Pavithra Gowda: ಪವಿತ್ರಾ ಗೌಡ ಯಶಸ್ಸಿನ ಪಾಠದ ಪೋಸ್ಟರ್ ಭಾರೀ ವೈರಲ್‌

Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಇತ್ತೀಚೆಗಷ್ಟೇ ಜಾಮೀನಿ ಮೇಲೆ ರಿಲೀಸ್‌ ಆಗಿದ್ದಾರೆ. ಇದೀಗ ಅವರು ಮೊದಲಿನಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು, ಪೋಸ್ಟರ್‌ಗಳನ್ನು ಹಂಚಿಕೊಳ್ಳುತ್ತಲಿದ್ದಾರೆ. ಇದೀಗ ಮತ್ತೊಂದು ಯಶಸ್ಸಿನ ಟಿಪ್ಸ್‌ ಬಗ್ಗೆ ತಮ್ಮ ಇನ್ಸ್ಟಾದಲ್ಲಿ ಬರೆದುಕೊಂಡಿದ್ದು, ಇದು ಭಾರೀ ವೈರಲ್‌ ಆಗುತ್ತಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನುಳಿದವರು ಕೂಡ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಅತ್ತ ನಟ ದರ್ಶನ್‌ ಮತ್ತೆ ಡೆವಿಲ್‌ ಸಿನಿಮಾ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದ್ದರೆ, ಇತ್ತ ಸ್ನೇಹಿತೆ ಪವಿತ್ರಾ ಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ ತಮ್ಮ ಇನ್ಸ್ಟಾ ಖಾತೆಯಲ್ಲಿ ಹೊಸ ಹೊಸ ಪೋಸ್ಟರ್‌ಗಳನ್ನು ಸಹ ಹಂಚಿಕೊಂಡು ಗಮನ ಸೆಳೆಯುತ್ತಿದ್ದಾರೆ.

Pavithra Gowda s success lines poster goes huge viral

ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪವಿತ್ರಾ ಗೌಡ ಜೀವನದಲ್ಲಿ ಯಶಸ್ವಿಯಾಗಲು ಸಲಹೆಯೊಂದನ್ನು ಕೊಟ್ಟಿದ್ದಾರೆ. ಫ್ಯಾಷನ್ ಡಿಸೈನರ್ ಆಗಿ ತಮ್ಮದೇ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪವಿತ್ರಾ ಫ್ಯಾನ್ಸ್‌ಗೆ ಯಶಸ್ಸು ಕುರಿತು ಟಿಪ್ಸ್ ನೀಡಿದ್ದಾರೆ.

ನಾನೊಂದು ವ್ಯವಹಾರ ಆರಂಭಿಸಿರುವುದಕ್ಕೆ ನಿಜಕ್ಕೂ ಅದೃಷ್ಟಶಾಲಿ. ಅದು ನನಗೆ ಆರ್ಥಿಕ, ಬೌದ್ಧಿಕ ಮತ್ತು ವೈಯಕ್ತಿಕವಾಗಿ ತೃಪ್ತಿಕರವಾಗಿ ಅಷ್ಟೇ ಇಲ್ಲ. ನಾನು ಉತ್ಸಾಹದಿಂದ ಬದುಕಲು ಅವಕಾಶ ಮಾಡಿಕೊಟ್ಟಿದೆ. ಜೀವನದಲ್ಲಿ ಯಶಸ್ಸು ಕಾಣಲು ಮೊದಲು ಮಾಡಬೇಕಾದ ಕೆಲಸವೆಂದರೆ ನಿಮ್ಮ ಕೆಲಸವನ್ನು ಪ್ರೀತಿಸುವುದು ಎಂದು ತಮ್ಮಾ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಪೋಸ್ಟ್‌ಗೆ ಇದುವರೆಗೂ 14,487 ಮೆಚ್ಚುಗೆಗಳು ಬಂದಿವೆ. ಇನ್ನು ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಅವರು ರೆಡ್ ಕಾರ್ಪೆಟ್ ಸ್ಟುಡಿಯೋ ಬೂಟಿಕ್ ಅನ್ನು ಮತ್ತೆ ಆರಂಭ ಮಾಡಿ ತಮ್ಮ ವೃತ್ತಿಯಲ್ಲಿ ತೊಡಗಿಕೊಂಡಿದ್ದು, ಅದರಲ್ಲೂ ಬ್ಯೂಸಿಯಾಗಿದ್ದಾರೆ. ಜೊತೆಗೆ ಅವರು ದೈವಭಕ್ತೆ ಆದ್ದರಿಂದ ಆಗಾಗ ದೇವಸ್ಥಾನಗಳಿಗೂ ಭೇಟಿ ನೀಡುತ್ತಲಿರುತ್ತಾರೆ.

