ಬಾಲ್ಕನಿಯಲ್ಲಿ ಬಟ್ಟೆ ಬಿಚ್ಕೊಂಡು ಜೈಲರ್ ನಟನ ಕಿರಿಕ್, ವಿಡಿಯೋ ವೈರಲ್
ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೈಲರ್ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದ ಖ್ಯಾತ ನಟನ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಮಲಯಾಳಂ ನಟ ವಿನಾಯಕನ್ (Vinayakan) ಅವರ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೋದಲ್ಲಿ ನಟ ವಿನಾಯಕನ್ ಅವರು ತಮ್ಮ ಫ್ಲ್ಯಾಟ್‌ನ ಬಾಲ್ಕನಿಯಲ್ಲಿ ಬಟ್ಟೆ ಬಿಚ್ಚಿಕೊಂಡು ಅಕ್ಕಪಕ್ಕದವರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ನಟ ಕಂಠಪೂರ್ತಿ ಕುಡಿದು, ಅಮಲಿನಲ್ಲಿ ಈ ರೀತಿ ವರ್ತಿಸಿದ್ದಾರೆ. ಅಕ್ಕಪಕ್ಕದವರಿಗೆ ಬಾಯಿಗೆ ಬಂದಂತೆ ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ ತಮ್ಮ ಮೈಮೇಲಿದ್ದ ಬಟ್ಟೆ ಕಳಚಿ ಬೆತ್ತಲೆಯಾಗಿಯೂ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟ ವಿನಾಯಕನ್ ಅವರು ತಮ್ಮ ಫ್ಲಾಟ್‌ನ ಬಾಲ್ಕನಿಯಲ್ಲಿ ತಮ್ಮ ಬಟ್ಟೆಗಳನ್ನು ಬಿಚ್ಚಿ ನಗ್ನತೆ ಪ್ರದರ್ಶಿಸುತ್ತಿರುವ ವಿಡಿಯೋ ಸಂಚಲನ ಸೃಷ್ಟಿಸಿದೆ. ಕಂಠಪೂರ್ತಿ ಕುಡಿದು ನಟ ಕೆಟ್ಟ ಪದಗಳನ್ನು ಬಳಸಿ ನೆರೆಹೊರೆಯವರನ್ನು ನಿಂದಿಸಿದ್ದಾರೆ. ಅಲ್ಲದೆ ಬಾಲ್ಕನಿಯಲ್ಲೇ ತಾವು ಧರಿಸಿದ್ದ ಪಂಚೆ ಬಿಚ್ಚಿ, ನಗ್ನತೆ ಪ್ರದರ್ಶಿಸಿದ್ದಾರೆ ಎಂದು ಹೇಳಲಾಗಿದೆ. ಈ ವಿಡಿಯೋ ಹಂಚಿಕೊಂಡಿರುವ ಹಲವರು ಈ ನಟನನ್ನು ಮೊದಲು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ನಟ ಮೈಮೇಲೆ ಪರಿಜ್ಞಾನವೇ ಇಲ್ಲದಂತೆ ವರ್ತಿಸಿದ್ದಾರೆ. ಬಾಲ್ಕನಿಯಲ್ಲಿ ಬಿದ್ದು ತೂರಾಡಿದ್ದಾರೆ. ಈ ವೇಳೆ ನಟ ಹಲವು ಬಾರಿ ಬಟ್ಟೆ ಬಿಚ್ಚಿ ವಿಚಿತ್ರವಾಗಿ ವರ್ತಿಸಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನಟ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ತಮ್ಮ ವರ್ತನೆ ಬಗ್ಗೆಯೂ ಅವರು ತಪ್ಪೊಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟ ವಿನಾಯಕನ್, "ಒಬ್ಬ ಚಲನಚಿತ್ರ ನಟನಾಗಿ ಮತ್ತು ವ್ಯಕ್ತಿಯಾಗಿ ನಾನು ಅನೇಕ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯವಿಲ್ಲ. ನನ್ನ ಕಡೆಯಿಂದ ಬಂದಿರುವ ಎಲ್ಲ ನಕಾರಾತ್ಮಕ ಶಕ್ತಿಗಾಗಿ ನಾನು ಸಾರ್ವಜನಿಕರಲ್ಲಿ ಕ್ಷಮೆಯಾಚಿಸುತ್ತೇನೆ. ಚರ್ಚೆಗಳು ಮುಂದುವರಿಯಲಿ.." ಎಂದು ನಟ ಕ್ಷಮೆಯಾಚಿಸಿದ್ದಾರೆ.
ಈ ಹಿಂದೆಯೂ ನಟ ವಿನಾಯಕನ್ ಅವರು ವಿಮಾನ ನಿಲ್ದಾಣದ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿ ಅರೆಸ್ಟ್ ಕೂಡ ಆಗಿದ್ದರು. ಗೋವಾದಲ್ಲಿ ಕೂಡ ಇವರು ಕಿರಿಕ್ ಮಾಡಿಕೊಂಡಿದ್ದರು. ಕುಟುಂಬದಲ್ಲಿ ಪತ್ನಿಯೊಂದಿಗೂ ಅವರು ಜಗಳ ಮಾಡಿಕೊಂಡು ಪೊಲೀಸ್ ಕೇಸ್ ಕೂಡ ಆಗಿತ್ತು. ಇದೀಗ ಮತ್ತೆ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಇನ್ನು ನಟ ವಿನಾಯಕನ್ ಅವರು ಮಲಯಾಳಂ ಹಾಗೂ ತಮಿಳು ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿದ್ದಾರೆ. ಇತ್ತೀಚೆಗೆ ಬ್ಲಾಕ್‌ಬಸ್ಟರ್ ಹಿಟ್ ಕಂಡು ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೈಲರ್ ಸಿನಿಮಾದಲ್ಲಿ ಕೂಡ ವಿನಾಯಕನ್ ಅವರು ವಿಲನ್ ಪಾತ್ರದಲ್ಲಿ ಮಿಂಚಿದ್ದರು. ಇತ್ತೀಚೆಗೆ 100 ಕೋಟಿ ಗಳಿಕೆ ಕಂಡ ನಟ ಉನ್ನಿ ಮುಕುಂದನ್ ನಟನೆಯ ಮಾರ್ಕೊ ಸಿನಿಮಾದಲ್ಲಿ ಕೂಡ ಇವರು ನಟಿಸಿದ್ದಾರೆ.












Click it and Unblock the Notifications