KL Rahul: ಮೊದಲ ಮಗುವಿನ ನಿರೀಕ್ಷೆಯಲ್ಲಿ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಕನ್ನಡಿಗ ಕೆಎಲ್ ರಾಹುಲ್‌ಗೆ ಖುಷಿ ಸುದ್ದಿ ಸಿಕ್ಕಿದೆ. ಕೆಎಲ್ ರಾಹುಲ್ ಅತಿಯಾ ಶೆಟ್ಟಿ ಸ್ಟಾರ್ ದಂಪತಿ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅತಿಯಾ ಶೆಟ್ಟಿ ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 2025ರಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ಅಥಿಯಾ ಶೆಟ್ಟಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಮಂಗಳೂರು ಮೂಲಕ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮಗಳಾದ ಅತಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ 2023ರ ಫೆಬ್ರವರಿ ತಿಂಗಳಿನಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನ ಇಬ್ಬರೂ ಹಲವು ವರ್ಷ ಲವ್‌ನಲ್ಲಿದ್ದರು. ಬಳಿಕ ಪೋಷಕರ ಒಪ್ಪಿಗೆ ಪಡೆದು ಅದ್ದೂರಿಯಾಗಿ ವಿವಾಹವಾಗಿದ್ದರು.

KL Rahul and athiya shetty expecting first child

ವದಂತಿಗಳಿಗೆ ಸಿಕ್ತು ಸ್ಪಷ್ಟನೆ

ಈ ವರ್ಷದ ಏಪ್ರಿಲ್‌ನಲ್ಲೇ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಪೋಷಕರಾಗುತ್ತಿದ್ದಾರೆ ಎನ್ನುವ ವದಂತಿಗಳಿದ್ದವು. ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಸುನೀಲ್ ಶೆಟ್ಟಿ ಅವರ ಮಾತುಗಳು ಅವರ ಮಗಳು ಅಥಿಯಾ ಶೆಟ್ಟಿ ಮತ್ತು ಅವರ ಪತಿ ಕ್ರಿಕೆಟಿಗ ಕೆಎಲ್ ರಾಹುಲ್ ಶೀಘ್ರದಲ್ಲೇ ಮಗುವನ್ನು ನಿರೀಕ್ಷಿಸುತ್ತಿದ್ದಾರೆ ಎನ್ನುವ ಊಹಾಪೋಹಕ್ಕೆ ಕಾರಣವಾಗಿತ್ತು. ಈ ಬಗ್ಗೆ ಕೆಎಲ್ ರಾಹುಲ್ ಆಗಲಿ ಅಥಿಯಾ ಶೆಟ್ಟಿಯಾಗಲಿ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ ಈಗ ಎಲ್ಲ ವದಂತಿಗಳಿಗೂ ದಂಪತಿಗಳು ತೆರೆ ಎಳೆದಿದ್ದಾರೆ.

ಕೆಎಲ್ ರಾಹುಲ್- ಅತಿಯಾ ಶೆಟ್ಟಿ ಪೋಷಕರಾಗುತ್ತಿರುವ ಸಂತಸ ಹಂಚಿಕೊಂಡಿರುವ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು, ಸ್ನೇಹಿತರು, ಕುಟುಂಬಸ್ಥರು ಶುಭ ಹಾರೈಸಿದ್ದಾರೆ.

2019 ರಿಂದ ಪ್ರೀತಿಯಲ್ಲಿದ್ದ ಜೋಡಿ

2019ರ ಜನವರಿ ತಿಂಗಳಿನಲ್ಲಿ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಪರಸ್ಪರ ಸ್ನೇಹಿತರ ಮೂಲಕ ಭೇಟಿಯಾದರು. ಬಳಿಕ ಉತ್ತಮ ಸ್ನೇಹಿತರಾದ ಇಬ್ಬರ ನಡುವೆ ಕ್ರಮೇಣ ಪ್ರೀತಿ ಬೆಳೆದಿತ್ತು. ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ ಈ ಸ್ಟಾರ್ ಜೋಡಿ, 2023ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತು. ಖಂಡಾಲಾದ ಸುನಿಲ್‌ ಅವರ ಒಡೆತನದ ಫಾರ್ಮ್‌ಹೌಸ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಮದುವೆ ನಡೆದಿತ್ತು.

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ರಾಹುಲ್

ಕೆಎಲ್ ರಾಹುಲ್ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ. ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಅವರು ಬಾರ್ಡರ್ ಗವಾಸ್ಕರ್ ಟ್ರೋಫಿ ಪಂದ್ಯಾವಳಿಯಲ್ಲಿ ಆಡಲು ಸಜ್ಜಾಗುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡದ ಕಾರಣ ಉಳಿದ ಎರಡು ಪಂದ್ಯಗಳಿಂದ ಅವರನ್ನು ಕೈಬಿಡಲಾಗಿತ್ತು. ಈಗ ಭಾರತ ಎ ತಂಡದಲ್ಲಿ ಆಡುತ್ತಿರುವ ಅವರು ಆಸ್ಟ್ರೇಲಿಯಾ ಎ ವಿರುದ್ಧದ ಪಂದ್ಯದಲ್ಲಿ ಮತ್ತೆ ವಿಫಲರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+