Rajath Kishan: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣ: ರಜತ್, ವಿನಯ್‌ಗೆ ಜಾಮೀನು ಮಂಜೂರು
ಬೆಂಗಳೂರು ಮಾರ್ಚ್ 28: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ಕಿಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯುಗಾದಿ ಹಬ್ಬಕ್ಕೂ ಮುನ್ನ ಈ ಇಬ್ಬರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಪ್ರಕ್ರಿಯೆ ಪೂರೈಸಿದ ಬಳಿಕ ಇಂದೇ ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಹೌದು.. ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಸಾಕ್ಷಿ ನಾಶದ ಕಾರಣಕ್ಕೆ ಬಿಗ್‌ಬಾಸ್ ಖ್ಯಾತಿಯ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಬಂಧಿಸಲಾಗಿತ್ತು. ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ರಜತ್ ಹಾಗೂ ವಿನಯ್‌ಗೆ ಯುಗಾದಿಗೂ ಮುನ್ನ ಕೋರ್ಟ್ ಸಿಹಿ ಸುದ್ದಿ ನೀಡಿದೆ.

ರಜತ್ ಹಾಗೂ ವಿನಯ್‌ಗೆ ಬೆಂಗಳೂರಿನ 24ನೇ ACJM ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜೊತೆಗೆ ತಲಾ ಹತ್ತು ಸಾವಿರ ಶ್ಯೂರಿಟಿ ನೀಡಲು ಕೋರ್ಟ್ ಸೂಚನೆ ನೀಡಿದ್ದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ಇಂದು ಶುಕ್ರವಾರವಾಗಿದ್ದರಿಂದ ಜಾಮೀನು ಪ್ರಕ್ರಿಯೆ ಪೂರ್ಣಗೊಳ್ಳುವುದು ಸಾಧ್ಯವಾಗದೇ ಇರಬಹುದು.
ಇನ್ನೂ ನಾಳೆ ಶನಿವಾರ, ಭಾನುವಾರ, ಸೋಮವಾರ ಹಬ್ಬದ ರಜೆ ಕಾರಣಕ್ಕೆ ಜಾಮೀನು ಅರ್ಜಿ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ. ಹೀಗಾಗಿ ಜಾಮೀನು ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸದೇ ಇದ್ದರೆ ಇಂದು ಕೂಡ ಜೈಲೇಗತಿಯಾಗಲಿದೆ. ಆದರೆ ಇಂದೇ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಆರೋಪಿಗಳ ಪರ ವಕೀಲರು ಪ್ರಯತ್ನಿಸುತ್ತಿದ್ದಾರೆ.












Click it and Unblock the Notifications