Pawan Kalyan: ಸಿಂಗಾಪುರ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಂಭೀರ ಗಾಯ
ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಮಗ ಮಾರ್ಕ್ ಶಂಕರ್, ಸಿಂಗಾಪೂರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದಾರೆ. ಮಾರ್ಕ್ ಶಂಕರ್ ಓದುತ್ತಿದ್ದ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮಾರ್ಕ್ ಶಂಕರ್ ಬೆಂಕಿಯಲ್ಲಿ ಸಿಲುಕಿದ್ದಾರೆ. ಈ ವೇಳೆ ಬೆಂಕಿ ಅವಘಡದಲ್ಲಿ ಅವರ ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ಹೋದ ಹಿನ್ನೆಲೆ ತೀವ್ರ ಅನಾರೋಗ್ಯಕ್ಕಿಡಾಗಿದ್ದಾರೆ.
ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಪುತ್ರ ಗಾಯಗೊಂಡಿದ್ದು, ಅಧಿಕೃತ ಪ್ರವಾಸವನ್ನು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮೊಟಕುಗೊಳಿಸಿದ್ದಾರೆ. ಘಟನೆಯಲ್ಲಿ ಪವನ್ ಕಲ್ಯಾಣ ಅವರ ಪುತ್ರ ಮಾರ್ಕ್ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅವರು ಸಿಂಗಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕಲ್ಯಾಣ್ ಅವರ ಜನ ಸೇನಾ ಪಕ್ಷ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಎಂಟು ವರ್ಷದ ಬಾಲಕನ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ. ಹೊಗೆಯನ್ನು ಉಸಿರಾಡಿದ್ದರಿಂದ ಉಸಿರಾಟದ ತೊಂದರೆಯೂ ಉಂಟಾಗಿದೆ.
ಮಾರ್ಕ್ ಶಂಕರ್ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬೆಂಕಿಗೆ ಕಾರಣವೇನೆಂದು ಇಲ್ಲಿಯವರೆಗೆ ತಿಳಿದಿಲ್ಲ. ಇನ್ನೂ ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೇವಾ ಅವರಿಗೆ ಇಬ್ಬರು ಮಕ್ಕಳು ಮಾರ್ಕ್ ಶಂಕರ್ ಮತ್ತು ಪೊಲೇನಾ ಅಂಜನಾ. ಈ ಇಬ್ಬರೂ ಸಹ ಸಿಂಗಪುರದಲ್ಲಿ ನೆಲೆಸಿದ್ದಾರೆ. ಅಲ್ಲಿಯೇ ಶಾಲೆ ಕಲಿಯುತ್ತಿದ್ದಾರೆ. ಪವನ್ ಕಲ್ಯಾಣ ಅವರು ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಆಂಧ್ರಪ್ರದೇಶದಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ವಾರಕ್ಕೆ ಒಮ್ಮೆ ಸಿಂಗಪುರಕ್ಕೆ ಹೋಗಿ ಮಕ್ಕಳು, ಕುಟುಂಬವನ್ನು ಭೇಟಿ ಆಗಿ ಬರುತ್ತಾರೆ ಎನ್ನಲಾಗುತ್ತಿದೆ.
ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಪುತ್ರ ತೀವ್ರ ಗಾಯಗೊಂಡ ಹಿನ್ನಲೆ ಇದೀಗ ಪವನ್ ಕಲ್ಯಾಣ್ ತಮ್ಮ ಈ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಇಂದು ಕುರಿಡಿ ಗ್ರಾಮದ ಬುಡಕಟ್ಟು ಜನಾಂಗದವರನ್ನು ಭೇಟಿ ಮಾಡಿ ಆ ನಂತರ ಅಲ್ಲಿರುವ ದೇವಸ್ಥಾನಕ್ಕೆ ತೆರಳಲಿರುವ ಪವನ್ ಕಲ್ಯಾಣ್ ಆ ನಂತರ ಸಿಂಗಾಪೂರಗೆ ತೆರಳಲಿದ್ದಾರೆ. ಇನ್ನು ಕುರಿಡಿ ಗ್ರಾಮದ ನಂತರ ಪವನ್ ಕಲ್ಯಾಣ್ ವಿಶಾಖಪಟ್ಟಣಂನಲ್ಲಿರುವ ಸ್ಟೀಲ್ ಪ್ಲಾಂಟ್‌ಗೆ ಭೇಟಿ ನೀಡಬೇಕಿತ್ತು. ಮುಂದಿನ ಮೂರು ದಿನಗಳ ಕಾಲ ವಿಶಾಖಪಟ್ಟಣಂನಲ್ಲಿ ಇರಬೇಕಿತ್ತು. ಆದರೆ ತಮ್ಮ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.












Click it and Unblock the Notifications