Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ
Rashmika Mandanna: ಇತ್ತೀಚಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿರುವ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ಹನಿಮೂನ್ ಸಂಭ್ರಮದಲ್ಲಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಥಾಯ್ಲೆಂಡ್‌ನಲ್ಲಿ ದಂಪತಿ ಬೀಡುಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಪ್ರವಾಸದಲ್ಲಿ ಅವರ ಆತ್ಮೀಯ ಸ್ನೇಹಿತರು ಸಹ ಸಾಥ್ ಕೊಟ್ಟಿದ್ದಾರೆ. ಇನ್ನು ಇತ್ತೀಚೆಗೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ತಬ್ಬಿಕೊಂಡಿದ್ದ ಫೋಟೊವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ತಮ್ಮ ಕನಸಿನ ಹನಿಮೂನ್ ಬಗ್ಗೆ ಜೋಡಿ ಅಧಿಕೃತವಾಗಿ ಪೋಸ್ಟ್‌ವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿದೆ.
ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ವಿವಾಹ ಸಂಭ್ರಮವನ್ನು ದೇಶದ ಇನ್ನುಳಿದ ಸೆಲೆಬ್ರಿಟಿಗಳಿಗಿಂತಲೂ ಭಿನ್ನವಾಗಿ ಸಂಭ್ರಮಿಸಿದ್ದರು. ದೇಶದ ಪ್ರಮುಖ ನಗರಗಳಲ್ಲಿ ಫ್ಯಾನ್ಸ್‌ಗಳನ್ನು ಮೀಟ್ ಮಾಡುವುದು, ಅವರಿಗೆ ವಿಶೇಷ ಊಟದ ವ್ಯವಸ್ಥೆ, ಊರಿನವರಿಗೆ ಊಟದ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡುವಂತಹ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಇದಾದ ನಂತರ ಅವರು ಹನಿಮೂನ್‌ಗಾಗಿ ಥಾಯ್ಲೆಂಡ್‌ಗೆ ಭೇಟಿ ನೀಡಿದ್ದಾರೆ.

ಹನಿಮೂನ್‌ಗಾಗಿ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಥಾಯ್ಲೆಂಡಿನ ಕೊಹ್ ಸಮುಯಿ ದ್ವೀಪಕ್ಕೆ ತೆರಳಿದ್ದಾರೆ. ಅಲ್ಲಿನ ರೆಸಾರ್ಟ್‌ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದು, ಈ ಪ್ರವಾಸದಲ್ಲಿ ಅವರ ಸ್ನೇಹಿತರು ಸಹ ಜೊತೆಗಿದ್ದಾರೆ. ಮದುವೆ ಸಂಭ್ರಮದ ನಂತರ, ನಾವು ಒಂದೆರಡು ದಿನಗಳ ವರೆಗೆ ವಿಶ್ರಾಂತಿ ಪಡೆಯುವುದಕ್ಕೆ ಬಯಸಿದ್ದೆವು. ಶಾಂತವಾದ ಬೆಳಿಗ್ಗೆ, ಮಧ್ಯಾಹ್ನ ಈಜು ಹಾಗೂ ಸಂಜೆ ಟೇಬಲ್ ಟೆನ್ನಿಸ್, ಪೂಲ್ ಹಾಗೂ ಸಿನಿಮಾ ನೋಡುವುದರೊಂದಿಗೆ ಹೆಚ್ಚು ಕಾಲ ಖುಷಿ ಖುಷಿಯಾಗಿದ್ದೆವು. ಕೊಹ್ ಸಮುಯಿಯಲ್ಲಿರುವ ಈ ರೆಸಾರ್ಟ್ ಮನೆಯಂತೆ ಭಾಸವಾಗುತ್ತಿದೆ. ಆ ದಿನಗಳ ಕೆಲವು ಕ್ಷಣಗಳು... ಸ್ನೇಹಿತರೊಂದಿಗೆ ಮತ್ತು ಮನೆ ನಗುವಿನಿಂದ ತುಂಬಿತ್ತು ಎಂದು ರಶ್ಮಿಕಾ ಮಂದಣ್ಣ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.
Rashmika Mandanna: ಫೆಬ್ರವರಿ 26ರಂದು ಅದ್ಧೂರಿ ವಿವಾಹ
ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ವಿವಾಹವು ಫೆಬ್ರವರಿ 26ರಂದು ರಾಜಸ್ಥಾನದ ಉದಯ್‌ಪುರದಲ್ಲಿ ನಡೆದಿತ್ತು. ವಿವಾಹದ ನಂತರ ಅವರು ಹೈದರಾಬಾದ್‌ನಲ್ಲಿ ರಿಸೆಪ್ಷನ್ ಪಾರ್ಟಿ ಆಯೋಜಿಸಿದ್ದರು.
ಮುಂದಿನ 5 ವರ್ಷ ಅವಧಿಗೆ ಇದೇ ರೀತಿ ಇನ್ನಷ್ಟು ದೇಶಗಳನ್ನು ಸುತ್ತಾಡಲು ಪ್ಲ್ಯಾನ್ ಇದೆ ಎಂದು ದಂಪತಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ರೀಲ್‌ವೊಂದರಲ್ಲಿ ಇಬ್ಬರೂ ಮಾತನಾಡಿದ್ದಾರೆ. ಈ ಜೋಡಿ ಕಳೆದ ಸುಂದರ ಕ್ಷಣಗಳ ಝಲಕ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಲೈಕ್ಸ್, ಕಾಮೆಂಟ್ಸ್‌ಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications