Tamannaah Bhatia: ಬೆಟ್ಟಿಂಗ್ ಆಪ್ ಪ್ರಚಾರ: ನಟಿ ತಮನ್ನಾಗೆ ಸಂಕಷ್ಟ!

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾಗೆ ಇಡಿ ಸಂಕಷ್ಟ ಎದುರಾಗಿದೆ. ಸಿನಿಮಾ ರಂಗದಲ್ಲಿ ಮಿಲ್ಕಿ ಬ್ಯೂಟಿ ಎಂದು ಖ್ಯಾತಿ ಪಡೆದ ನಟಿ ತಮನ್ನಾಗೆ ಇಡಿ ಡ್ರಿಲ್ ಶುರುವಾಗಿದೆ. ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ನಟಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ನಟಿ ತಮನ್ನಾ ಬೆಟ್ಟಿಂಗ್ ಆಪ್ ಬಗ್ಗೆ ಪ್ರಚಾರ ಮಾಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ತಮನ್ನಾ ಅವರಿಗೆ ನೋಟೀಸ್ ಜಾರಿ ಮಾಡಿತ್ತು. ಜಾರಿ ನಿರ್ದೇಶನಾಲಯ ಗುಹಾಟಿಯ ಕಚೇರಿಯಲ್ಲಿ ತಮನ್ನಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಇವರನ್ನು ಆರೋಪಿಯಾಗಿ ವಿಚಾರಣೆ ಮಾಡಲಾಗಿಲ್ಲ.

Money Laundering Case ED Interrogates Actress Tamannaah Bhatia

ತಮನ್ನಾ ಸ್ತ್ರೀ 2 ಸಿನಿಮಾದ ಮೂಲಕ ಇತ್ತೀಚೆಗೆ ಹೆಚ್ಚು ಸುದ್ದಿಯಾಗಿದ್ದರು. ಅಲ್ಲದೆ ಅವರ 'ಆಜ್‌ ಕಿ ರಾತ್' ಹಾಡು ಕೂಡ ಹೆಚ್ಚು ಟ್ರೆಂಡಿಂಗ್‌ನಲ್ಲಿ ಇದೆ. ಬೆಟ್ಟಿಂಗ್ ಅಪ್ಲಿಕೇಷನ್‌ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳನ್ನು ವೀಕ್ಷಿಸುವಂತೆ ತಮನ್ನಾ ಪ್ರಚಾರ ಮಾಡಿದ್ದಾರೆ ಎನ್ನುವ ವರದಿ ಇದೆ.

ಅಂದಹಾಗೆ ಈ ಮಹದೇವ್ ಆಪ್ ಬೆಟ್ಟಿಂಗ್‌ ಅನ್ನು ಪ್ರಚೋದಿಸುತ್ತದೆ. ಈ ಆಪ್‌ ಮೂಲಕ ವಿವಿಧ ಗೇಮ್‌ಗಳನ್ನು ನೋಡುವುದು ಮಾತ್ರವಲ್ಲದೆ ಬೆಟ್ಟಿಂಗ್ ಕೂಡ ಆಡಬಹುದು. ಈ ಆಪ್ ಮೂಲಕ ಕೋಟ್ಯಾಂತರ ರೂಪಾಯಿ ಹಣವನ್ನು ವಂಚಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

Money Laundering Case ED Interrogates Actress Tamannaah Bhatia

ಈ ಆಪ್ ಅನ್ನು ಸಿನಿಮಾ ನಟಿ ತಮನ್ನಾ ಪ್ರಚಾರ ಮಾಡಿದ್ದರು ಎನ್ನುವ ಆರೋಪವಿದೆ. ಮಹದೇವ್ ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ಲೊಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ಅಕ್ರಮ ವೀಕ್ಷಣೆಯನ್ನು ಪ್ರಚಾರ ಮಾಡಿದ ಆರೋಪ ತಮನ್ನಾ ಮೇಲಿದೆ. ಹೀಗಾಗಿ ಇಡಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿತ್ತು. ನೋಟೀಸ್ ನೀಡಿದ ಬೆನ್ನಲ್ಲೇ ನಟಿ ತಮನ್ನಾ ಗುರುವಾರ ಗುಹಾಟಿಯ ಕಚೇರಿಗೆ ತಮ್ಮ ತಾಯಿಯೊಂದಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಿಲ್ಕಿ ಬ್ಯೂಟಿ ತಮನ್ನಾ ಸಿನಿ ಜರ್ನಿ

ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ತಮನ್ನಾ ಭಾಟಿಯಾ ದಕ್ಷಿಣ ಚಿತ್ರರಂಗದ ಬಹುಬೇಡಿಕೆಯ ನಟಿ. ಪ್ರಮುಖವಾಗಿ ತೆಲಗು ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಇವರು ಕೆಲ ಹಿಂದಿ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ಕನ್ನಡದಲ್ಲಿ ಜಾಗ್ವಾರ್' ಮತ್ತು ಕೆಜಿಎಫ್' ಚಿತ್ರಗಳ ಐಟೆಮ್ ಹಾಡುಗಳಿಗೆ ನೃತ್ಯ ಮಾಡಿದ್ದಾರೆ.

1989 ಡಿಸೆಂಬರ್ 21 ರಂದು ಮುಂಬೈನಲ್ಲಿ ಸಿಂಧಿ ಕುಟುಂಬದಲ್ಲಿ ಜನಿಸಿದರು.ತಂದೆ ಸಂತೋಷ್ ಭಾಟಿಯಾ ವಜ್ರ ವ್ಯಾಪಾರಿ. ಮುಂಬೈನಲ್ಲಿಯೇ ವಿಧ್ಯಾಭ್ಯಾಸ ಮುಗಿಸಿದ ತಮನ್ನಾ ತಮ್ಮ 13 ನೇ ವಯಸ್ಸಿನಲ್ಲಿಯೇ ನಟನೆಗೆ ಇಳಿದರು.2005 ರಲ್ಲಿ ತಮ್ಮ ಹದಿನೈದನೇ ವಯಸ್ಸಿನಲ್ಲಿ ಚಾಂದ್ ಸಾ ರೋಷನ್ ಚೆಹರಾ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರು. ಈ ಚಿತ್ರ ಯಶಸ್ವಿಯಾಗಲಿಲ್ಲ. ಅದೇ ವರ್ಷ ತೆಲುಗಿನ ಶ್ರೀ ಮತ್ತು ಮುಂದಿನ ವರ್ಷ ತಮಿಳಿನ ಕೇಡಿ ಚಿತ್ರಗಳಲ್ಲಿ ನಟಿಸಿದರು. ಈ ಚಿತ್ರಗಳ ನಟನೆಗೆ ಪ್ರಶಂಸೆ ಪಡೆದರು. ನಂತರ ತೆರೆಕಂಡ ಹ್ಯಾಪಿ ಡೇಸ್, ಕಲ್ಲೂರಿ ಚಿತ್ರಗಳು ತಮನ್ನಾಗೆ ಇನ್ನಷ್ಟು ಖ್ಯಾತಿ ನೀಡಿದವು.

'ಕೊಂಚಂ ಇಷ್ಟಂ ಕೊಂಚಂ ಕಷ್ಟಂ', ಪೈಯ್ಯ, 100 % ಲವ್, ಬದ್ರಿನಾಥ್ ಮುಂತಾದ ಚಿತ್ರಗಳು ತಮಿಳು ಮತ್ತು ತೆಲಗು ಚಿತ್ರರಂಗದಲ್ಲಿ ತಮನ್ನಾಗೆ ಭದ್ರವಾದ ತಳಪಾಯ ಹಾಕಿದವು. ಹಿಂದಿಯಲ್ಲಿ ಹಿಮ್ಮತ್ತವಾಲಾ, ಎಂಟರ್ಟೇನಮೆಂಟ್ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಎರಡು ಭಾಗಗಳಲ್ಲಿ ತೆರೆಕಂಡ ಬಾಹುಬಲಿ ಚಿತ್ರ ತಮನ್ನಾ ಭಾರತದಾದ್ಯಂತ ಜನಪ್ರಿಯತೆ ತಂದು ಕೊಟ್ಟಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+