Rachita Ram: ಸಿನಿಮಾದಲ್ಲಿ ನಟಿಸಲಿಲ್ಲ, ಹಣ ವಾಪಸ್ ಕೊಡಲಿಲ್ಲ: ಡಿಂಪಲ್ ಕ್ವೀನ್ ವಿರುದ್ಧ ಮತ್ತೊಂದು ದೂರು
ಸ್ಯಾಂಡಲ್‌ವುಡ್ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಮೇಲೆ ಗಂಭೀರ ಆರೋಪಗಳು ಕೇಳಿಬರುತ್ತಿವೆ. ನಿನ್ನೆಯಷ್ಟೇ ಸಂಜು ವೆಡ್ಸ್ ಗೀತಾ-2 ಸಿನಿಮಾ ನಿರ್ದೇಶಕ ನಾಗಶೇಖರ್ ಅವರು ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ಗೆ ದೂರು ಕೊಡುವುದಾಗಿ ಹೇಳಿದ್ದರು. ಸಿನಿಮಾ ನಾಯಕಿಯಾಗಿ ಪ್ರಮೋಷನ್‌ಗೆ ಬರಲಿಲ್ಲ ಎಂದು ಆರೋಪಿಸಿದ್ದರು. ಇದೀಗ ರಚಿತಾ ಅವರ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ. ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ಮತ್ತೊಂದು ದೂರು ದಾಖಲಾಗಿದೆ.
ನಿನ್ನೆ ನಿರ್ದೇಶಕ ನಾಗಶೇಖರ್ ಅವರು ರಚಿತಾ ವಿರುದ್ಧ ಆರೋಪ ಮಾಡಿದ್ದರು. ಈಗ ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ಮಾಪಕರೊಬ್ಬರು ನಟಿಯ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ. ಸಿನಿಮಾಗಾಗಿ ಪಡೆದಿದ್ದ ಅಡ್ವಾನ್ಸ್ ಹಣ ವಾಪಸ್ ಕೊಡದೆ ರಚಿತಾ ರಾಮ್ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿನಿಮಾವೊಂದರಲ್ಲಿ ನಟಿಸುವುದಾಗಿ ರಚಿತಾ ಅವರು ಅಡ್ವಾನ್ಸ್ ಪಡೆದಿದ್ದರಂತೆ. ಆದರೆ ಆ ಸಿನಿಮಾದಲ್ಲಿ ನಟಿಸದೆ ಅಡ್ವಾನ್ಸ್ ವಾಪಸ್ ಕೊಡದೇ ಮೋಸ ಮಾಡಿದ್ದಾರೆಂದು ಹಿರಿಯ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಆರೋಪ ಮಾಡಿದ್ದಾರೆ.

ಇದೇ ವಿಚಾರವಾಗಿ 10 ತಿಂಗಳ ಹಿಂದೆಯೂ ಜಗಳ ನಡೆದಿತ್ತು ಎನ್ನಲಾಗಿದೆ. 8 ವರ್ಷಗಳ ಹಿಂದೆ ನಟ ಉಪೇಂದ್ರ ಹಾಗೂ ರಚಿತಾ ರಾಮ್ ಕಾಂಬಿನೇಷನ್‌ನಲ್ಲಿ "ಉಪ್ಪಿ ರುಪ್ಪಿ" ಸಿನಿಮಾ ಮೂಡಿಬರಬೇಕಿತ್ತು. ಈ ಸಿನಿಮಾದಲ್ಲಿ ಉಪೇಂದ್ರ ಜೊತೆ ನಟಿಸಲು ರಚಿತಾ ಮೊದಲಿಗೆ ಒಪ್ಪಿಕೊಂಡಿದ್ದರು. ಆಗ ಈ ಸಿನಿಮಾವನ್ನು ವಿಜಯಲಕ್ಷ್ಮಿ ಅರಸ್ ಅವರ ನಿರ್ಮಾಣ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಈ ಸಿನಿಮಾ ಒಪ್ಪಿಕೊಂಡಿದ್ದ ರಚಿತಾ ಅವರು ಅಡ್ವಾನ್ಸ್ ಆಗಿ ಸುಮಾರು 13 ಲಕ್ಷ ರೂಪಾಯಿ ಪಡೆದಿದ್ದರು ಎನ್ನಲಾಗಿದೆ. ಬಳಿಕ ಚಿತ್ರತಂಡ ಬ್ಯಾಂಕಾಕ್ನಲ್ಲಿ ಶೂಟಿಂಗ್ ಪ್ಲ್ಯಾನ್ ಮಾಡಿತ್ತು. ಆದರೆ ಟಿಕೆಟ್ ಬುಕ್ ಮಾಡಿದ್ರೂ ರಚಿತಾ ರಾಮ್ ಬರಲಿಲ್ಲ, ಕೊನೆಗೆ ಬರ್ತೀನಿ, ಬರ್ತೀನಿ ಎನ್ನುತ್ತಲೇ ಸತಾಯಿಸಿದ್ದರು ಎಂದು ಆರೋಪಿಸಿದ್ದಾರೆ.
ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಅವರು ಕೂಡ ಹದಿನೈದು ದಿನಗಳ ಕಾಲ ನಟಿಗಾಗಿ ಕಾದಿದ್ದರು. ಆದ್ರೆ ರಚಿತಾ ರಾಮ್ ಬರದಿದ್ದರಿಂದ ಹೀರೋ ಭಾಗದ ಶೂಟಿಂಗ್ ಮುಗಿಸಿ ಚಿತ್ರತಂಡ ವಾಪಸ್ ಆಗಿತ್ತು. ರಚಿತಾ ರಾಮ್ನಿಂದ ಸುಮಾರು 1.5 ಕೋಟಿ ರೂಪಾಯಿ ಕಳೆದುಕೊಂಡಿದ್ದೇನೆ. ಅಲ್ಲದೆ ಅಂದಿನಿಂದಲೂ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಡ್ವಾನ್ಸ್ ಹಣ ವಾಪಸ್ ಕೊಡಲಿಲ್ಲ ಎಂಬ ಆರೋಪದ ಮೇರೆಗೆ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ಮತ್ತೊಂದು ದೂರು ದಾಖಲಾಗಿದೆ ಎಂದು ವರದಿಯಾಗಿದೆ. ತಮ್ಮ ಮೇಲಿನ ಈ ಆರೋಪಗಳ ಬಗ್ಗೆ ನಟಿ ರಚಿತಾ ರಾಮ್ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications