ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ದರ್ಶನ್ ಏನಂದ್ರು?
ಬೆಂಗಳೂರು, ಏಪ್ರಿಲ್ 20: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ. ಆರೋಪಿ ಫಯಾಜ್ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಮಗಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲಿ #JusticeForNeha ಟ್ರೆಂಡಿಂಗ್ ಆಗುತ್ತಿದೆ. ಇದೇ ಪ್ರಕರಣದ ಸಂಬಂಧ ಕನ್ನಡ ನಟ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಸಿರುವ ದರ್ಶನ್, ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ.#JusticeForNehaHiremath pic.twitter.com/g8dxfhPudJ
— Darshan Thoogudeepa (@dasadarshan) April 20, 2024
ನ್ಯಾಯ ಸಿಗಬೇಕು ಎಂದು ಧ್ರುವ ಸರ್ಜಾ
ಸಹೋದರಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ' ಎಂದು ನಟ ಧ್ರುವ ಸರ್ಜಾ ಅವರು 'ಎಕ್ಸ್' (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಮೂಲಕ ಅವರು ನೇಹಾ ಹಿರೇಮಠ್ ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ.
ನೇಹಾ ಹಿರೇಮಠ್‌ಗೆ ನ್ಯಾಯ ಸಿಗಲೇಬೇಕು: ರಕ್ಷಿತಾ ಪ್ರೇಮ್
ನೇಹಾ ಹಿರೇಮಠ್‌ಗೆ ನ್ಯಾಯ ಸಿಗಲೇಬೇಕು. ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? ಕಾಲೇಜಿಗೆ ಹೋಗುವ ಯುವತಿಯರಿಗೂ ಕೂಡ ರಕ್ಷಣೆ ಇಲ್ಲ. ಶೇಮ್ ಶೇಮ್..'' ಎಂದು ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತಾ ಪ್ರೇಮ್ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರೀತಿಸಬೇಕು ಅಂತ ಅದ್ಹೇಗೆ ಒತ್ತಾಯಿಸಲು ಸಾಧ್ಯ? ಪ್ರೀತಿಯನ್ನ ಒಪ್ಪಿಕೊಳ್ಳಲಿಲ್ಲ ಅಂತ ಬರ್ಬರವಾಗಿ ಹುಬ್ಬಳ್ಳಿ ಕಾಲೇಜ್ ಕ್ಯಾಂಪಸ್‌ನಲ್ಲೇ ಹತ್ಯೆ ಮಾಡಿದ್ದಾನೆ. ಅದೆಂಥಾ ಮೈಂಡ್ ಸೆಟ್ ಹೊಂದಿದ್ದಾರೆ ಆ ವಯಸ್ಸಿನ ಹುಡುಗರು? ಪೋಷಕರಾಗಿ ನಮ್ಮ ಗಂಡು ಮಕ್ಕಳಿಗೆ ಕೆಲವು ಬೇಸಿಕ್ ಸಂಗತಿಗಳನ್ನ ನಾವು ಹೇಳಿಕೊಡಲೇಬೇಕು. ಅದನ್ನೆಲ್ಲಾ ಶಾಲಾ ಕಾಲೇಜುಗಳಲ್ಲಿ ಕಲಿಸುವುದಿಲ್ಲ. ಇದನ್ನ ಸಹಿಸಲು ಸಾಧ್ಯವೇ ಇಲ್ಲ. ಶೇಮ್ ಶೇಮ್. ಪೋಷಕರಾಗಿ ನನ್ನ ಹೃದಯ ಛಿದ್ರವಾಗುತ್ತಿದೆ'' ಎಂದು ರಕ್ಷಿತಾ ಪ್ರೇಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇನ್ನೂ ನೇಹಾ ಸಾವಿನ ಕುರಿತು ನಟ ಶಿವರಾಜ್ ಕುಮಾರ್ ಅವರು ಟ್ವೀಟ್ ಮೂಲಕ ನ್ಯಾಯಕ್ಕೆ ಆಗ್ರಹಿಸಿದ್ದಾರೆ. ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಹೇಳಿದ್ದಾರೆ.












Click it and Unblock the Notifications