ಕನ್ನಡ ಚಿತ್ರರಂಗದಲ್ಲಿ ಮತ್ತೆ 'ಮೀಟೂ' ಸದ್ದು: ಸರ್ಕಾರದ ಮುಂದೆ ನಟಿಯರ ಬೇಡಿಕೆ ಏನು..?

ಬೆಂಗಳೂರು, ಸೆಪ್ಟೆಂಬರ್‌ 04: ಬೇರೆ ಭಾಷೆಯ ಚಿತ್ರರಂಗದಂತೆ ಕನ್ನಡ ಚಿತ್ರರಂಗದಲ್ಲಿಯೂ ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಧ್ವನಿ ಎತ್ತಲಾಗಿದೆ. ಕೆಲವು ವರ್ಷಗಳ ಹಿಂದೆ ಸ್ಯಾಂಡಲ್​ವುಡ್​ನಲ್ಲಿ ಮೀಟೂ ಆರೋಪ ಜೋರಾಗಿತ್ತು. ಬಳಿಕ ಏಕಾಏಕಿಯಾಗಿ ಸದ್ದಿಲ್ಲದೇ ತೆರೆಮರೆಗೆ ಸರಿದಿತ್ತು. ಇದೀಗ ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಸಲ್ಲಿಕೆ ಆದ ನಂತರ ಕನ್ನಡ ಚಿತ್ರರಂಗದಲ್ಲೂ ತನಿಖೆ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ನಟರು, ನಟಿಯರು, ನಿರ್ದೇಶಕರು, ನಿರ್ಮಾಪಕರು ಹಾಗೂ ವಿವಿಧ ವಿಭಾಗಗಳ ತಂತ್ರಜ್ಞರು ಸೇರಿದಂತೆ ಅನೇಕರನ್ನೊಳಗೊಂಡ ಫೈರ್​ ಸಂಸ್ಥೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಿತಿ ರಚಿಸುವಂತೆ ಪತ್ರ ಬರೆದಿದೆ. ಲೈಂಗಿಕ ದೌರ್ಜನ್ಯ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಫೈರ್​ ಸಂಸ್ಥೆ ಮನವಿ ಮಾಡಿದೆ.

MeToo Buzz in Sandalwood What Are The Actresses Demands

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಫೈರ್​ ಸಂಸ್ಥೆ ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ಈ ಕೆಳಗಿನಂತಿದೆ.

*ಲೈಂಗಿಕ ಕಿರುಕುಳ ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ (ಕೆಎಫ್‌ಐ) ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ತನಿಖೆ ಮಾಡುವುದು.

2. ಚಿತ್ರೋದ್ಯಮದಲ್ಲಿ ಮಹಿಳೆಯರಿಗೂ ಸುರಕ್ಷಿತವಾದ ಮತ್ತು ನ್ಯಾಯಯುತವಾದ ವಾತಾವರಣವನ್ನು ಸೃಷ್ಟಿಸಲು ಅದಕ್ಕೆ ತಕ್ಕ ಪಾಲಿಸಿಗಳನ್ನು ರಚಿಸುವುದು.

ಈ ಸಮಿತಿಯ ನೇತೃತ್ವ ವಹಿಸಲು ತಮ್ಮ ವೃತ್ತಿ ಜೀವನದುದ್ದಕ್ಕೂ ಲಿಂಗ ಸಮಾನತೆಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರನ್ನು ನೇಮಿಸುವಂತೆ ಫೈರ್​ ಸಂಸ್ಥೆ ಮನವಿ ಮಾಡಿಕೊಂಡಿದೆ.

ಈ ಪ್ರಕ್ರಿಯೆಯಲ್ಲಿ ಸರ್ಕಾರಕ್ಕೆ ನಮ್ಮ ನೆರವು ಅಗತ್ಯವಾದಲ್ಲಿ, ಫೈರ್​ ಸಂಸ್ಥೆಯು ಸಹಾಯ ನೀಡಲು ಸಿದ್ಧವಾಗಿದೆ ಎಂದಿರುವ ನಟರು, ನಟಿಯರು ಹಾಗೂ ನಿರ್ದೇಶಕರು, ಈ ವರದಿಯನ್ನು 3 ತಿಂಗಳುಗಳ ಒಳಗಾಗಿ ಸಂಪೂರ್ಣಗೊಳಿಸಬೇಕೆಂದು ಕೇಳಿಕೊಂಡಿದ್ದಾರೆ. ಅಲ್ಲದೇ ವಿವರಗಳನ್ನು ಮತ್ತು ಫಲಿತಾಂಶವನ್ನು ಶೀಘ್ರವಾಗಿ ಸಾರ್ವಜನಿಕಗೊಳಿಸಬೇಕು ಎಂದು ಕನ್ನಡ ಚಿತ್ರರಂಗದ ಫೈರ್​ ಸಂಸ್ಥೆ ಮನವಿ ಮಾಡಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+