Darshan Thoogudeepa: ಪೊಲೀಸರಿಗೆ ಸಿಕ್ಕಿದೆ ರೇಣುಕಾಸ್ವಾಮಿ-ಪವಿತ್ರಾ ಗೌಡ ಇನ್‌ಸ್ಟಾಗ್ರಾಂ ಮೆಸೇಜ್! ದರ್ಶನ್‌ಗೆ ಮತ್ತಷ್ಟು ಸಂಕಷ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಮಂದಿ ಸದ್ಯ ಜೈಲಿನಲ್ಲಿದ್ದಾರೆ. ಆಗಸ್ಟ್ 14ರವರೆಗೆ ಮತ್ತೆ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿ ಕೋರ್ಟ್ ಆದೇಶ ಕೊಟ್ಟಿದೆ. ಮನೆ ಊಟ ಪಡೆಯಲು ದರ್ಶನ್‌ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಪೊಲೀಸರು ದರ್ಶನ್ ಮತ್ತು ಗ್ಯಾಂಗ್‌ಗೆ ಶಾಕ್ ಕೊಟ್ಟಿದ್ದಾರೆ.

ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಎಷ್ಟು ಹುಡುಕಿದರೂ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗದ ಕಾರಣ, ಪೊಲೀಸರು ರೇಣುಕಾಸ್ವಾಮಿ ಬಳಸುತ್ತಿದ್ದ ಮೊಬೈಲ್ ಸಂಖ್ಯೆಯ ಡೂಪ್ಲಿಕೇಟ್‌ ಸಿಮ್ ಕಾರ್ಡ್ ಪಡೆದು, ಇನ್‌ಸ್ಟಾಗ್ರಾಂ, ವಾಟ್ಸಾಪ್‌ ಸಂದೇಶಗಳನ್ನು ರಿಟ್ರೈವ್ ಮಾಡಿದ್ದಾರೆ ಎಂದು ವರದಿಯಾಗಿದೆ.

Police Uncover Instagram Message from Renukaswamy to Pavithra Gowda in Darshan arrest case

ಪವಿತ್ರಾ ಗೌಡ ಅವರಿಗೆ ಮಾಡಿರುವ ಮೆಸೇಜ್‌ಗಳು ಅದಕ್ಕೆ ಪವಿತ್ರಾ ಗೌಡ ರಿಪ್ಲೈ ಮಾಡಿರುವ ಎಲ್ಲಾ ಸಂದೇಶಗಳನ್ನು ಪೊಲಿಸರು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದ್ದು, ಇದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳು ಎಂದು ಪರಿಗಣಿಸಲಾಗುತ್ತದೆ.

ರೇಣುಕಾಸ್ವಾಮಿ ಬಳಸುತ್ತಿದ್ದ ಫೇಸ್‌ಬುಕ್, ವಾಟ್ಸಾಪ್, ಇನ್‌ಸ್ಟಾಗ್ರಾಂ ಸೇರಿ ಪ್ರಮುಖ ಸಾಮಾಜಿಕ ಮಾಧ್ಯಮಗಳಿಗೆ ಲಾಗಿನ್‌ ಆಗುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆತ ಯಾರಿಗೆಲ್ಲಾ ಮೆಸೇಜ್ ಮಾಡಿದ್ದ, ಪವಿತ್ರಾ ಗೌಡರಿಗೆ ಏನೆಲ್ಲಾ ಕೆಟ್ಟ ಸಂದೇಶ ಕಳಿಸಿದ್ದು, ಅದಕ್ಕೆ ಪವಿತ್ರಾ ಗೌಡ ಏನು ರೀಪ್ಲೈ ಮಾಡಿದ್ದರು ಎನ್ನುವ ಮಾಹಿತಿ ಸಿಕ್ಕಿದೆ.

ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಒಂದರ ಹಿಂದೆ ಒಂದು ಸಂಕಷ್ಟ ಎದುರಾಗುತ್ತಲೇ ಇದೆ. ಪೊಲೀಸರು ಕೂಡ ದರ್ಶನ್ ಮತ್ತು ಗ್ಯಾಂಗ್‌ ಮಾಡಿರುವ ಕೃತ್ಯಕ್ಕೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಬಲವಾದ ಸಾಕ್ಷಿ ಆಧಾರಗಳನ್ನು ಕಲೆ ಹಾಕುತ್ತಿದ್ದಾರೆ.

ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆಗೆ ಸಂಬಂಧಪಟ್ಟಂತೆ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ರಿಮಾಂಡ್ ಅರ್ಜಿಯಲ್ಲಿ ಸ್ಫೋಟಕ ಆರೋಪಗಳನ್ನು ಮಾಡಿದ್ದರು. ದರ್ಶನ್ ಬೆಂಬಲಿಗರಲ್ಲಿ ಕೆಲವರು ರೇಣುಕಾಸ್ವಾಮಿ ಕುಟುಂಬವನ್ನು ಸಂಪರ್ಕಿಸಿದ್ದಾರೆ ಎಂದು ಪೊಲೀಸರು ಆರೋಪ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+