Darshan: ಕಳ್ಳ ನನ್ನ ಮಕ್ಕಳ ಬಗ್ಗೆ ಮಾತಾಡಲ್ಲ! ದರ್ಶನ್ ಜಾಮೀನು ಬಗ್ಗೆ ಪ್ರಕಾಶ್ ರಾಜ್ ಪ್ರತಿಕ್ರಿಯೆ
ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಕೊನೆಗೂ ಹೈಕೋರ್ಟ್ ಜಾಮೀನು ಸಿಕ್ಕಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ 7 ತಿಂಗಳ ಬಳಿಕ ಅವರಿಗೆ ಜಾಮೀನು ಸಿಕ್ಕಿದ್ದು ಅಭಿಮಾನಿಗಳಲ್ಲಿ ಭಾರಿ ಸಂತಸ ಮೂಡಿಸಿದೆ. ಚಿತ್ರರಂಗದ ದರ್ಶನ್ ಆಪ್ತರು, ಸ್ನೇಹಿತರು ಕೂಡ ಜಾಮೀನು ಸಿಕ್ಕಿದ್ದಕ್ಕೆ ಸಂತಸಗೊಂಡಿದ್ದಾರೆ. ತಮ್ಮ ನೇರವಾದ ನುಡಿಗಳಿಂದ ಸುದ್ದಿಯಾಗುವ ಪ್ರಕಾಶ್ ರಾಜ್ ದರ್ಶನ್ ಜಾಮೀನಿನ ಬಗ್ಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ಮೈಸೂರಿನಲ್ಲಿ ನಟ ಪ್ರಕಾಶ್ ರಾಜ್ ಸುದ್ದಿಗೋಷ್ಠಿ ನಡೆಸಿದರು. ಶ್ರೀರಂಗಪಟ್ಟಣದಲ್ಲಿ ತಾವು ನಡೆಸುತ್ತಿರುವ 'ನಿರ್ದಿಗಂತ' ರಂಗಶಾಲೆಯ ಬಗ್ಗೆ, ರಂಗ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮಕ್ಕಳ ಬಗ್ಗೆ ಮಾತನಾಡುತ್ತಿದ್ದ ಸಂದರ್ಭದಲ್ಲೇ ಮಾಧ್ಯಮದವರು ದರ್ಶನ್‌ಗೆ ಜಾಮೀನು ಸಿಕ್ಕಿರುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕೆ ದರ್ಶನ್ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಜಾಮೀನು ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು ಬಳಿಕ, "ನಾನು ಇಲ್ಲಿ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ, ಕಳ್ಳ ನನ್ನ ಮಕ್ಕಳ ಬಗ್ಗೆ ಅಲ್ಲ, ಮಕ್ಕಳ ಬಗ್ಗೆ ಮಾತ್ರ ಮಾತನಾಡೋಣ" ಎಂದು ಹೇಳಿದರು.
ಪ್ರಕಾಶ್ ರಾಜ್ ಅನೇಕ ಸಂದರ್ಭಗಳಲ್ಲಿ ತಮ್ಮ ನೇರವಾದ ಹೇಳಿಕೆಗಳಿಂದ ಸುದ್ದಿಯಾಗಿದ್ದಾರೆ. ಅನಿಸಿದ್ದನ್ನು ನೇರವಾಗಿ ಹೇಳುವುದು ಅವರ ಗುಣ, ಅದಕ್ಕೆ ಅವರಿಗೆ ವಿರೋಧಿಗಳು ಕೂಡ ಹೆಚ್ಚು.
ದರ್ಶನ್ ಅಭಿಮಾನಿಗಳಿಗೆ ಸಂಭ್ರಮ
ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ಪಡೆದಿದ್ದ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದರು, ಆಪರೇಷನ್ ಮಾಡಿಸಿಕೊಳ್ಳದ ಕಾರಣ ಅವರು ಮತ್ತೆ ಜೈಲಿಗೆ ಹೋಗುವ ಭೀತಿ ಎದುರಾಗಿತ್ತು, ಇದೀಗ ಜಾಮೀನು ಸಿಕ್ಕಿರುವುದು ದರ್ಶನ್‌ಗೆ ನೆಮ್ಮದಿ ಕೊಟ್ಟಿದೆ.
ಬಿಜಿಎಸ್ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಾಗಿದ್ದ ದರ್ಶನ್ ಚಿಕಿತ್ಸೆ ಬಳಿಕ, ಶೂಟಿಂಗ್‌ಗೆ ಕೂಡ ಹೋಗಬಹುದಾಗಿದೆ. ಸದ್ಯ ಅವರಿಗೆ ಜಾಮೀನು ಸಿಕ್ಕಿರುವ ಕಾರಣ ಕೆಲವು ದಿನ ವಿಶ್ರಾಂತಿ ಪಡೆದು ಬಳಿಕ ಶೂಟಿಂಗ್‌ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಕಾಟೇರ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಅವರು ಡೆವಿಲ್ ಸಿನಿಮಾ ಒಪ್ಪಿಕೊಂಡಿದ್ದರು. ಸಿನಿಮಾದ ಚಿತ್ರೀಕರಣ ಕೂಡ ಆರಂಭವಾಗಿತ್ತು, ಮೈಸೂರಿನಲ್ಲಿ ಚಿತ್ರೀಕರಣ ನಡೆಯುವ ವೇಳೆಯಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್ ಅಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎನ್ನುವ ಕಾರಣಕ್ಕೆ ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು.
ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್‌ಗೆ ಶಸ್ತ್ರಚಿಕಿತ್ಸೆ ಬೇಕೇ ಬೇಕು ಎಂದು ವಾದಿಸಿದ್ದ ವಕೀಲ ಸಿ.ವಿ. ನಾಗೇಶ್ ಮಧ್ಯಂತರ ಜಾಮೀನು ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಈಗ ದರ್ಶನ್‌ಗೆ ಜಾಮೀನು ಸಿಕ್ಕಿದ್ದು ಮತ್ತಷ್ಟು ನಿರಾಳ ಎನಿಸಿದೆ.












Click it and Unblock the Notifications