‘ಕೆಂಪೇಗೌಡ’ ಖ್ಯಾತಿಯ ಆರ್ಮುಗ ರವಿಶಂಕರ್ ಈಗ ಡೈರೆಕ್ಟರ್: ಯಾರ ಸಿನಿಮಾಗೆ ಆ್ಯಕ್ಷನ್ & ಕಟ್ ಹೇಳ್ತಾರೆ ಗೊತ್ತಾ?
ಆರ್ಮುಗ ರವಿಶಂಕರ್ ಹೆಸರನ್ನು ಕನ್ನಡಿಗರು ಮರೆಯೋದಕ್ಕೆ ಆಗೋದಿಲ್ಲ. ಅದ್ರಲ್ಲೂ ಈ ನಟನ ವಾಯ್ಸ್ ಇಡೀ ಜಗತ್ತಿಗೇ ಇಷ್ಟ. ನಿದ್ದೆ ಮಾಡುವಾಗ ಇವರ ಧ್ವನಿ ಕೇಳಿದ್ರೂ ಒಮ್ಮೆ ಎದ್ದು ಕೂತು ಬಿಡ್ತಾರೆ ಫ್ಯಾನ್ಸ್. ಹೀಗೆ ವಾಯ್ಸ್ ಮೂಲಕ ಭಾರತದ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಟ್ರೆಂಡ್ ಕಟ್ಟಿಕೊಂಡಿದ್ದ ರವಿಶಂಕರ್ ಅವರು ಕನ್ನಡ ಚಿತ್ರ ಕೆಂಪೇಗೌಡ ಮೂಲಕ ನಟನೆಯಲ್ಲೂ ತಾಕತ್ ತೋರಿಸಿದ್ದರು. ಇದೀಗ ಮತ್ತೆ ಡೈರೆಕ್ಟರ್ ಕ್ಯಾಪ್ ಹಾಕ್ತಿದ್ದಾರೆ ನಟ ಆರ್ಮುಗ ರವಿಶಂಕರ್.
ಹೌದು, ಆರ್ಮುಗ ರವಿಶಂಕರ್ ಆ್ಯಕ್ಟರ್ ಮಾತ್ರವಲ್ಲ ಡೈರೆಕ್ಟರ್, ರೈಟರ್, ಸಿಂಗರ್ ಹಾಗೂ ವಾಯ್ಸ್ ಓವರ್ ಆರ್ಟಿಸ್ಟ್ ಕೂಡ. ಸಿನಿಕರಿಯರ್ ಆರಂಭದಲ್ಲಿ ಡಬ್ಬಿಂಗ್ ಆರ್ಟಿಸ್ಟ್ ಆಗಿದ್ದರು. ನಂತರ ಒಂದೊಂದೆ ಮೆಟ್ಟಿಲು ಏರುತ್ತಾ ನಟನಾಗುವ ತಮ್ಮ ಕನಸನ್ನೂ ಈಡೇರಿಸಿಕೊಂಡರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ, 'ಕೆಂಪೇಗೌಡ' ಚಿತ್ರದಲ್ಲಿ ಆಮುರ್ಗಂ ಪಾತ್ರ ಪೋಷಣೆ ಮಾಡಿ ಜನಪ್ರಿಯತೆಯ ಗಳಿಸಿದರು. ಅಲ್ಲಿವರೆಗೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು ಕೂಡ ಬಿಗ್ ಬ್ರೇಕ್ ಸಿಕ್ಕಿರಲಿಲ್ಲ. ಆದರೆ, ಕೆಂಪೇಗೌಡ ಸಿನಿಮಾದಿಂದ ರವಿಶಂಕರ್ ಕರಿಯರ್ರೇ ಬದಲಾಯ್ತು. ಈಗ ಆರ್ಮುಗ ರವಿಶಂಕರ್ ಮತ್ತೆ ಡೈರೆಕ್ಟರ್ ಕ್ಯಾಪ್ ಹಾಕ್ತಿದ್ದಾರೆ!

ಡೈರೆಕ್ಟರ್ ವಾಪಸ್ ಬರ್ತಿದ್ದಾರೆ!
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಖ್ಯಾತಿ ಪಡೆದ ರವಿಶಂಕರ್ ಡೈರೆಕ್ಷನ್ ಡಿಪಾರ್ಟ್‌ಮೆಂಟ್‌ಗೀಗ ರೀ ಎಂಟ್ರಿ ಕೊಡುತ್ತಿದ್ದಾರೆ. 20 ವರ್ಷದ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಭಾರಿ ಆ್ಯಕ್ಷನ್ ಕಟ್ ಹೇಳಿದ್ದರು. 'ದುರ್ಗಿ' ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ಅವತ್ತಿಗೆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿ ತೆಲುಗಿಗೆ ರಿಮೇಕ್ ಕೂಡ ಆಗಿತ್ತು. ರವಿಶಂಕರ್ ಅವರಿಗೆ ಈ ಚಿತ್ರದಿಂದ ಒಳ್ಳೆಯ ಹೆಸರು ಬಂದಿತ್ತು. ಆದರೆ, ಅದ್ಯಾಕೋ ಏನೋ ದುರ್ಗಿ ನಂತರ ಡೈರೆಕ್ಷನ್ ಕಡೆ ಮುಖ ಮಾಡಿರಲಿಲ್ಲ ಆರ್ಮುಗ ರವಿಶಂಕರ್. ಈಗ 20 ವರ್ಷದ ಬಳಿಕ ಮತ್ತೆ ಡೈರೆಕ್ಟರ್ ಹ್ಯಾಟ್ ತೊಡಲು ರೆಡಿಯಾಗಿದ್ದಾರೆ ಆರ್ಮುಗ ರವಿಶಂಕರ್. ಅದೂ ಅವರ ಮಗನಿಗಾಗಿ ಅನ್ನೋದು ವಿಶೇಷ.
ಮಗನ ಮೊದಲ ಚಿತ್ರಕ್ಕೆ ಆರ್ಮುಗ ರೆಡಿ!
ಹೌದು, ಆರ್ಮುಗ ರವಿಶಂಕರ್ ಅವರಿಗೆ ಅದ್ವೆ ಎಂಬ ಪುತ್ರ ಇದ್ದಾರೆ ವಿದೇಶದಲ್ಲಿ ನಟನೆಯ ತರಬೇತಿ ಪಡೆದುಕೊಂಡಿದ್ದಾರೆ. ವಿದ್ಯಾಭ್ಯಾಸ ಮುಗಿಸಿ, ವಾಪಾಸ್ ಹುಟ್ಟೂರಿಗೆ ಮರಳಿರುವ ಮಗನ ಬಣ್ಣದ ಜಗತ್ತಿಗೆ ಪರಿಚಯಿಸಿದ್ದಾರೆ. ತಾತನಂತೆ ಅಪ್ಪ-ಚಿಕ್ಕಪ್ಪರಂತೆ ಕಲೆ ರಕ್ತಗತವಾಗಿ ಬಂದಿರುವುದರಿಂದ ಮುಖಕ್ಕೆ ಬಣ್ಣ ಹಚ್ಚಲು ಅದ್ವೆ ಓಕೆ ಹೇಳಿದ್ದು, ಪುತ್ರನ ಚೊಚ್ಚಲ ಚಿತ್ರಕ್ಕೆ ತಾವೇ ಆ್ಯಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ ನಟ ಕಂ ನಿರ್ದೇಶಕ ರವಿಶಂಕರ್.
ಕೈಯಲ್ಲಿ ಜ್ವಾಲೆ ಹಾಗೂ ಪುಸ್ತಕ
ಆಯುಧಪೂಜೆ ಅಂಗವಾಗಿ ಅದ್ವೆ ಚೊಚ್ಚಲ ಸಿನಿಮಾ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ಸುಬ್ರಹ್ಮಣ್ಯ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಪೋಸ್ಟರ್ ನಲ್ಲಿ ದೈವಿಕ ಅಂಶ ಹೈಲೆಟ್ ಆಗಿವೆ. ಪೋಸ್ಟರ್‌ನಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಹಾಗೂ ಅವರ ವಾಹನ ನವಿಲನ್ನು ತೋರಿಸಲಾಗಿದೆ. ನಾಯಕ ಅದ್ವೆ ಒಂದು ಕೈಯಲ್ಲಿ ಜ್ವಾಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ನಿಗೂಢವಾಗಿ ಕಾಣುವ ಪುಸ್ತಕವನ್ನು ಹಿಡಿದುಕೊಂಡಿದ್ದಾರೆ.

ಅರ್ಜುನ್ ರೆಡ್ಡಿ ಸಿನಿಮಾ ಖ್ಯಾತಿಯ ರಾಜ್ ತೋಟ ಕ್ಯಾಮೆರಾ ಹಿಡಿದಿದ್ದು, ಕೆಜಿಎಫ್ ಸಲಾರ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರ್ ಸಂಗೀತ, ವಿಜಯ್ ಎಂ. ಕುಮಾರ್ ಸಂಕಲನ, ಮಾಸ್ತಿ ಸಂಭಾಷಣೆ ಸುಬ್ರಹ್ಮಣ್ಯ ಸಿನಿಮಾಕ್ಕಿದೆ. ಎಸ್ ಜಿ ಮೂವೀ ಮೇಕರ್ಸ್ ಬ್ಯಾನರ್ ಅಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಬಂಡವಾಳ ಹಾಕಿದ್ದು, ಪ್ರವೀಣಾ ಕಡಿಯಾಲ ಹಾಗೂ ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸುಬ್ರಹ್ಮಣ್ಯ ತಯಾರಾಗ್ತಿದೆ. ಡಿಸೆಂಬರ್ ತಿಂಗಳಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಧುಮುಕುವ ನಿರೀಕ್ಷೆ ಇದೆ.












Click it and Unblock the Notifications