Samantha: ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥ; ಕಣ್ಣೀರು ಹಾಕಿದ್ರಾ ಮಾಜಿ ಪತ್ನಿ ಸಮಂತಾ?

ಟಾಲಿವುಡ್ ನ ಸ್ಟಾರ್ ಜೋಡಿ ಸಮಂತಾ ರುತ್‌ಪ್ರಭು ಮತ್ತು ನಾಗಚೈತನ್ಯ ವಿಚ್ಛೇದನ ಪಡೆದುಕೊಂಡು ದೂರವಾಗಿದ್ದಾರೆ. ಸಮಂತಾ ಅನಾರೋಗ್ಯಕ್ಕೆ ತುತ್ತಾದ ಬಳಿಕ ಚೇತರಿಸಿಕೊಳ್ಳುತ್ತಿದ್ದರೆ, ನಾಗ ಚೈತನ್ಯ ಮತ್ತೊಂದು ಮದುವೆಗೆ ಸಜ್ಜಾಗಿದ್ದಾರೆ ನಟಿ ಶೋಭಿತಾ ಧೂಳಿಪಾಲ ಅವರೊಂದಿಗೆ ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಹೈದರಾಬಾದ್‌ನ ಜೂಬಿಲಿ ಹಿಲ್ಸ್‌ನಲ್ಲಿರುವ ನಟ ಅಕ್ಕಿನೇನಿ ನಾಗಾರ್ಜುನ ಅವರ ಹೊಸ ಮನೆಯ ಗೃಹಪ್ರವೇಶ ಸಮಾರಂಭದಲ್ಲಿ ಈ ಘೋಷಣೆ ಮಾಡಲಾಗಿದೆ. ನಾಗಾರ್ಜುನ ಅವರು ಟ್ವೀಟ್ ಮಾಡುವ ಮೂಲಕ ಚೈತನ್ಯ ಶೋಭಿತಾ ಅವರ ನಿಶ್ಚಿತಾರ್ಥದ ಸುದ್ದಿಯನ್ನು ಖಚಿತಪಡಿಸಿದ್ದಾರೆ. ನಾಗ ಚೈತನ್ಯ ಶೋಭಿತಾ ಧೂಳಿಪಾಲ ಅವರ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

Naga Chaitanya s Engagement Causes Stir Samantha s Video Goes Viral

ಸಮಂತಾ ಅಭಿಮಾನಿಗಳಿಗೆ ಕೋಪ

ನಾಗ ಚೈತನ್ಯ ನಿಶ್ಚಿತಾರ್ಥ ಮಾಡಿಕೊಂಡಿರುವುದು ಈಗ ಸಮಂತಾ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಮಂತಾ ಅಭಿಮಾನಿಗಳು ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಇಬ್ಬರೂ ದೂರವಾದಾಗ, ಇಬ್ಬರೂ ಮತ್ತೆ ಒಂದಾಗಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ಈಗ ನಾಗ ಚೈತನ್ಯ ಬೇರೆ ನಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ ಅಭಿಮಾನಿಗಳ ನಿರೀಕ್ಷೆ ಸುಳ್ಳಾಗಿದೆ.

ಸಮಂತಾ ಹಳೆ ವಿಡಿಯೋ ವೈರಲ್

ಸಮಂತಾ ಅಭಿಮಾನಿಗಳು ಈಗ ಶೋಭಿತಾ ವಿರುದ್ಧ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶೋಭಿತಾ ಧೂಳಿಪಾಲ ಅವರನ್ನು ಕರ್ಮ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೆಲ್ಲದರ ನಡುವೆ ಸಮಂತಾ ಅವರು ಕಣ್ಣೀರು ಹಾಕುತ್ತಿರುವ ಹಳೆಯ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಸಮಂತಾ ಮಾಜಿ ಪತಿಯ ನಿಶ್ಚಿತಾರ್ಥದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ಕೊಟ್ಟಿಲ್ಲ. ಈ ಬಗ್ಗೆ ಅವರು ಏನಾದರೂ ಪ್ರತಿಕ್ರಿಯೆ ಕೊಡುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಪ್ರೀತಿಸಿ ಮದುವೆಯಾಗಿದ್ದ ಸಮಂತಾ ನಾಗಚೈತನ್ಯ ಅದ್ದೂರಿಯಾಗಿ ಮದುವೆಯಾಗಿದ್ದರು, ಈ ಮದುವೆ ಕೇವಲ 5 ವರ್ಷಗಳಲ್ಲೇ ಮುರಿದುಬಿದ್ದಿತ್ತು.

ಶೋಭಿತಾ ಜೊತೆ ಡೇಟಿಂಗ್‌

2011ರಲ್ಲಿ ಸಮಂತಾ ನಾಗಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದರು. ಇದಾದ ಒಂದು ವರ್ಷದ ಬಳಿಕ ನಾಗ ಚೈತನ್ಯ ಶೋಭಿತಾ ಜೊತೆ ಡೇಟಿಂಗ್ ಮಾಡುತ್ತಿದ್ದರು ಎಂದು ಅಭಿಮಾನಿಗಳು ಅಂದಾಜಿಸಿದ್ದರು. ಇಬ್ಬರು ಜೊತೆಯಿರುವ ಫೋಟೊಗಳನ್ನು ಹಂಚಿಕೊಳ್ಳದೇ ಇದ್ದರೂ, ಒಂದೇ ಸ್ಥಳದ ಫೋಟೊಗಳನ್ನು ಹಂಚಿಕೊಂಡಿದ್ದರು. ಇಬ್ಬರ ನಡುವೆ ಏನೋ ಇದೆ ಎಂದು ಅಭಿಮಾನಿಗಳು ಹೇಳಿದ್ದರೂ, ಇಬ್ಬರೂ ಕೂಡ ಈ ಬಗ್ಗೆ ಬಹಿರಂಗವಾಗಿ ಎಲ್ಲೂ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+