ಶರ್ಮಿಳಾ ಹೇಳಿದ್ದೇನು?: ಶರ್ಮಿಳಾ ಮಂಡ್ರೆ ಅವರು ನಟ ದರ್ಶನ್‌ ಜೊತೆ ನವಗ್ರಹ ಚಿತ್ರದಲ್ಲಿ ನಟಿಸಿದ್ದರು. ಇದೀಗ ಮತ್ತೆ ಅವರ ಜೊತೆ 17 ವರ್ಷಗಳ ನಂತರ ಡೆವಿಲ್ ಸಿನಿಮಾನದಲ್ಲಿ ನಟನೆ ಮಾಡುತ್ತಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನದ ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಪ್ರಕಾರ, ಸಮಯ ಕಳೆದಿಲ್ಲ ಎಂಬಂತೆ ಭಾಸವಾಗುತ್ತಿದೆ.

2008ರಲ್ಲಿ ನವಗ್ರಹದಿಂದ ಹಿಡಿದು 2025ರ ಡೆವಿಲ್‌ವರೆಗೆ, ಒಂದೇ ರೀತಿ ಭಾಸವಾಗುತ್ತಿದೆ. 10 ಅಥವಾ 15 ವರ್ಷಗಳು ಕಳೆದಿದ್ದರೂ ಕೂಡ ಜನರು ಮತ್ತೆ ಕೆಲವು ಪಾತ್ರಗಳ ಸಂಯೋಜನೆಯನ್ನು ನೋಡಲು ಇಷ್ಟಪಡುತ್ತಾರೆ. ದರ್ಶನ್ ಜೊತೆ ತೆರೆ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷ ಆಗಿದೆ. ಇದು ವಿಶೇಷ ಎನಿಸುತ್ತದೆ. ಡೆವಿಲ್ ಚಿತ್ರದ ಪಾತ್ರವರ್ಗ ಮತ್ತು ಕಥೆಯು ವಿಶಿಷ್ಟವಾದದ್ದನ್ನು ಹೊಂದಿದೆ. ಆದ್ದರಿಂದ ಚಿತ್ರದ ಭಾಗವಾಗಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಪ್ರಕಾಶ್ ವೀರ್ ಜೊತೆಗೆ ಶರ್ಮಿಳಾ ಮಾಂಡ್ರೆ ಅವರ ಮೊದಲ ಸಹಯೋಗ ಇದಾಗಿದೆ. ನಾವು ಯಾವಾಗಲೂ ಒಟ್ಟಿಗೆ ಕೆಲಸ ಮಾಡುವ ಬಗ್ಗೆ ಮಾತನಾಡುತ್ತಿದ್ದೆವು. ಆದರೆ, ಕೆಲವು ಕಾರಣಗಳಿಂದ ಇದುವರೆಗೆ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ಕೊನೆಗೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಚಿತ್ರದಲ್ಲಿ ನಾನೊಬ್ನ ರಾಜಕಾರಣಿಯಾಗಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ. ಈ ಪಾತ್ರವನ್ನು ಮಾಡಬೇಕು ಎಂದು ತುಂಬಾ ದಿನಗಳ ಆಸೆಯಾಗಿತ್ತು. ಇದು ಪ್ರಭಾವ ಬೀರುವ ಪಾತ್ರ ಮತ್ತು ಅದನ್ನು ಪರದೆಯ ಮೇಲೆ ಜೀವಂತಗೊಳಿಸಲು ನಾನು ಉತ್ಸುಕಳಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್ 8ರಂದು ನವಗ್ರಹ ಚಿತ್ರವು ಚಿತ್ರಮಂದಿರಗಳಲ್ಲಿ ರೀ ರಿಲೀಸ್ ಮಾಡಲಾಗಿತ್ತು. ಇದೊಂದು ಅವಾಸ್ತವಿಕ ಅನುಭವ ಆಗಿತ್ತು ಮತ್ತು ಚಿತ್ರದ ಸುತ್ತಲಿನ ಕ್ರೇಜ್ ಅದ್ಭುತ ಆಗಿತ್ತು. ನಾನು ಕೂಡ ಚಿತ್ರಮಂದಿರಗಳಿಗೆ ಭೇಟಿ ನೀಡಿದ್ದೆ. ಇದು ನಿಜವಾಗಿಯೂ ಉತ್ತಮವಾಗಿತ್ತು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+