ಮನೆ ಖಾಲಿ, ಮೊಬೈಲ್‌ ಸ್ವಿಚ್ಡ್‌ ಆಫ್‌: ಯಾರ ಸಂಪರ್ಕಕ್ಕೂ ಸಿಗದ ನಿವೇದಿತಾ ಗೌಡ ಫ್ಯಾಮಿಲಿ

ಕನ್ನಡದ ಸಂಗೀತ ನಿರ್ದೇಶಕ, ನಟ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ನಡುವೆ ಬಿರುಕು ಮೂಡಿದ್ದು, ದಾಂಪತ್ಯ ಜೀವನ ಮುರಿದುಬಿದ್ದಿದೆ. ಪರಸ್ಪರ ಪ್ರೀತಿಸಿ ಮದುವೆಯಾದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇದೀಗ ದೂರಾಗಿದ್ದಾರೆ. ಇಬ್ಬರ ಒಪ್ಪಿಗೆಯ ಮೇರೆಗೆ ಚಂದನ್ ಶೆಟ್ಟಿ - ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ.

ಕಳೆದ ಒಂದು ವರ್ಷಗಳಿಂದ ಕಾಯ್ದುಕೊಂಡಿದ್ದ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ಜೂನ್‌ 06 ಗುರುವಾರ ವಿಚ್ಛೇದನಕ್ಕಾಗಿ ಶಾಂತಿನಗರದ ಫ್ಯಾಮಿಲಿ ಕೋರ್ಟ್‌ಗೆ ತೆರಳಿದ್ದರು. ಶುಕ್ರವಾರ ಕೋರ್ಟ್ ವಿಚ್ಛೇದನವನ್ನು ಕೂಡ ಮಂಜೂರು ಮಾಡಿದೆ. ಡಿವೋರ್ಸ್‌ ಬಳಿಕ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ತಿಳಿಸಿದ್ದು, ತಮ್ಮ ಖಾಸಗಿ ಜೀವನ ಗೌರವಿಸುವಂತೆ ಮನವಿ ಮಾಡಿದ್ದರು.

Nivedita Gowda Family Who Cannot Be Contacted By Anyone After Divorce News Viral

ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ವಿಚ್ಛೇದನ ಸುದ್ದಿ ವೈರಲ್‌ ಆಗುತ್ತಿದ್ದಂತೆ ನಿವೇದಿತಾ ಗೌಡ ಅವರ ಮನೆ ಖಾಲಿಯಾಗಿದೆ. ಮೈಸೂರಿನ ರಾಜರಾಜೇಶ್ವರಿ ನಗರದಲ್ಲಿ ನಿವೇದಿತಾ ಗೌಡ ಫ್ಯಾಮಿಲಿ ವಾಸವಿದ್ದು, ಘಟನೆ ಬಳಿಕ ಕುಟುಂಬಸ್ಥರು ಮನೆಯಿಂದ ಹೊರಗೆ ಹೋಗಿದ್ದಾರೆ. ಮಾಹಿತಿ ಪ್ರಕಾರ ಗುರುವಾರದಿಂದ ಮನೆಗೆ ಬೀಗ ಹಾಕಿದ್ದಾರೆ ಎನ್ನಲಾಗುತ್ತಿದೆ.

ನಿವೇದಿತಾ ತಂದೆ ರಮೇಶ್, ತಾಯಿ‌ ಹೇಮ ಗುರುವಾರ ಮಧ್ಯಾಹ್ನದವರಗೆ ಮನೆಯಲ್ಲಿದ್ದರು. ಆದರೆ ಮಧ್ಯಾಹ್ನದ ಬಳಿಕ ಮನೆಗೆ ಬೀಗ ಹಾಕಿದ್ದಾರೆ. ಸದ್ಯ ನಿವೇದಿತಾ ಕುಟುಂಬದವರು ಮಾಧ್ಯಮದವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಅಲ್ಲದೇ ಆಪ್ತರ ಕರೆಗೂ ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಮೊಬೈಲ್‌ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Nivedita Gowda Family Who Cannot Be Contacted By Anyone After Divorce News Viral

ಖಾಸಗಿ ಜೀವನ ಗೌರವಿಸುವಂತೆ ಮನವಿ

ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ವಿಚ್ಛೇದನ ಸುದ್ದಿ ವೈರಲ್‌ ಆಗುತ್ತಿದ್ದಂತೆ ತಮ್ಮ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಈ ಮೂಲಕ ತಾವು ದೂರಾದ ಬಗ್ಗೆ ಅಧೀಕೃತವಾಗಿ ತಿಳಿಸಿದ್ದರು. 'ಈ ದಿನ, ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನ ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೆವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು' ಎಂದು ನಿವೇದಿತಾ ಗೌಡ ಇನ್ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ತಿಳಿಸಿದ್ದರು. ಇದೇ ರೀತಿ ಚಂದನ್‌ ಶೆಟ್ಟಿ ಕೂಡ ಪೋಸ್ಟ್‌ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+