KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್
ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್ ನಿರ್ದೇಶನದ 'ಕೆಡಿ' (KD-The Devil) ಸಿನಿಮಾದ ಹಾಡಿನ ವಿವಾದ ಈಗ ಕೇವಲ ಸೋಷಿಯಲ್ ಮೀಡಿಯಾಗೆ ಸೀಮಿತವಾಗಿಲ್ಲ, ಬದಲಾಗಿ ರಾಷ್ಟ್ರೀಯ ಮಟ್ಟದಲ್ಲಿ ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಧ್ರುವ ಸರ್ಜಾ ನಟನೆಯ ಮತ್ತು ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾದ "ಸರ್ಸೆ ನಿನ್ನ ಸೆರಗ ಸರ್ಸೆ" (ಹಿಂದಿಯಲ್ಲಿ 'ಸರ್ಕೆ ಚುನರ್ ತೇರಿ ಸರ್ಕೆ') ಹಾಡು ಈಗ ದೊಡ್ಡ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಹಾಡಿನಲ್ಲಿ ಬಳಸಲಾದ ಅಶ್ಲೀಲ ಮತ್ತು ಡಬಲ್ ಮೀನಿಂಗ್ ಸಾಹಿತ್ಯದ ವಿರುದ್ಧ ಕೇಳಿಬಂದ ಸಾರ್ವಜನಿಕ ಆಕ್ರೋಶದ ಬೆನ್ನಲ್ಲೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದೆ.
ದೆಹಲಿಯಲ್ಲಿ ದೂರು ದಾಖಲು
ಈ ಹಾಡಿನಲ್ಲಿ ಮಹಿಳೆಯರನ್ನು ಅವಮಾನಿಸುವಂತಹ ಮತ್ತು ಅಶ್ಲೀಲತೆಯನ್ನು ಪ್ರಚೋದಿಸುವಂತಹ ಸಾಹಿತ್ಯ ಹಾಗೂ ದೃಶ್ಯಗಳಿವೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವಿನೀತ್ ಜಿಂದಾಲ್ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಹಾಡಿನಲ್ಲಿರುವ ಲೈಂಗಿಕ ಪ್ರಚೋದಕ ಸಾಹಿತ್ಯವು ಸಾರ್ವಜನಿಕ ವೀಕ್ಷಣೆಗೆ ಯೋಗ್ಯವಲ್ಲ ಮತ್ತು ಇದು ಯುವ ಪೀಳಿಗೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತದೆ ಎಂದು ದೂರಿದ್ದಾರೆ.

ಮಾನವ ಹಕ್ಕುಗಳ ಆಯೋಗದ ಕಠಿಣ ಸೂಚನೆ ಮತ್ತು ಜನರ ತೀವ್ರ ವಿರೋಧಕ್ಕೆ ಮಣಿದಿರುವ ಕೆಡಿ ಚಿತ್ರತಂಡ, ಇದೀಗ ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಂದ ಹಾಡಿನ ಹಿಂದಿ ಆವೃತ್ತಿಯನ್ನು ಅಧಿಕೃತವಾಗಿ ತೆಗೆದುಹಾಕಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಕಾಣಿಸಿಕೊಂಡಿದ್ದ ಈ ಹಾಡಿನ ವಿರುದ್ಧ ಇಡೀ ಸ್ಯಾಂಡಲ್‌ವುಡ್ ಕೆಂಡಾಮಂಡಲವಾಗಿತ್ತು.
ರಕೀಬ್ ಆಲಂ ಬರೆದಿದ್ದ ಈ ಹಾಡಿನ ಸಾಹಿತ್ಯ ಮತ್ತು ಡಬಲ್ ಮೀನಿಂಗ್ ಸಂಭಾಷಣೆಗಳ ವಿರುದ್ಧ ನೆಟ್ಟಿಗರು ಪ್ರೇಮ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಸಿನಿಮಾ ಈಗ ಹಾಡಿನ ವಿವಾದದಿಂದಾಗಿ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸದ್ಯಕ್ಕೆ ಹಾಡನ್ನು ತೆಗೆದುಹಾಕಿರುವ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ವಿಲ್' ಚಿತ್ರದ ವಿವಾದಿತ ಹಾಡು "ಸರ್ಸೆ ನಿನ್ನ ಸೆರಗ ಸರ್ಸೆ" (ಹಿಂದಿಯಲ್ಲಿ 'ಸರ್ಕೆ ಚುನರ್ ತೇರಿ ಸರ್ಕೆ') ಬಿಡುಗಡೆಯಾದ ಕೇವಲ ಒಂದು ದಿನದಲ್ಲೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಹಾಡಿನಲ್ಲಿದ್ದ ಅಶ್ಲೀಲ ದೃಶ್ಯಗಳು ಮತ್ತು ಸಾಹಿತ್ಯದ ವಿರುದ್ಧ ಸಾರ್ವಜನಿಕರು ಹಾಗೂ ಕಾನೂನು ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಚಿತ್ರತಂಡ ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್ ಹಾಗೂ ಇತರ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಂದ ಅಧಿಕೃತವಾಗಿ ತೆಗೆದುಹಾಕಿದೆ.

