ಆ ವಿಚಾರ ನಟ ದರ್ಶನ್ ಜಾಮೀನಿಗೆ ಅಡ್ಡಿಯಾಗುವ ಸಾಧ್ಯತೆ; ಬಳ್ಳಾರಿ ಜೈಲಲ್ಲಿ ದಾಸ ಫುಲ್ ಟೆನ್ಷನ್
Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲುಪಾಲಾಗಿದೆ. ಈ ಪ್ರಕರಾಣ ದಾಖಲಾದಾಗಿನಿಂದ ಬೆನ್ನುಬಿದ್ದ ಬೇತಾಳದಂತೆ ನಟ ದರ್ಶನ್ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ದರ್ಶನ್ ಜಾಮೀನು ವಿಚಾರಕ್ಕೂ ಮತ್ತೊಂದು ಎದುರಾದಂತಾಗಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ಜಾಮೀನು ಅರ್ಜಿ ವಿಚಾರಣೆ ಮುಂದೂಡುವ ಮೂಲಕ ನಟ ದರ್ಶನ್‌ಗೆ ಶಾಕ್ ನೀಡಿದೆ. ಅಷ್ಟೇ ಅಲ್ಲದೆ, ಈ ಪ್ರಕರಣದಲ್ಲಿ ತಮ್ಮ ಮೇಲಿನ ಆರೋಪಗಳನ್ನು ಮುಚ್ಚಿಹಾಕಲು ಸುರಿದಿದ್ದ ಹಣಕ್ಕೆ ಸಂಬಂಧಿಸಿದಂತೆ ಐಟಿ ಬೆನ್ನು ಬಿದ್ದಿದ್ದು, ಇದರಿಂದ ನಟ ದರ್ಶನ್ ಜಾಮೀನಿಗೆ ತೊಡಕಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಸಿಗುವ ಭರವಸೆಯಲ್ಲಿದ್ದಾರೆ. ನಿನ್ನೆ (ಸೆಪ್ಟೆಂಬರ್ 25) ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದ್ದು, ಅಂದಾದರೂ ಜಾಮೀನು ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿ ನಟ ದರ್ಶನ್ ಇದ್ದಾರೆ. ಈ ನಡುವೆ ಐಟಿ ಅಧಿಕಾರಿಗಳ ವಿಚಾರಣೆ ಜಾಮೀನಿಗೆ ತೊಡಕಾಗಹುದು ಎಂದು ಜೈಲಿನಲ್ಲಿರುವ ದರ್ಶನ್ ಟೆನ್ಷನ್‌ನಲ್ಲಿದ್ದಾರೆ ಎಂದು ಜೈಲಿನ ಮೂಲಗಳಿಂದ ತಿಳಿದುಬಂದಿದೆ.
ಸೆಪ್ಟೆಂಬರ್ 30ರಂದು ಕೋರ್ಟ್‌ನಲ್ಲಿ ನಟ ದರ್ಶನ್‌ಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಆದರೆ ಪ್ರಕರಣದಿಂದ ಬಚಾವಾಗಲು 84,00,000 ರೂಪಾಯಿ ಖರ್ಚು ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇದೇ ನಟ ದರ್ಶನ್ ಜಾಮೀನಿಗೆ ತೊಡಕಾಗಬಹುದು ಎಂದು ಹೇಳಲಾಗುತ್ತಿದೆ. ಕೊಲೆ ಬಳಿಕ ಹಣ ವಹಿವಾಟು ನಡೆದಿರುವ ಬಗ್ಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಾಮೀನಿಗೆ ತಡೆ ತರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಪವಿತ್ರಾ ಗೌಡ ಪ್ರಕರಣದಿಂದಿ ಜಾರಿಕೊಳ್ಳುವ ತಂತ್ರ ಇದೀಗ ದರ್ಶನ್‌ಗೆ ಮತ್ತಷ್ಟು ಉರುಳಾಗುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಐಟಿ ಹಾಗೂ ಪವಿತ್ರಾ ಗೌಡ ನಿಲುವು ನೋಡಿಕೊಂಡು ದರ್ಶನ್ ಕಾನೂನು ಹೋರಾಟಕ್ಕೆ ಇಳಿಯಬಹುದು ಎಂದು ಹೇಳಲಾಗುತ್ತಿದೆ. ಇನ್ನು ನಿನ್ನೆ ಕೋರ್ಟ್‌ನಲ್ಲಿ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ನಟ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಇವರ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ನಟ ದರ್ಶನ್ & ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆಯಾಗಿದ್ದು, ಇನ್ನುಳಿದ ಐವರ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 5ಕ್ಕೆ ಮುಂದೂಡಿಕೆಯಾಗಿದೆ. ಈಗಾಗಲೇ ಪ್ರಕರಣದ ಎ15 ಆರೋಪಿ ಕಾರ್ತಿಕ್, ಎ17 ಆರೋಪಿ ನಿಖಿಲ್‌ಗೆ ಸೆಪ್ಟೆಂಬರ್ 23ರಂದು 57ನೇ ಸಿಸಿಎಚ್ ಕೋರ್ಟ್ ಜಾಮೀನು ನೀಡಿದ್ದು, ಅಂದೇ ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂ ಮಾಡಿ ಆದೇಶ ಹೊರಡಿಸಿತ್ತು.












Click it and Unblock the Notifications