Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ
ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆಯು ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದೆ. ಇನ್ಮುಂದೆ ಎಸ್ಎಸ್ಎಲ್ಸಿ ಅಂಕಪಟ್ಟಿಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ. ಈ ಕ್ರಾಂತಿಕಾರಿ ಬದಲಾವಣೆಯನ್ನು ಸ್ಯಾಂಡಲ್ವುಡ್ ನಟಿ, ಮುಂಗಾರುಮಳೆ ಖ್ಯಾತಿಯ ಪೂಜಾ ಗಾಂಧಿ ಶ್ಲಾಘಿಸಿದ್ದಾರೆ.
ಏನಿದು ಹೊಸ ನಿಯಮ?
2026ರ ಎಸ್ಎಸ್ಎಲ್ಸಿ ಪರೀಕ್ಷೆಯಿಂದಲೇ ಅನ್ವಯವಾಗುವಂತೆ ಈ ಹೊಸ ನಿಯಮ ಜಾರಿಗೆ ಬರಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ನೀಡಿದ್ದು, ತೃತೀಯ ಭಾಷಾ ವಿಷಯಗಳಿಗೆ (ಹೆಚ್ಚಾಗಿ ಹಿಂದಿ) ಅಂಕ ನೀಡುವ ಪದ್ಧತಿಯನ್ನು ಕೈಬಿಡಲಾಗಿದೆ. ಹಿಂದಿನ ವರ್ಷಗಳಂತೆಯೇ ತೃತೀಯ ಭಾಷೆಗೆ 100 ಅಂಕಗಳ ಪ್ರಶ್ನೆ ಪತ್ರಿಕೆ ಇರುತ್ತದೆ.

ಅಂಕದ ಬದಲು ಗ್ರೇಡ್ ಇರಲಿದ್ದು, ಮೌಲ್ಯಮಾಪನದ ನಂತರ ಅಂಕಪಟ್ಟಿಯಲ್ಲಿ ಒಟ್ಟು ಅಂಕಗಳ ಬದಲಿಗೆ ಎ, ಬಿ, ಸಿ ಅಥವಾ ಡಿ ಗ್ರೇಡ್ಗಳನ್ನು ಮಾತ್ರ ನಮೂದಿಸಲಾಗುತ್ತದೆ ಎಂದು ಹೇಳಿದ್ದಾರೆ. ಈ ವಿಷಯದ ಅಂಕಗಳು ವಿದ್ಯಾರ್ಥಿಯ ಒಟ್ಟು ಶೇಕಡಾವಾರು (Percentage) ಅಥವಾ ರ್ಯಾಂಕ್ ನಿರ್ಧರಿಸಲು ಬಳಕೆಯಾಗುವುದಿಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲಿನ ಒತ್ತಡ ಗಣನೀಯವಾಗಿ ಕಡಿಮೆಯಾಗಲಿದೆ.
ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪೂಜಾ ಗಾಂಧಿ
ಈ ನಿರ್ಧಾರ ಹೊರಬೀಳುತ್ತಿದ್ದಂತೆ ನಟಿ ಪೂಜಾ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, "ಇಂದು ನಿಜವಾಗಿಯೂ ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಅದ್ಭುತ ನಿರ್ಧಾರಕ್ಕಾಗಿ ಕರ್ನಾಟಕ ಸರ್ಕಾರ ಮತ್ತು ಮಧು ಬಂಗಾರಪ್ಪ ಅವರಿಗೆ ಧನ್ಯವಾದ ತಿಳಿಸುತ್ತೇನೆ" ಎಂದಿದ್ದಾರೆ.
ಸರ್ಕಾರ ಇಂದು ತೆಗೆದುಕೊಂಡಿರುವ ತೀರ್ಪು ಕೇಳಿ ತುಂಬಾ ಖುಷಿ ಆಯ್ತು. ಹಿಂದಿ ಒಂದು ಭಾಷೆಯಾಗಿ ಕಲಿಯುವುದು ಮುಖ್ಯ. ಆದರೆ ಹಿಂದಿ ಕನ್ನಡದ ಮಕ್ಕಳ ಮೇಲೆ ಹೇರಿಕೆ ಆಗಬಾರದು. ಈ ಸಂದರ್ಭದಲ್ಲಿ ಎಲ್ಲ ಕನ್ನಡಪರ ಹೋರಾಟಗಾರರು, ಸಂಘಟನೆಗಳು, ಯಾರೆಲ್ಲ ಹೋರಾಟ ಮಾಡಿದ್ದಾರೋ ಅವರಿಗೆಲ್ಲ ಜಯ ಸಿಕ್ಕಿದೆ. ಅವರೆಲ್ಲರಿಗೂ ಅಭಿನಂದನೆಗಳನ್ನು ಹೇಳೋಕೆ ಇಷ್ಟಪಡುತ್ತೇನೆ. ಜೈ ಹಿಂದ್ ಜೈ ಕರ್ನಾಟಕ ಮಾತೆ" ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.
ಕನ್ನಡಿಗರ ದಶಕಗಳ ಹೋರಾಟಕ್ಕೆ ಸಂದ ಜಯ
ಕರ್ನಾಟಕದಲ್ಲಿ ಹಿಂದಿ ಹೇರಿಕೆ ವಿರುದ್ಧ ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ತೃತೀಯ ಭಾಷೆಯಾಗಿ ಹಿಂದಿಯನ್ನು ಕಡ್ಡಾಯವಾಗಿ ಕಲಿಯಬೇಕಾದ ಮತ್ತು ಅದರಲ್ಲಿ ಹೆಚ್ಚು ಅಂಕ ಗಳಿಸಬೇಕಾದ ಅನಿವಾರ್ಯತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೊರೆಯಾಗಿತ್ತು. ಈಗ ಸರ್ಕಾರದ ಈ ನಿರ್ಧಾರದಿಂದಾಗಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಕಲಿಕೆಗೆ ಹೆಚ್ಚಿನ ಒತ್ತು ನೀಡಲು ವಿದ್ಯಾರ್ಥಿಗಳಿಗೆ ಸಾಧ್ಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ













Click it and Unblock the Notifications