ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು
ಬೆಂಗಳೂರು, ಜೂನ್02: ಕನ್ನಡ ಭಾಷೆ ಬಗ್ಗೆ ತಮಿಳು ನಟ ಕಮಲ್ ಹಾಸನ್ ಹೇಳಿಕೆ ರಾಜ್ಯದ ಹಲವು ಕನ್ನಡ ಪರ ಸಂಘಟನೆಗಳು ಸೇರಿದಂತೆ ರಾಜಕೀಯ ನಾಯಕರು ಹಾಗೂ ಸಿನಿಮಾ ನಟ ನಟಿಯರು ಕಮಲ್ ಹಾಸನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕನ್ನಡ ಭಾಷೆಯ ಬಗ್ಗೆ ಮಾತನಾಡಿರುವ ಕಮಲ್ ಹಾಸನ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದು, ಕಮಲ್ ಹಾಸನ್ ಹೇಳಿಕೆ ಕುರಿತು ಮುಖ್ಯಮಂತ್ರಿ ಚಂದ್ರು ಅವರು ಪ್ರತಿಕ್ರಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಕಮಲ್ ಹಾಸನ್‌ಗೆ ಜ್ಞಾನದ ಕೊರತೆ ಇದೆ. ಅಜ್ಞಾನದಿಂದ ದುರಹಂಕಾರವಾಗಿ ಮಾತನಾಡುವುದು ತಪ್ಪು. ಅವರ ಹೇಳಿಕೆಯನ್ನು ಖಂಡಿಸಬೇಕಾದವರು ಪಲಾಯನ ಮಾಡಿದರು. ಯಾರೆಲ್ಲಾ ಶಿವಣ್ಣನ ರೀತಿ ಕಮಲ್ ಹಾಸನ್ ಪರವಾಗಿ ಇದ್ದಾರೋ ಅವರೆಲ್ಲರೂ ನನ್ನ ದೃಷ್ಟಿಯಲ್ಲಿ ನಾಡದ್ರೋಹಿಗಳು ಎಂದು ಕನ್ನಡದ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಕಿಡಿಕಾರಿದ್ದಾರೆ.

ಭಾಷೆ ಬಗ್ಗೆ ಜ್ಞಾನ ಇಲ್ಲದೆ, ನಾನು ಹೇಳಿದ್ದೇ ಸರಿ, ನನ್ನನ್ನು ಮೀರಿಸುವವರು ಯಾರೂ ಇಲ್ಲ ಎನ್ನೋ ಧೋರಣೆಯಲ್ಲಿ ಕಮಲ್ ಹಾಸನ್ ಮಾತನಾಡಿದ್ದಾರೆ. ಇದನ್ನು ನಿಜವಾಗಿ ತಮಿಳುನಾಡಿನವರೇ ಖಂಡಿಸಬೇಕಿತ್ತು. ಇಂತದ್ದನ್ನೆಲ್ಲ ಒಬ್ಬ ದೊಡ್ಡ ವ್ಯಕ್ತಿಯಾಗಿ ಮಾಡಬಾರದು ಎಂದು ಹೇಳಬೇಕಿತ್ತು. ದೊಡ್ಡ ವ್ಯಕ್ತಿ ಎಂದು ನಾವು ಅಂದುಕೊಳ್ಳುತ್ತಿದ್ದೇವೆ ಅಷ್ಟೇ. ಸಣ್ಣತನ ತೋರಿಸಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಪರವಾಗಿ ಮಾತನಾಡಿದ್ದಾರೆ ಎಂದು ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು, ಶಿವರಾಜ್ ಕುಮಾರ್ ಅಷ್ಟೇ ಅಲ್ಲದೆ ಕಮಲ್ ಹಾಸನ್ ಪರವಾಗಿ ಯಾರ್ಯಾರು ಮಾತನಾಡಿದ್ದಾರೋ ಅವರೆಲ್ಲರೂ ನಾಡ ದ್ರೋಹಿ ಎಂದು ಆಕ್ರೋಶ ಹೊರಹಾಕಿದರು.
ಕನ್ನಡದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕಮಲ್ ಹಾಸನ್ ಒಬ್ಬ ಅಯೋಗ್ಯ, ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದ ದುರಹಂಕಾರಿ.ಅವ್ನು ಹೇಳಿದ ಹೇಳಿಕೆ ನಮ್ಮ ನಾಡಿಗೆ ಅವಮಾನ ಆಗಿದೆ. ಆ ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ ಕುಮಾರ್ ಪಲಾಯನವಾದ ಮಾಡಿ ಬಿಟ್ಟರು. ಕಮಲ್ ಹಾಸನ್ ಅವ್ರ ಹೇಳಿಕೆಯನ್ನ ಖಂಡಿಸಬೇಕಿತ್ತು. ನಾನು, ನನ್ನ ಕುಟುಂಬ ನಿಮಗೆ ಧನ್ಯವಾದ ಹೇಳ್ತೀವಿ ಆದ್ರೆ ನಾಡು, ನುಡಿ ವಿಚಾರದಲ್ಲಿ ಹೋರಾಟದ ಪರವಾಗಿ ಇರ್ತೀನಿ ಅಂತ ಹೇಳಬೇಕಿತ್ತು.
ಬೆಂಗಳೂರಿಗೆ ಬಂದಾಗ ಕೇಳಬಹುದಿತ್ತಲ್ಲ ಅಂತ ಹೇಳ್ತಾರೆ. ಹಾಗಿದ್ರೆ ಕನ್ನಡ ವಿಚಾರಕ್ಕೆ ಬಂದಾಗ ನೀವೇನು ಮಾಡ್ತಿದ್ರಿ? ನನಗೆ ಅರ್ಥವೇ ಆಗಲಿಲ್ಲ ಅನ್ನೋದು ಬೇಜವಾಬ್ದಾರಿ ತನ ಎಂದರಲ್ಲದೇ ಶಿವಣ್ಣ ರೀತಿಯಲ್ಲಿ ಇನ್ನೂ ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಅಂತ ಮಾರ್ಮಿಕವಾಗಿ ಮುಖ್ಯಮಂತ್ರಿ ಚಂದ್ರು ಅವರು ಹೇಳಿಕೆ ನೀಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications