Get Updates
Get notified of breaking news, exclusive insights, and must-see stories!

Rashmika Mandanna: ನಟಿ ರಶ್ಮಿಕಾಗೆ ಭದ್ರತೆ ನೀಡುವಂತೆ ಹೋಂ ಮಿನಿಸ್ಟರ್‌ಗಳಿಗೆ ಪತ್ರ: ಬೆದರಿಕೆ, ಕಿರುಕುಳ ಯಾರಿಂದ?

ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೊಂದೆಡೆ ರಶ್ಮಿಕಾ ಅವರಿಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೂ ಪತ್ರ ಬರೆದಿದೆ. ಇದಕ್ಕೆ ಕಾರಣವೇನು ಎಂಬುದನ್ನು ಮುಂದೆ ತಿಳಿಯಿರಿ..

ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ರಶ್ಮಿಕ ಮಂದಣ್ಣ ಅವರಿಗೆ ಸೆಕ್ಯುರಿಟಿ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಸರ್ಕಾರ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಅವರು ಪತ್ರ ಬರೆದಿದ್ದಾರೆ. ಇಷ್ಟಕ್ಕೂ ನಟಿ ರಶ್ಮಿಕಾಗೆ ರಕ್ಷಣೆ ಕೇಳಲು ಕಾರಣವೇನು ಎಂಬುದನ್ನು ಅವರೇ ತಿಳಿಸಿದ್ದಾರೆ. ಅದೇನು ಗೊತ್ತಾ?

Kodava National Council Urges Protection For Actress Rashmika Mandanna

"ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರು ಇಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ರಶ್ಮಿಕಾ ಮಂದಣ್ಣ ಭಾರತೀಯ ಚಲನಚಿತ್ರರಂಗಕ್ಕೆ ಸಿಕ್ಕಿರುವ ಅಪೂರ್ವ ಕೊಡುಗೆ. ಅವರು ಶ್ರೇಷ್ಠ ನಟಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನಟಿ ಸ್ವಂತ ನಿರ್ಧಾರ ಹಾಗೂ ಆಕೆಯ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವೆಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ಯಾರೋ ಒಬ್ಬರ ಸೂಚನೆಯಂತೆ, ನಿರೀಕ್ಷೆಯಂತೆ ಇರಬೇಕು ಎಂದು ಒತ್ತಡ ಹೇರಬಾರದು. ಇದು ರಶ್ಮಿಕಾ ಅವರು ಕೊಡವ ಸಮಾಜಕ್ಕೆ ಸೇರಿರುವ ಕಾರಣದಿಂದಲೇ ಹೀಗೆಲ್ಲ ನಡೆದುಕೊಳ್ಳುತ್ತಿದ್ದಾರೆ ಎಂಬ ಅರ್ಥ ಬರುತ್ತದೆ ಎಂದು ಹೇಳಿದ್ದಾರೆ.

Kodava National Council Urges Protection For Actress Rashmika Mandanna

ರಶ್ಮಿಕಾ ಮಂದಣ್ಣ ಅವರ ಬಗ್ಗೆ ಮಂಡ್ಯ ಜಿಲ್ಲೆಯ ಶಾಸಕ ಗಣಿಗ ರವಿ ಅವರು ರಶ್ಮಿಕಾ ಅವರ ಬಗ್ಗೆ ಆರೋಪಗಳನ್ನು ಮಾಡಿದ್ದರು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದಿದ್ದು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಕರೆದಿದ್ದಕ್ಕೆ ನಾನು ಹೈದರಾಬಾದ್‌ನಲ್ಲಿರೋದು. ಕರ್ನಾಟಕ ಎಲ್ಲಿದೆ ನಂಗೆ ಗೊತ್ತಿಲ್ಲ, ನನಗೆ ಅಲ್ಲಿಗೆ ಬರಲು ಟೈಮ್‌ ಇಲ್ಲ ಎಂದಿದ್ದರು. ಇವರಿಗೆಲ್ಲ ನಾವು ಬುದ್ಧಿ ಕಲಿಸಬೇಕಲ್ವಾ? ಎಂದು ಶಾಸಕ ಗಣಿಗರ ರವಿ ಗರಂ ಆಗಿದ್ದರು.

ಈ ಬಗ್ಗೆಯೂ ಉಲ್ಲೇಖಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್, ಕಾವೇರಿ ನದಿಯನ್ನು ನೆಚ್ಚಿಕೊಂಡಿರುವ ಮಂಡ್ಯ ಶಾಸಕರು ಅದೇ ಕಾವೇರಿ ಮಾತೆಯ ಪುತ್ರಿಯಾಗಿರುವ ರಶ್ಮಿಕಾ ಮಂದಣ್ಣ ಅವರನ್ನು ಅಗೌರವದಿಂದ ಕಂಡಿರುವುದು ಬೇಸರದ ವಿಚಾರ. ಶಾಸಕರು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಹಾಗೂ ಜನರನ್ನು ರಕ್ಷಿಸುವ ಪ್ರಮಾಣ ವಚನ ಸ್ವೀಕರಿಸಿದವರು. ಈ ರೀತಿ ಅರ್ಥಹೀನ ಟೀಕಾಪ್ರಹಾರ ಖಂಡನೀಯ ಎಂದು ಆಕ್ರೋಶ ಹೊರಹಾಕಿದೆ. ರಶ್ಮಿಕಾ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಾನು ಹೈದರಾಬಾದ್‌ನವಳು ಎನ್ನುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಹುಟ್ಟಿದ ಕರ್ನಾಟಕವನ್ನೇ ರಶ್ಮಿಕಾ ಮರೆತಿದ್ದಾರೆ ಎಂದು ಕನ್ನಡಿಗರು ಗರಂ ಆಗಿದ್ದರು. ಇದೀಗ ಅವರಿಗೆ ರಕ್ಷಣೆ ನೀಡುವಂತೆ ಕೊಡವ ಸಮಾಜ ಒತ್ತಾಯಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+