ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನಟ ದರ್ಶನ್ ವಿರುದ್ಧ ಲಾಯರ್ ಜಗದೀಶ್ ದೂರು ದಾಖಲು
Lawyer K.N.Jagadesh Kumar: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಬೆನ್ನು ನೋವು ಹಿನ್ನೆಲೆ ಚಿಕಿತ್ಸೆಗೆಂದು ಹೈಕೋರ್ಟ್ ಮಂಧ್ಯಂತರ ಜಾಮೀನು ನೀಡಿದೆ. ಇದರ ಬೆನ್ನಲ್ಲೇ ಇದೀಗ ಬಿಗ್‌ಬಾಸ್ ಕನ್ನಡ ಸೀಸನ್ 11ನಿಂದ ಹೊರಬಿದ್ದ ಲಾಯರ್ ಕೆ.ಎನ್.ಜಗದೀಶ್ ಅವರು ನಟ ದರ್ಶನ್ ವಿರುದ್ಧ ಕೋಡಿಗೆಹಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರಣ ಇಲ್ಲಿದೆ ತಿಳಿಯಿರಿ.
ಬೆನ್ನು ನೋವು ಹಿನ್ನೆಲೆ ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಕೋರ್ಟ್ ಆದೇಶದ ಮೇರೆಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೆ ಲಾಯರ್ ಜಗದೀಶ್ ಅವರಿಗೆ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಇತ್ತೀಚೆಗಷ್ಟೇ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರ ಬೆನ್ನಲ್ಲೇ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಇತ್ತೀಚೆಗಷ್ಟೇ ಬಿಗ್‌ಬಾಸ್ ರಿಯಾಲಿಟಿ ಶೋಗೆ ತೆರಳಿ ಅವಾಚ್ಯ ಶಬ್ಧ ಬಳಸಿದ ಆರೋಪದ ಮೇಲೆ ವಾಪಸ್ ಆಗಿದ್ದ ಲಾಯರ್ ಜಗದೀಶ್ ಮಂಗಳವಾರ (ನವೆಂಬರ್ 05) ಕೋಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದರ್ಶನ್ ವಿರುದ್ಧ ದೂರು ದಾಖಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದೂರು ಪ್ರತಿಯಲ್ಲಿ ಲಾಯರ್ ಜಗದೀಶ್ ಅವರು "ನಾನು ದರ್ಶನ್ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದೇ ಎಂದು ದರ್ಶನ್ ಅಭಿಮಾನಿಗಳು ನನಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಅವರ ಅಭಿಮಾನಿಗಳಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ಕಳೆದ 2 ದಿನಗಳಲ್ಲಿ ಬರೋಬ್ಬರಿ 1,000ಕ್ಕೂ ಹೆಚ್ಚು ಬಾರಿ ಬೆದರಿಕೆ ಕರೆಗಳು ಬಂದಿವೆ. ದರ್ಶನ್ ಅಭಿಮಾನಿ ರಿಷಿ ಎನ್ನುವ ವ್ಯಕ್ತಿಯೇ ನನಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಇದೆಲ್ಲದಕ್ಕೂ ಜಾಮೀನಿನ ಮೇಲೆ ಹೊರಬಂದು ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಸೂಚನೆ ಕೊಟ್ಟಿದ್ದಾರೆಂದು," ಆರೋಪ ಮಾಡಿದ್ದಾರೆ.
ನಟ ದರ್ಶನ್ ನೆಟ್‌ವರ್ಕ್ ತುಂಬಾ ದೊಡ್ಡದಿದೆ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ಕೊಡಬೇಕು. ನಟ ದರ್ಶನ್ ಹಾಗೂ ರಿಷಿ ಇಬ್ಬರ ವಿರುದ್ಧವೂ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಲಾಯರ್ ಕೆ.ಎನ್.ಜಗದೀಶ್ ಅವರು ಮನವಿ ಮಾಡಿದ್ದಾರೆ.












Click it and Unblock the Notifications