ಸೆನ್ಸಾರ್ ಮಂಡಳಿಗೆ ದೂರು
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಅಶ್ಲೀಲ ಸಾಹಿತ್ಯದ ಬಳಕೆಯ ಬಗ್ಗೆ ನೋಟಿಸ್ ನೀಡಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ, ಅಡ್ವೋಕೇಟ್ ವಿನೀತ್ ಜಿಂದಾಲ್ ಅವರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಮತ್ತು ಮಾಹಿತಿ ಹಾಗೂ ಪ್ರಸಾರ ಸಚಿವಾಲಯಕ್ಕೆ ದೂರು ನೀಡಿದ್ದು, ಈ ಹಾಡನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ. ಮುಖ್ಯವಾಗಿ ಅಪ್ರಾಪ್ತ ವಯಸ್ಕರ ಮೇಲೆ ಈ ಹಾಡು ಕೆಟ್ಟ ಪರಿಣಾಮ ಬೀರುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ತೀವ್ರ ವಿರೋಧದ ನಡುವೆಯೂ ಹಾಡಿನ ಹಿಂದಿ ಆವೃತ್ತಿಯನ್ನು ಮಾತ್ರ ತೆಗೆದುಹಾಕಲಾಗಿದ್ದು, ಕನ್ನಡ ಆವೃತ್ತಿಯು ಸದ್ಯಕ್ಕೆ ಯೂಟ್ಯೂಬ್‌ನಲ್ಲಿ ಲಭ್ಯವಿದೆ. ಆದರೆ ಇಡೀ ಹಾಡಿನ ಸಾಹಿತ್ಯ ಮತ್ತು ದೃಶ್ಯಗಳ ಬಗ್ಗೆ ಕನ್ನಡಿಗರು ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. 'ಜೋಗಿ' ಮತ್ತು 'ಎಕ್ಸ್‌ಕ್ಯೂಸ್ ಮಿ' ಅಂತಹ ಹಿಟ್ ಸಿನಿಮಾಗಳನ್ನು ನೀಡಿದ್ದ ಪ್ರೇಮ್, ಈಗ ಕೇವಲ ಪ್ರಚಾರಕ್ಕಾಗಿ ಇಂತಹ 'ಐಟಂ ಸಾಂಗ್' ಮತ್ತು ಅಶ್ಲೀಲ ಸಾಹಿತ್ಯಕ್ಕೆ ಮೊರೆ ಹೋಗಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಕಾಣಿಸಿಕೊಂಡಿರುವ ಈ ಹಾಡು ಸೃಜನಶೀಲತೆಗಿಂತ ಅಶ್ಲೀಲತೆಯಿಂದಲೇ ಕೂಡಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ











Click it and Unblock the Notifications