Kumbhmela Monalisa: ಮದುವೆ ಬೆನ್ನಲ್ಲೇ ಜೀವಬೆದರಿಕೆ: ರಕ್ಷಣೆಗಾಗಿ ಸಿಎಂ ಮೊರೆ ಹೋದ ಕುಂಭಮೇಳ ಖ್ಯಾತಿಯ ಮೊನಾಲಿಸಾ ದಂಪತಿ
ಕಳೆದ ವರ್ಷ ಪ್ರಯಾಗ್ರಾಜ್ ಕುಂಭಮೇಳದ ಸಂದರ್ಭದಲ್ಲಿ ತನ್ನ ಫೋಟೋಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ಸಂಚಲನ ಮೂಡಿಸಿದ್ದ "ಕುಂಭಮೇಳ ಗರ್ಲ್" ಖ್ಯಾತಿಯ ಮೊನಾಲಿಸಾ ಭೋಸ್ಲೆ (Monalisa Bhosle) ಜೀವನ ಈಗ ಸಂಕಷ್ಟಕ್ಕೆ ಸಿಲುಕಿದೆ. ಇತ್ತೀಚೆಗೆ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದ ಈ ಜೋಡಿಯ ಪ್ರೇಮಕಥೆ ಈಗ ವಿವಾದದ ತಿರುವು ಪಡೆದುಕೊಂಡಿದೆ. ಫರ್ಮನ್ ಖಾನ್ (Farman Khan) ಎಂಬುವವರನ್ನು ಮದುವೆಯಾದ ನಂತರ ತಮಗೆ ಮತ್ತು ತಮ್ಮ ಪತಿಗೆ ಜೀವಬೆದರಿಕೆಗಳು ಬರುತ್ತಿವೆ ಎಂದು ಮೋನಾಲಿಸಾ ಗಂಭೀರ ಆರೋಪ ಮಾಡಿದ್ದಾರೆ.
ಲವ್ ಜಿಹಾದ್ ವಿವಾದ
ಮೊನಾಲಿಸಾ ಭೋಸಲೆ ಮತ್ತು ಫರ್ಮನ್ ಖಾನ್ ಇತ್ತೀಚೆಗಷ್ಟೇ ಕೇರಳದಲ್ಲಿ ಅಂತರಧರ್ಮೀಯ ವಿವಾಹವಾಗಿದ್ದರು. ಈ ಮದುವೆಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ದೊಡ್ಡ ಮಟ್ಟದ ಚರ್ಚೆ ಆರಂಭವಾಯಿತು. ಕೆಲವು ಸಂಘಟನೆಗಳು ಮತ್ತು ಗುಂಪುಗಳು ಈ ಮದುವೆಯನ್ನು "ಲವ್ ಜಿಹಾದ್" ಎಂದು ಬಣ್ಣಿಸಿ ತೀವ್ರವಾಗಿ ವಿರೋಧಿಸಿವೆ. ಮೊನಾಲಿಸಾ ಅವರನ್ನು ಮತಾಂತರ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಅವರ ವಿರುದ್ಧ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ.

ಸಹಾಯಕ್ಕಾಗಿ ಮನವಿ
ಈ ಹಿನ್ನೆಲೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಮೋನಾಲಿಸಾ ಈಗ ರಕ್ಷಣೆಗಾಗಿ ಸರ್ಕಾರದ ಮೊರೆ ಹೋಗಿದ್ದಾರೆ. ಅವರು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. "ನಾವಿಬ್ಬರೂ ಪರಸ್ಪರ ಪ್ರೀತಿಸಿ, ಒಪ್ಪಿಗೆಯಿಂದ ಮದುವೆಯಾಗಿದ್ದೇವೆ. ಆದರೆ ಈಗ ಕೆಲವು ಗುಂಪುಗಳಿಂದ ನಮಗೆ ಮತ್ತು ನಮ್ಮ ಕುಟುಂಬಕ್ಕೆ ನಿರಂತರವಾಗಿ ಬೆದರಿಕೆಗಳು ಬರುತ್ತಿವೆ. ನಮಗೆ ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ" ಎಂದು ಅವರು ಹೇಳಿದ್ದಾರೆ.
ತಮ್ಮ ರಕ್ಷಣೆಗಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿಗಳು, ಪೊಲೀಸ್ ಕಮಿಷನರ್, ಸ್ಥಳೀಯ ಮಾಧ್ಯಮ ಸಂಸ್ಥೆಗಳಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ತಮಗೆ ತಕ್ಷಣವೇ ಪೊಲೀಸ್ ರಕ್ಷಣೆ ನೀಡಬೇಕು ಮತ್ತು ತಮ್ಮ ವೈಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮೊನಾಲಿಸಾ ಭೋಸ್ಲೆ ಮೊದಲು ಸುದ್ದಿಯಾಗಿದ್ದು ಕುಂಭಮೇಳದ ಸಂದರ್ಭದಲ್ಲಿ ಸಂಪ್ರದಾಯಬದ್ಧ ಉಡುಗೆಯಲ್ಲಿ ಅವರು ಕಾಣಿಸಿಕೊಂಡಿದ್ದ ಫೋಟೋಗಳು ಭಾರತದಾದ್ಯಂತ ವೈರಲ್ ಆಗಿದ್ದವು. ಅನೇಕರು ಅವರನ್ನು "ಸನಾತನ ಸಂಸ್ಕೃತಿಯ ಪ್ರತಿಬಿಂಬ" ಎಂದು ಹೊಗಳಿದ್ದರು. ಆದರೆ ಈಗ ಅವರು ಮುಸ್ಲಿಂ ಸಮುದಾಯದ ಯುವಕನನ್ನು ಮದುವೆಯಾಗಿರುವುದು ಅವರ ಕೆಲ ಅಭಿಮಾನಿಗಳು ಮತ್ತು ಕೆಲವು ಧಾರ್ಮಿಕ ಸಂಘಟನೆಗಳಲ್ಲಿ ಅಸಮಾಧಾನ ಮೂಡಿಸಿದೆ ಎನ್ನಲಾಗಿದೆ.
ಸದ್ಯ ಈ ಪ್ರಕರಣವು ಮಹಾರಾಷ್ಟ್ರದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಅಂತರಧರ್ಮೀಯ ವಿವಾಹಗಳು ವೈಯಕ್ತಿಕ ಸ್ವಾತಂತ್ರ್ಯವೇ ಅಥವಾ ಸಾಮಾಜಿಕ ಮತಾಂತರದ ಭಾಗವೇ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಪೊಲೀಸ್ ಇಲಾಖೆಯು ಈ ದೂರುಗಳನ್ನು ಆಧರಿಸಿ ತನಿಖೆ ಆರಂಭಿಸಲಿದೆಯೇ ಮತ್ತು ನವಜೋಡಿಗೆ ರಕ್ಷಣೆ ನೀಡಲಿದೆಯೇ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.
-
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್













Click it and Unblock the Notifications