Actress Assault Case: ಕನ್ನಡ ನಟಿಯ ಕಿಡ್ನ್ಯಾಪ್, ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ನಟ ದಿಲೀಪ್ಗೆ ರಿಲೀಫ್
2017ರಲ್ಲಿ ಖ್ಯಾತ ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಕೇರಳದ ಸೆಷನ್ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ. ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು ಎರ್ನಾಕುಲಂ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದ್ದು, ಅವರ ವಿರುದ್ಧದ ಪಿತೂರಿ ಆರೋಪವನ್ನು ಸಾಬೀತು ಮಾಡಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ.
ಮಲಯಾಳಂ ಚಿತ್ರರಂಗವನ್ನೇ ಈ ಪ್ರಕರಣವು ಬೆಚ್ಚಿಬೀಳಿಸಿತ್ತು. ಈ ಸಂವೇದನಾಶೀಲ ಪ್ರಕರಣದ ಎಂಟು ವರ್ಷಗಳ ನಂತರ ಮತ್ತು ಸಿನಿಮಾದಲ್ಲಿ ಸ್ತ್ರೀದ್ವೇಷ, ಅಧಿಕಾರ ಮತ್ತು ಹೊಣೆಗಾರಿಕೆಯ ಬಗ್ಗೆ ವ್ಯಾಪಕ ಚರ್ಚೆಗೆ ನಾಂದಿ ಹಾಡಿದ ನಂತರ ಈ ತೀರ್ಪು ಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಮತ್ತು ಇತರ ಐವರು ಆರೋಪಿಗಳನ್ನ ದೋಷಿಗಳೆಂದು ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಶಿಕ್ಷೆಗೆ ಒಳಗಾದ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಡಿಸೆಂಬರ್ 12ರಂದು ಪ್ರಕಟಿಸುವುದಾಗಿ ದಿನಾಂಕ ನಿಗದಿಪಡಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರ ಜಾಮೀನು ಕೂಡ ರದ್ದಾಗಿದೆ.

ಕೇಸ್ ಖುಲಾಸೆಗೊಂಡ ನಂತರ ಮಾತನಾಡಿರುವ ನಟ ದಿಲೀಪ್, ಈ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲು ಕ್ರಿಮಿನಲ್ ಪಿತೂರಿ. ಕೆಲವು ಪೊಲೀಸ್ ಅಧಿಕಾರಿಗಳು ಇದಕ್ಕಾಗಿ ಕೆಲ ಆರೋಪಿಗಳನ್ನು ಬಳಸಿಕೊಂಡರು. ಮಾಧ್ಯಮಗಳು ತನ್ನ ವಿರುದ್ಧ ಸುಳ್ಳು ನಿರೂಪಣೆಯನ್ನು ಹರಡಿದವು ಎಂದು ಆರೋಪಿಸಿದ್ದಾರೆ. ನಿಜವಾದ ಪಿತೂರಿ ಎಂದರೆ ನನ್ನನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿ, ನನ್ನ ವೃತ್ತಿಜೀವನವನ್ನು ನಾಶಮಾಡಿದ್ದು ಎಂದು ದಿಲೀಪ್ ಹೇಳಿದ್ದಾರೆ. ಈ ಕಠಿಣ ಪರೀಕ್ಷೆಯುದ್ದಕ್ಕೂ ತನ್ನೊಂದಿಗೆ ನಿಂತಿದ್ದಕ್ಕಾಗಿ ನನ್ನ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಗೆ ಧನ್ಯವಾದ ಎಂದಿದ್ದಾರೆ.
ಏನಿದು ಪ್ರಕರಣ?
2017ರ ಫೆಬ್ರವರಿ 17ರಂದು ಎರ್ನಾಕುಲಂ ಬಳಿ ಮಲಯಾಳಂ ಯುವ ನಟಿ ತ್ರಿಶೂರ್ನಿಂದ ಸಿನಿಮಾ ಚಿತ್ರೀಕರಣಕ್ಕಾಗಿ ಪ್ರಯಾಣಿಸುತ್ತಿದ್ದಾಗ ಈ ಹಲ್ಲೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಪಲ್ಸರ್ ಸುನಿ ಮತ್ತು ಅವರ ಸಹಚರರು ನಟಿಯನ್ನು ಅಪಹರಿಸಿ, ಹಲ್ಲೆ ಮಾಡಿ, ಅಶ್ಲೀಲ ದೃಶ್ಯಗಳನ್ನು ಚಿತ್ರೀಕರಿಸಿರುವ ಆರೋಪ ಕೇಳಿಬಂದಿತ್ತು. ಬಳಿಕ ಪ್ರಮುಖ ಆರೋಪಿಗಳನ್ನು ಸಹ ಬಂಧಿಸಲಾಗಿತ್ತು. ಇದೇ ಕೇಸ್ನಲ್ಲಿ ನಟ ದಿಲೀಪ್ ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಚಲಿಸುವ ಕಾರಿನೊಳಗೆ ಮಲಯಾಳಂ ಯುವ ನಟಿಯನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣವು ದೇಶದಾದ್ಯಂತ ಗಮನ ಸೆಳೆದಿತ್ತು. ನಟಿಯ ಅಶ್ಲೀಲ ದೃಶ್ಯಗಳನ್ನು ಚಿತ್ರೀಕರಿಸಲು ಸೂಚಿಸಿದ್ದು ಹಾಗೂ ಈ ಅಪರಾಧಕ್ಕೆ ₹1.5 ಕೋಟಿ ನೀಡಿದ್ದಾರೆ ಎಂದು ನಟ ದಿಲೀಪ್ ಮೇಲೆ ಆರೋಪ ಹೊರಿಸಲಾಗಿತ್ತು. ನಟಿಯ ಮೇಲೆ ಸೇಡು ತೀರಿಸಿಕೊಳ್ಳಲು ದಿಲೀಪ್ ಆಕೆಯ ಮೇಲಿನ ದೌರ್ಜನ್ಯದ ದೃಶ್ಯ ಹಾಗೂ ನಗ್ನ ಫೋಟೋ ಕೂಡ ಬಯಸಿದ್ದರು ಎಂಬ ಆರೋಪವಿತ್ತು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications