Vijayalakshmi vs Pavithra : ಮೌನ ನನ್ನ ದೌರ್ಬಲ್ಯವಲ್ಲ, ವಿಜಯಲಕ್ಷ್ಮಿ ಪೋಸ್ಟ್ ಬೆನ್ನಲ್ಲೇ ಪವಿತ್ರಾ ಗೌಡ ಹೀಗೆ ಹೇಳಿದ್ಯಾಕೆ?
ರೇಣುಕಾಸ್ವಾಮಿ ಕೊನೆ ಪ್ರಕರಣದ ಕುರಿತು ಸುಪ್ರೀಕೋರ್ಟ್ ಹೇಳಿಕೆ ಕುರಿತು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಒಂದು ಪೋಸ್ಟ್ ಹಾಕಿದ್ದರು. ಆ ಪೋಸ್ಟ್ ಬಳಿಕ ದರ್ಶನ್ ಫ್ಯಾನ್ಸ್ ಹಾಗೂ ರಮ್ಯಾ ನಡುವೆ ವಾರ್ ಜೋರಾಗಿತ್ತು. ದರ್ಶನ್ ಫ್ಯಾನ್ಸ್ ವಿರುದ್ದ ತಿರುಗಿಬಿದ್ದದ್ದ ನಟಿ ರಮ್ಯಾ ಅವರು ದೂರು ನೀಡುವ ಮೂಲಕ ಬಿಸಿ ಮುಟ್ಟಿಸಿದ್ರು. ಇದರ ನಡುವೆ ಅತ್ತ ರಕ್ಷಿತಾ, ಇತ್ತ ರಮ್ಯಾ, ಇನ್ನೊಂದು ಕಡೆ ಶಿವಣ್ಣ, ಮತ್ತೊಂದು ಕಡೆ ಪ್ರಥಮ್ ಅಂತ ದರ್ಶನ್ ಸುತ್ತ ಹತ್ತು ಹಲವು ಪೋಸ್ಟ್ ಹರಿದಾಡುತ್ತಿದೆ. ಈ ಮಧ್ಯೆ ವಿಜಯಲಕ್ಷ್ಮಿ ಅವರು ಕೂಡಾ ಒಂದು ಸ್ಟೋರಿ ಹಾಕಿರುವುದು ಭಾರೀ ವೈರಲ್ ಆಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾದ ಬಳಿಕ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಹಲವು ದೇವಸ್ಥಾನಗಳಿಗೆ ಭೇಟಿ ಕೊಟ್ಟಿ ವಿಶೇಷ ಪೂಜೆಯನ್ನ ಮಾಡಿಸುವ ಮೂಲಕ ಹರಕೆ ತೀರಿಸಿದ್ದಾರೆ. ಇನ್ನೂ ದರ್ಶನ್ ಅವರ ವಿಜಯಲಕ್ಷ್ಮಿ ಅವರು ತಮ್ಮ ಪತಿಯೊಂದಿಗೆ ಕಾಮಾಕ್ಯ ದೇವಿ ದರ್ಶನ ಪಡೆದು ಬಂದ ಫೋಟೋ ಹಾಕಿದ್ದರು.ಇದರ ಬೆನ್ನಲ್ಲೇ ಪವಿತ್ರಾ ಗೌಡ ಕೂಡಾ ಇನ್ಸ್ಟಾಗ್ರಾಮ್ ಸ್ಟೋರಿ ಹಾಕಿದ್ದಾರೆ. ಮನುಷ್ಯರು ಬಣ್ಣ ಬದಲಾಯಿಸಿದರೇನು? ರಾಯರು ನಮ್ಮ ಜೀವನವನ್ನೇ ಬದಲಾಯಿಸುತ್ತಾರೆ ಎಂದು ಬರೆದಿದ್ದಾರೆ.

ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ಅನ್ಯೋನ್ಯತೆಯಿಂದ ಪವಿತ್ರಾ ಗೌಡ ಅವರ ನೆಮ್ಮದಿಗೆ ಕೊಳ್ಳಿ ಬಿದ್ದಿದೆಯಾ ಗೊತ್ತಿಲ್ಲ. ಆದರೆ.. ಅವರ ಇತ್ತೀಚಿನ ಸೋಶಿಯಲ್ ಮೀಡಿಯಾ ಬರಹ ಇಂತಹದ್ದೊಂದು ಅನುಮಾನ ಮೂಡಿಸಿದೆ. ಯಾಕೆಂದರೆ .. ವಿಜಯಲಕ್ಷ್ಮಿ ಅವರ ಪತಿಯೊಂದಿಗೆ ಕಾಮಕ್ಯ ದೇವಿ ಆವರಣದಲ್ಲಿ ತಮ್ಮ ಪತಿ ಜೊತೆ ತೆಗೆಸಿಕೊಂಡ ಫೋಟೊವನ್ನು ಹಂಚಿಕೊಂಡಿದ್ದಾರೆ. "ಎಷ್ಟೇ ಜನ ನಿಮ್ಮನ್ನು ಕೆಳಗೆ ಬೀಳಿಸಲು ಪ್ರಯತ್ನಿಸಿದರೂ ಮೇಲಿರುವ ದೇವರು ನಿಮ್ಮ ಕೈ ಬಿಡುವುದಿಲ್ಲ ಎಂದು ವಿಜಯಲಕ್ಷ್ಮಿ ಕ್ಯಾಪ್ಷನ್ ಕೂಡ ಕೊಟ್ಟಿದ್ದಾರೆ.
ವಿಜಯಲಕ್ಷ್ಮಿ ಕಾಮಾಕ್ಯ ದೇವಿ ದರ್ಶನ ಪಡೆದು ಬಂದ ಫೋಟೋ ಹಾಕಿದ ಬೆನ್ನಲ್ಲೇ ಪವಿತ್ರಾ ಗೌಡ ಕೂಡ ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. 'ಮನುಷ್ಯರು ಬಣ್ಣ ಬದಲಾಯಿಸಿದರೇನು.. ರಾಯರು ನಮ್ಮ ಜೀವನವನ್ನೇ ಬದಲಾಯಿಸುತ್ತಾರೆ..' ಎಂದು ಬರೆದುಕೊಂಡಿದ್ದಾರೆ. ಇಷ್ಟೇ ಅಲ್ಲ ''ನನ್ನ ಮೌನ ನನ್ನ ಬಲಹೀನತೆಯಲ್ಲ, ಅದು ದೇವರ ನ್ಯಾಯದ ಮೇಲೆ ಇರುವ ನಂಬಿಕೆ'' ಎಂದು ಕ್ಯಾಪ್ಷನ್ ನೀಡಿದ್ದಾರೆ. ಪವಿತ್ರಾ ಗೌಡ ಅವರ ಈ ಪೋಸ್ಟ್ ಇದೀಗ ಹಲವರಲ್ಲಿ ಕುತೂಹಲ ಕೆರಳಿಸಿದೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರನ್ನು ಗುರಿಯಾಗಿಸಿಕೊಂಡು ಪವಿತ್ರಾ ಗೌಡ ಈ ಪೋಸ್ಟ್ ಹಂಚಿಕೊಂಡಿರಬಹುದಾ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ.
ಇನ್ನು ನಟಿ ಪವಿತ್ರಾ ಗೌಡ ಗುರುರಾಯರ ಪರಮ ಭಕ್ತೆ. ಪವಿತ್ರಾ ಗೌಡ ಅವರು ಜೈಲಿನಿಂದ ಬಿಡುಗಡೆಯಾದ ನಂತರ ಹಲವು ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆಯನ್ನ ಸಲ್ಲಿಸಿದ್ದಾರೆ. ನಿನ್ನೆ ಗುರುವಾರವಾದ ಹಿನ್ನೆಲೆ ಪವಿತ್ರಾ ಗೌಡ ರಾಘವೇಂದ್ರ ಸ್ವಾಮಿಗಳ ಭಾವಚಿತ್ರವನ್ನು ಹಂಚಿಕೊಂಡಿದ್ದಾರೆ. ಆದರೆ ಅವರು ಬರೆದುಕೊಂಡ ಮೌನ ಮತ್ತು ದೌರ್ಬಲ್ಯದ ಸಾಲು ಈಗ ಹಲವರಲ್ಲಿ ಪ್ರಶ್ನೆಯನ್ನು ಹುಟ್ಟು ಹಾಕಿದೆ.












Click it and Unblock the Notifications