Bigg Boss Kannada: ತೆರೆ ಮರೆಯಲ್ಲಿ ಭರ್ಜರಿ ಸಿದ್ಧತೆ: ಬಿಗ್‌ಬಾಸ್‌ಗೆ ಹೋಗ್ತಾರಾ ಪಾರು?
ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್. ಲಕ್ಷಾಂತರ ಪ್ರೇಕ್ಷಕರ ಮೆಚ್ಚಿನ ಶೋಗೆ ತೆರೆ ಮರೆಯಲ್ಲಿ ಸಿದ್ಧತೆ ಆರಂಭವಾಗಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಬೇರೆ ಬೇರೆ ಕ್ಷೇತ್ರಗಳ ವಿಭಿನ್ನ ಮನಸ್ಥಿತಿಯ 16 ಜನರನ್ನು ಒಂದೇ ಮನೆಯಲ್ಲಿ ಇರಿಸಿ ನೂರು ದಿನಗಳನ್ನು ದಾಟಿದ ಒಬ್ಬ ವ್ಯಕ್ತಿಗೆ ಬಿಗ್ ಬಾಸ್ ಪಟ್ಟ ನೀಡುವುದೇ ಈ ಶೋನ ಅಸಲಿ ಗೇಮ್.
ಈಗಾಗಲೇ ಕನ್ನಡದಲ್ಲಿ 10 ಸೀಸನ್‌ಗಳನ್ನು ಮುಗಿಸಿರುವ ಬಿಗ್ ಬಾಸ್ ರಿಯಾಲಿಟಿ ಶೋ ಸೀಸನ್ 11ರ ಸಿದ್ಧತೆಯಲ್ಲಿದೆ. ಇದೇ ಅಕ್ಟೋಬರ್‌ನಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 11 ಪ್ರಸಾರ ಶುರುವಾಗಲಿದೆ. ಹೀಗಾಗಿ ತೆರೆ ಮರೆಯಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಬಿಗ್ಬಾಸ್ ತಂಡ ಸ್ಪರ್ಧಿಗಳ ಪಟ್ಟಿ ಸಿದ್ಧಪಡಿಸುತ್ತಿದೆಯಂತೆ.

ಈ ಬಾರಿ ಬಿಗ್ ಬಾಸ್‌ನಲ್ಲಿ ಹೆಚ್ಚಾಗಿ ಕಿರುತೆರೆ ಕಲಾವಿದರು ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟಿವ್ ಇರುವವರನ್ನು ಸ್ಪರ್ಧಿಗಳ ಪಟ್ಟಿಯಲ್ಲಿ ಸೇರಿಸಲಾಗುತ್ತಿದ್ದು, ಈ ಪೈಕಿ ಕಿರುತೆರೆ ಕಲಾವಿದೆ ಪಾರು ಖ್ಯಾತಿಯ ಮೋಕ್ಷಿತಾ ಪೈ ಬಿಗ್‌ಬಾಸ್‌ಗೆ ಬರಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದೆ.
ಪಾರು ಧಾರಾವಾಹಿ ಮುಕ್ತಾಯದ ನಂತರ ಮೋಕ್ಷಿತಾ ಯಾವುದೇ ಪ್ರಾಜೆಕ್ಟ್‌ಗಳನ್ನು ಒಕೆ ಮಾಡದೇ ಕುಟುಂಬಸ್ಥರ ಜೊತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮೋಕ್ಷಿತಾಗೆ ಬಿಗ್ಬಾಸ್ ಮನೆ ಪ್ರವೇಶಕ್ಕೆ ಆಹ್ವಾನ ಹೋಗಿದ್ದು, ಅವರು ಕೂಡ ದೊಡ್ಮನೆಗೆ ಬರಲು ಸಜ್ಜಾಗುತ್ತಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಪ್ರಶ್ನೆಗೆ ಸದ್ಯ ಮೋಕ್ಷಿತಾ ಪೈ ನೋ ಎಂದು ಉತ್ತರಿಸಿದ್ದಾರೆ. ನನಗೆ ಯಾವುದೇ ಕರೆ ಬಂದಿಲ್ಲ. ಯಾರೂ ಕೂಡ ಈ ಬಗ್ಗೆ ಚರ್ಚೆ ಮಾಡಿಲ್ಲ. ಹೀಗಾಗಿ ಇದೆಲ್ಲಾ ಕೇವಲ ಊಹಾಪೋಹ ಎಂದು ಮೋಕ್ಷಿತಾ ಸ್ಪಷ್ಟನೆ ನೀಡಿದ್ದಾರೆ.
ಇನ್ನು ಈ ಬಾರಿಯ ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.












Click it and Unblock the Notifications