ರಿಷಬ್ ಶೆಟ್ಟಿ ನಟನೆಯ ಕಾಂತಾರ-1 ದೈವ ಅಣಕಿಸಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್
Ranveer Singh Kantara Controversy: ರಿಷಬ್ ಶೆಟ್ಟಿ ನಟನೆಯ ಕಾಂತಾರ-1ರಲ್ಲಿನ ದೈವದ ದೃಶ್ಯವನ್ನು ಅನುಕರಿಸಿದ ಆರೋಪದ ಮೇಲೆ ಬಾಲಿವುಡ್ ನಟ ರಣ್‌ವೀರ್ ಸಿಂಗ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಗೋವಾ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಎದುರೇ ದೈವಕ್ಕೆ ಅವಮಾನ ಮಾಡಿದ್ದಾರೆ ಎಂದು ವಕೀಲರೊಬ್ಬರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಗೋವಾದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂದರ್ಭದಲ್ಲಿ ನಟ ರಣವೀರ್ ಸಿಂಗ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ದೈವ ಸಂಪ್ರದಾಯಕ್ಕೆ ಸಂಬಂಧಿಸಿದ ಹೇಳಿಕೆಗಳು ಮತ್ತು ಅನುಕರಣೆ ಆರೋಪದ ಮೇಲೆ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಹಲವು ಸೆಕ್ಸ್‌ನ್‌ಗಳ ಅಡಿಯಲ್ಲಿ ದೂರು ದಾಖಲು: ಮಾಹಿತಿ ಪ್ರಕಾರ, ಸೆಕ್ಷನ್ 196 (ಧಾರ್ಮಿಕ ಭಾವನೆಗೆ ಧಕ್ಕೆ), ಸೆಕ್ಷನ್ 299 (ಧಾರ್ಮಿಕ ಭಾವನೆ ಕೆರಳಿಸುವ ಕೃತ್ಯ) ಮತ್ತು ಸೆಕ್ಷನ್ 302 (ಇತರರ ಧಾರ್ಮಿಕ ಭಾವನೆ ನೋಯಿಸುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಗೋವಾ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದ ವೇಳೆ, ರಣವೀರ್ ಸಿಂಗ್ ಅವರು ದೈವ ಸಂಸ್ಕೃತಿಗೆ ಸಂಬಂಧಿಸಿದಂತೆ ಅವಹೇಳನಕಾರಿ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ.
ದೂರಿನಲ್ಲಿ ಏನಿದೆ?: ವಿಶೇಷವಾಗಿ, ಕಾಂತಾರಾ ಚಿತ್ರದ ಚಾವುಂಡಿ ದೈವದ ದೃಶ್ಯವನ್ನು ಅನುಕರಿಸುವ ಸಂದರ್ಭದಲ್ಲೇ, ಚಾವುಂಡಿ ದೇವರನ್ನು "ಫೀಮೇಲ್ ಗೋಸ್ಟ್" ಎಂದು ಉಲ್ಲೇಖಿಸಿ ಮಾತನಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಹೇಳಿಕೆ ರಿಷಬ್ ಶೆಟ್ಟಿ ಅವರ ಎದುರಲ್ಲೇ ನಡೆದಿದ್ದು, ಇದರಿಂದ ದೈವ ಪರಂಪರೆಯನ್ನು ನಂಬುವ ಜನರ ಭಾವನೆಗಳಿಗೆ ಗಂಭೀರ ನೋವುಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಹಲವರು ರಣವೀರ್ ಸಿಂಗ್ ಅವರ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ದೈವ ಸಂಸ್ಕೃತಿ ಮತ್ತು ಜನಪದ ನಂಬಿಕೆಗಳಿಗೆ ಗೌರವ ನೀಡಬೇಕೆಂದು ಸಾರ್ವಜನಿಕ ವಲಯದಿಂದ ಆಗ್ರಹ ಹೆಚ್ಚಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಚಾವುಂಡಿ ದೇವತೆ ಕರಾವಳಿ ಕರ್ನಾಟಕದ ಜನಪದ ಸಂಸ್ಕೃತಿ ಮತ್ತು ನಂಬಿಕೆಗಳಲ್ಲಿ ಮಹತ್ವದ ಸ್ಥಾನ ಪಡೆದುಕೊಂಡಿದೆ. ಈ ರೀತಿಯ ಹೇಳಿಕೆಗಳು ಜನರ ಭಾವನೆಗಳಿಗೆ ನೋವುಂಟುಮಾಡಿವೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ರೀತಿಯ ಹೇಳಿಕೆಗಳು ಜನರ ಭಾವನೆಗಳಿಗೆ ನೋವುಂಟುಮಾಡಿವೆ ಎಂದು ದೂರಿನಲ್ಲಿ ಹೇಳಲಾಗಿದೆ.
ಇನ್ನೂ ದೈವಗಳು ಕೇವಲ ಕಲ್ಪನೆ ಅಥವಾ ಭೂತಪ್ರೇತಗಳಲ್ಲ, ಅದು ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಜೀವಂತ ಸಂಸ್ಕೃತಿ ಅಂತಲೂ ತಿಳಿಸಲಾಗಿದೆ. ಈ ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಜೋರಾಗಿದ್ದು, ಕರಾವಳಿ ಜನರು ಹಾಗೂ ಹಲವು ನಟರು ಇದಕ್ಕೆ ಕ್ಷಮಾಪಣೆ ಕೇಳಬೇಕೆಂದು ಒತ್ತಾಯಿಸಿದ್ದಾರೆ. ಇನ್ನೂ ಇದೀಗ ರಣ್‌ವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಪೊಲೀಸರು ಏನು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಕಾದುನೋಡಬೇಕಿದೆ.
ಚಾಪ್ಟರ್ 1 ಚಿತ್ರವು ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ಅಭಿನಯದಲ್ಲಿ ಮೂಡಿಬಂದಿರುವ ಅತ್ಯುತ್ತಮ ಸಿನಿಮಾವಾಗಿದೆ. ಇದು ದೇಶ ಅಷ್ಟೇ ಅಲ್ಲದೆ, ವಿಶ್ವಮಟ್ಟದಲ್ಲಿ ಸದ್ದು ಮಾಡಿದ ಕನ್ನಡದ ಸಿನಿಮಾ ಆಗಿದೆ. ಇದರಲ್ಲಿ ಕಾಲದಲ್ಲಿನ ಕಾಡಿನ ಜನರನ್ನು ಹಿಂದಿನ ಕಾಲದಲ್ಲಿ ರಾಜಮನೆತನದವರು ಯಾವ ರೀತಿ ನಡೆಸಿಕೊಳ್ಳುತ್ತಿದ್ದರು ಎಂದು ತೋರಿಸಲಾಗಿದೆ. ಅಲ್ಲದೆ, ಕಾಡಿನ ಜನರ ಮುಗ್ಧತೆ ಹಾಗೂ ಅವರ ದೈವ ಆರಾಧನೆ ಹಾಗೂ ಪ್ರಾಚೀನ ಸಂಸ್ಕೃತಿಯನ್ನು ಇದರಲ್ಲಿ ಕಾಣಬಹುದು.
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications