ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಮಾಡಿದವರು ಅರೆಸ್ಟ್! ಶುರುವಾಯ್ತು ಮಾರಿಹಬ್ಬ
ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ಸ್ ಮಾಡಿದ್ದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರವಾಗಿ ಧ್ವನಿ ಎತ್ತಿದ್ದ ರಮ್ಯಾ ಅವರು ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಪೋಸ್ಟ್ ಹಂಚಿಕೊಂಡಿದ್ದರು. ಇದಾದ ಬಳಿಕ ನಟ ದರ್ಶನ್ ಅಭಿಮಾನಿಗಳು ರಮ್ಯಾ ಅವರಿಗೆ ಕೆಟ್ಟ ಪದಗಳನ್ನು ಬಳಸಿ ಕಾಮೆಂಟ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಸ್ಕ್ರೀನ್‌ಶಾಟ್‌ಗಳನ್ನು ರಮ್ಯಾ ಮತ್ತೆ ಶೇರ್ ಮಾಡಿದ್ದಲ್ಲದೆ, ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮೀಷನರ್ ಅವರಿಗೆ ಖುದ್ದಾಗಿ ದೂರು ನೀಡಿದ್ದರು.
ದೂರು ದಾಖಲಾದ ಬೆನ್ನಲ್ಲೇ ರಮ್ಯಾ ಅವರಿಗೆ ಕೆಟ್ಟ ಕಾಮೆಂಟ್ ಮಾಡಿದ್ದ ಸೋಷಿಯಲ್ ಮೀಡಿಯಾ ಖಾತೆಗಳ ಜಾಡು ಹಿಡಿದಿದ್ದ ಪೊಲೀಸರು ಈ ಪೈಕಿ ಕೆಲವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಮಂದಿ ಕೆಟ್ಟ ಕಾಮೆಂಟ್ಸ್ ಮಾಡಿದ್ದು, ಅದರಲ್ಲಿ ಅತಿ ಕೆಟ್ಟದಾಗಿ ಕಾಮೆಂಟ್ ಹಾಕಿದ್ದವರ ಸ್ಕ್ರೀನ್‌ಶಾಟ್‌ಗಳನ್ನು ರಮ್ಯಾ ಹಂಚಿಕೊಂಡಿದ್ದರು. ದೂರಿನೊಂದಿಗೆ ರಮ್ಯಾ ಅವರು ಕೆಟ್ಟ ಕಾಮೆಂಟ್ಸ್ ಮಾಡಿದ್ದವರ ಮಾಹಿತಿ ನೀಡಿದ್ದರು. ದೂರು ಆಧರಿಸಿ ಸಿಸಿಬಿ ಸೈಬರ್ ಪೊಲೀಸರು ಸದ್ಯ ಹಲವರನ್ನು ಅರೆಸ್ಟ್ ಮಾಡಿದ್ದು, ಉಳಿದವರಿಗೆ ಢವಢವ ಶುರುವಾಗಿದೆ.

ಐಪಿ ಅಡ್ರೆಸ್ ಪತ್ತೆ ಹಚ್ಚಿ ಬಲೆ
ಬಳ್ಳಾರಿ, ಕೋಲಾರ, ಚಿತ್ರದುರ್ಗ ಮೂಲದವರನ್ನು ಅರೆಸ್ಟ್ ಮಾಡಿರುವುದಾಗಿ ವರದಿಯಾಗಿದೆ. ಈ ಮೂವರು ಕೂಡ ನಟಿ ರಮ್ಯಾ ಅವರಿಗೆ ಅಶ್ಲೀಲ ಕಾಮೆಂಟ್ ಹಾಕಿದ್ದರು. ದೂರು ಆಧರಿಸಿ ಸೋಷಿಯಲ್ ಮೀಡಿಯಾ ಬಳಕೆದಾರರ ಐಪಿ ಅಡ್ರೆಸ್ ಆಧರಿಸಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವರ ಮೇಲೆ ಆರೋಪವಿದ್ದು, ಎಲ್ಲರಿಗೆ ಬಿಸಿ ಮುಟ್ಟಿಸುವ ಕೆಲಸ ಶುರುವಾಗಿದೆ.
ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‍ಗಳ ಹೆಸರು ಉಲ್ಲೇಖಿಸಿದ್ದರು. ಮತ್ತೆ ಐದು ಅಕೌಂಟ್‍ಗಳನ್ನು ಸೇರಿ 48 ಖಾತೆಗಳ ಮೇಲೆ ದೂರು ದಾಖಲಾಗಿತ್ತು. ಎಫ್‍ಐಆರ್ ದಾಖಲಾದ ಸುದ್ದಿ ತಿಳಿದ ತಕ್ಷಣ ಹಲವು ಖಾತೆಗಳು ಡಿಲೀಟ್ ಆಗಿದ್ದವು. ಆದರೆ ಪೊಲೀಸರು ಈ ಎಲ್ಲರ ಐಪಿ ಅಡ್ರೆಸ್‍ಗಳ ಮಾಹಿತಿ ಕಲೆಹಾಕಿ ಬಂಧಿಸುವ ಕೆಲಸ ಮಾಡುತ್ತಿದ್ದಾರೆ. ಬಹುತೇಕರು ಕಾಮೆಂಟ್‌ಗಳಲ್ಲಿ ದರ್ಶನ್ ಪರ ಮಾತನಾಡಿದ್ದರು, ಡಿಬಾಸ್ ಡಿಬಾಸ್ ಎಂದು ಉಲ್ಲೇಖಿಸಿದ್ದರಿಂದ ಎಲ್ಲರೂ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಲಾಗಿದೆ.
ನಟಿ ರಮ್ಯಾ ಅವರು ನ್ಯಾಯದ ಪರ ಧ್ವನಿ ಎತ್ತಿದ್ದಕ್ಕೆ ದರ್ಶನ್ ಅಭಿಮಾನಿಗಳು ನಟಿಯ ವಿರುದ್ಧ ಕೆರಳಿ ಕೆಂಡವಾಗಿದ್ದರು. ಆದರೆ ನಟಿಯನ್ನು ವೈಯಕ್ತಿಕವಾಗಿ ನಿಂದಿಸುವುದು ಶುರುವಾಗಿತ್ತು. ಆರಂಭದಲ್ಲಿ ಇದನ್ನು ರಮ್ಯಾ ಅವರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ್ದರು. ಇದರಿಂದ ಮನನೊಂದು ರಮ್ಯಾ ದೂರು ನೀಡಿದ್ದರು. ಅಲ್ಲದೆ ನಟ ದರ್ಶನ್ ಅವರು ಇಂತಹ ಅಭಿಮಾನಿಗಳಿಗೆ ಬುದ್ಧಿ ಹೇಳಬೇಕಿತ್ತು ಎಂದಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications