವು ಸಾಧಿಸಿದ ಗೋಲ್ಡನ್ ಸ್ಟಾರ್ ಗಣೇಶ್ ಪಡೆ ಗೆಲುವು ಸಾಧಿಸಿತು.

ಫೈನಲ್ ಪಂದ್ಯಕ್ಕೆ ಮುನ್ನ ಚಂದನವನದ ತಾರೆಗಳು ಮನರಂಜನಾ ಕಾರ್ಯಕ್ರಮ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿತು. ಕನ್ನಡ ಚಿತ್ರರಂಗದ ಪ್ರಮುಖ ನಟಿಯರು, ತಂತ್ರಜ್ಞರು ಹಾಜರಿದ್ದರು. ಫೈನಲ್ ಪಂದ್ಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಈ ಸಂಭ್ರಮದಲ್ಲಿ ಪಾಲ್ಗೊಂಡರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+