ಸಿನಿಪ್ರಿಯರಿಗೆ ಗುಡ್‌ ನ್ಯೂಸ್‌; ಇಂದು ಒಟಿಟಿಗೆ ಬಂತು ಧುರಂಧರ್ ಸಿನಿಮಾ

ಧುರಂಧರ್ ಸಿನಿಮಾ ಬಾಕ್ಸ್​ ಆಫೀಸ್​​​ನಲ್ಲಿ ಮೇಲುಗೈ ಸಾಧಿಸುತ್ತಿದೆ. ಚಿತ್ರಮಂದಿರಗಳಲ್ಲಿ ದೂಳೆಬ್ಬಿಸಿದ ಧುರಂಧರ್ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗುವಾಗ ಯಾವುದೇ ಸೆನ್ಸಾರ್ ಇಲ್ಲದೆ ಬಿಡುಗಡೆ ಆಗುತ್ತದೆ ಎಂಬ ನಿರೀಕ್ಷೆ ಅಭಿಮಾನಿಗಳಿತ್ತು, ಇದೀಗ ಧುರಂಧರ್ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

ಧುರಂಧರ್ ಸಿನಿಮಾ ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಸಿನಿಮಾ ಇನ್ನೂ ಕೋಟಿಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ಧುರಂಧರ್' ಚಿತ್ರಮಂದಿರಗಳಲ್ಲಿ ಉತ್ತಮ ಗಳಿಕೆ ಕಂಡ ನಂತರ, ಇಂದಿನಿಂದ( ಜನವರಿ 30) ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ರಣವೀರ್ ಸಿಂಗ್ ಅಭಿನಯದ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 1300 ಕೋಟಿಗೂ ಹೆಚ್ಚು ಗಳಿಸಿ ಇತಿಹಾಸ ನಿರ್ಮಿಸಿದೆ.

Ranveer Singh s Blockbuster Dhurandhar Streams On Netflix From Today

ಕಳೆದ ವರ್ಷ ಬಾಲಿವುಡ್ ಮಂದಿಯ ಮರ್ಯಾದೆ ಉಳಿಸಿದ ಸಿನಿಮಾ ಧುರಂಧರ್ ವರ್ಷದ ಕೊನೆಯ ತಿಂಗಳಲ್ಲಿ ತೆರೆಕಂಡಿದ್ದ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಒಂದೊಂದೇ ದಾಖಲೆಗಳನ್ನು ಮುರಿಯುತ್ತಾ ಬಂದಿದೆ. ಅಲ್ಲಿವರೆಗೂ ಕೆಲವೇ ಕೆಲವು ಗೆಲುವುಗಳನ್ನು ದಾಖಲಿಸಿದ್ದ ಬಾಲಿವುಡ್ ಮಂದಿಗೆ ಇದೀಗ ಈ ಸಿನಿಮಾದಿಂದ ಮರು ಜೀವ ಬಂದಂತಾಗಿತ್ತು. ಸದ್ಯ ಸತತ ಸೋಲುಗಳಿಂದ ಕಂಗೆಟ್ಟು ಹೋಗಿದ್ದ ರಣ್‌ವೀರ್‌ ಸಿಂಗ್‌ಗೂ ಒಳ್ಳೆಯ ಸಕ್ಸಸ್ ಸಿಕ್ಕಿದೆ.

ಥಿಯೇಟರ್‌ನಲ್ಲಿ ಧುರಂಧರ್ ಸಿನಿಮಾ ತನ್ನ ಜರ್ನಿಯನ್ನು ಮುಗಿಸಿ, ಇಂದು ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಓಟಿಟಿ ದೈತ್ಯ ನೆಟ್‌ಫ್ಲಿಕ್ಸ್‌ನಲ್ಲಿ 'ಧುರಂಧರ್' ಸಿನಿಮಾ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಅಲೆಗಳನ್ನು ಸೃಷ್ಟಿಸಿದ ಮತ್ತು ಇತ್ತೀಚಿನ ದಿನಗಳಲ್ಲಿ ಅತಿದೊಡ್ಡ ಬ್ಲಾಕ್ಬಸ್ಟರ್‌ಗಳಲ್ಲಿ ಒಂದಾಗಿ ಹೊರಹೊಮ್ಮಿದ ನಂತರ, ರಣವೀರ್ ಸಿಂಗ್ ಅಭಿನಯದ ಧುರಂಧರ್ ಅಧಿಕೃತವಾಗಿ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸಿದೆ.

ಡಿಸೆಂಬರ್ 2025ರಲ್ಲಿ ಬಿಡುಗಡೆಯಾದ ಧುರಂಧರ್ ಒಂದು ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ, ಆದಿತ್ಯ ಧರ್ ನಿರ್ದೇಶನದಲ್ಲಿ, ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್, ಆರ್. ಮಾಧವನ ಮತ್ತು ಅರ್ಜುನ್ ರಾಂಪಾಲ್ ನಟಿಸಿದ್ದಾರೆ. ರಣ್‌ವೀರ್ ಸಿಂಗ್‌ಗಿಂತಲೂ ಮಿಗಿಲಾಗಿ ಅಕ್ಷಯ್ ಖನ್ನಾ ಪರ್ಫಾಮೆನ್ಸ್ ಅನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

ಸಿನಿಮಾದ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ, ಪಾಕಿಸ್ತಾನದ ಭಯೋತ್ಪಾದನೆ, ಎರಡೂ ದೇಶಗಳ ನಡುವಿನ ದ್ವೇಷ, ವೈಮನಸ್ಯ ಇನ್ನಿತರೆ ವಿಷಯಗಳ ಬಗ್ಗೆ ಸಾಕಷ್ಟು ಸಂಭಾಷಣೆಗಳು ಸಿನಿಮಾನಲ್ಲಿವೆ. ಮಾರ್ಚ್ 19ರಂದು ಧುರಂಧರ್ 2 ಥಿಯೇಟರ್​​ ಅಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮೊದಲು ಮೊದಲ ಭಾಗವನ್ನು ಒಟಿಟಿಯಲ್ಲಿ ರಿಲೀಸ್ ಮಾಡಲೇಬೇಕಾದ ಅನಿವಾರ್ಯತೆ ತಂಡಕ್ಕೆ ಇದೆ.

ಮೂಲ ಹಿಂದಿ ಆವೃತ್ತಿಯ ಜೊತೆಗೆ, ಧುರಂಧರ್ ತಮಿಳು ಮತ್ತು ತೆಲುಗು ಭಾಷೆಗಳಲ್ಲಿಯೂ ಸ್ಟ್ರೀಮಿಂಗ್‌ಗೆ ಲಭ್ಯವಿದೆ, ಇದು ವಿವಿಧ ಭಾಷಾ ಪ್ರದೇಶಗಳ ಪ್ರೇಕ್ಷಕರಿಗೆ ಚಿತ್ರವನ್ನು ಅನುಭವಿಸಲು ಅನುವು ಮಾಡಿಕೊಡುತ್ತದೆ. ನೆಟ್‌ಫ್ಲಿಕ್ಸ್ ಇಂಡಿಯಾದ ಕಂಟೆಂಟ್‌ನ ಉಪಾಧ್ಯಕ್ಷೆ ಮೋನಿಕಾ ಶೆರ್ಗಿಲ್ ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿದ್ದು, ಈ ಚಿತ್ರವನ್ನು ನೆಟ್‌ಫ್ಲಿಕ್ಸ್‌ಗೆ ತರಲು ನಾವು ಉತ್ಸುಕರಾಗಿದ್ದೇವೆ, ಇದು 190 ಕ್ಕೂ ಹೆಚ್ಚು ದೇಶಗಳಲ್ಲಿ ಪ್ರೇಕ್ಷಕರಿಗೆ ಲಭ್ಯವಾಗುವಂತೆ ಮಾಡಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+