Rashmika Mandanna: ವಿಶೇಷ ಪೋಸ್ಟ್ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ - ನಟ ವಿಜಯ್ ದೇವರಕೊಂಡ, ಏನಿದು VIROSH
Rashmika Mandanna: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನಟ ವಿಜಯ್ ದೇವರಕೊಂಡ ಇಬ್ಬರು ಏಕಕಾಲಕ್ಕೆ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಮದುವೆಯ ಬಗ್ಗೆ ಕೊನೆಗೂ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. ಇವರ ವಿವಾಹದ ಬಗ್ಗೆ ಹಲವು ದಿನಗಳಿಂದ ವದಂತಿಗಳು ಹೆಚ್ಚಾಗಿದ್ದವು, ಕೊನೆಗೂ ಈ ವದಂತಿಗಳಿಗೆ ಇಬ್ಬರೂ ತೆರೆ ಎಳೆದಿದ್ದಾರೆ.
ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಈ ಜೋಡಿಯು ಭಾನುವಾರ ರಾತ್ರಿ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಮ್‌ನಲ್ಲಿ ಏಕಕಾಲಕ್ಕೆ ಪೋಸ್ಟ್ ಮಾಡುವ ಮೂಲಕ ತಮ್ಮ ಮದುವೆಯ ಬಗ್ಗೆ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕಳೆದ ಹಲವು ದಿನಗಳಿಂದ ವಿಜಯ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಮದುವೆಯ ಬಗ್ಗೆ ಊಹಾಪೋಹಗಳು ಸೃಷ್ಟಿಯಾಗಿದ್ದವು. ಈಗ, ಈ ವದಂತಿಗಳಿಗೆ ತೆರೆ ಬಿದ್ದಿದೆ. ಇಬ್ಬರೂ ತಮ್ಮ ಮದುವೆಯನ್ನು ದೃಢಪಡಿಸಿದ್ದಾರೆ ಮತ್ತು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳಿಗಾಗಿ ಪ್ರೀತಿಯ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಅವರು ವರ್ಷಗಳ ಹಿಂದೆಯೇ ಅವರ ವಿವಾಹದ ಬಗ್ಗೆ ಸುಳಿವು ನೀಡಿದ್ದರು. ಇವರಿಬ್ಬರು ಪ್ರೀತಿಸುತ್ತಿರುವುದು ಒಪನ್ ಸಿಕ್ರೆಟ್‌ನಂತೆ ಆಗಿತ್ತು. ಇದೀಗ ಇಷ್ಟು ದಿನಗಳಿಂದ ಚರ್ಚೆ ಆಗುತ್ತಿದ್ದ ವಿಷಯಕ್ಕೆ ತೆರೆ ಬಿದ್ದಿದೆ.
ಜಂಟಿ ಪೋಸ್ಟ್ ಹಂಚಿಕೊಂಡ ಜೋಡಿಗಳು
ವಿಜಯ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಂನಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ. ಭಾನುವಾರ ರಶ್ಮಿಕಾ ಮತ್ತು ವಿಜಯ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿರುವ ಪೋಸ್ಟ್ ವೈರಲ್ ಆಗಿದೆ. ಅವರ ಅಭಿಮಾನಿಗಳು ಅವರಿಗೆ ತುಂಬಾ ಪ್ರೀತಿಯಿಂದ VIROSH ಎಂಬ ಹೆಸರಿನಲ್ಲಿ ಸಂದೇಶವನ್ನು ಹಂಚಿಕೊಂಡಿದ್ದಾರೆ.
ವೈರಲ್ ಪೋಸ್ಟ್‌ನಲ್ಲಿ ಏನಿದೆ
ನಮ್ಮ ಅತ್ಯಂತ ಪ್ರೀತಿಯ ಅಭಿಮಾನಿಗಳೇ ನಾವು ಯಾವುದೇ ಪ್ಲ್ಯಾನ್ ಮಾಡುವ ಮುನ್ನ, ನಮ್ಮಗಾಗಿ ಯಾವುದನ್ನಾದರೂ ಆಯ್ಕೆ ಮಾಡುವ ಮುನ್ನವೇ ನೀವು ಈಗಾಗಲೇ ನಮ್ಮ ಜೊತೆ ಇದ್ದಿರಿ. ಬಹಳಷ್ಟು ಪ್ರೀತಿಯಿಂದ ನೀವು ನಮಗೆ ಒಂದು ಹೆಸರು ನೀಡಿದ್ದೀರಿ. ನೀವು ನಮ್ಮನ್ನು "VIROSH" ಎಂದು ಕರೆದಿದ್ದೀರಿ.
ಆದ್ದರಿಂದ ಇಂದು, ತುಂಬಿದ ಹೃದಯದಿಂದ ನಮ್ಮ ಈ ಬಾಂಧವ್ಯಕ್ಕೆ ನಿಮ್ಮ ಗೌರವಕ್ಕಾಗಿ ಒಂದು ಹೆಸರು ಕೊಡಲು ಬಯಸುತ್ತೇವೆ.
ಅದಕ್ಕೆ ನಾವು "The Wedding of VIROSH" ಎಂದು ಹೆಸರು ಇಡಲು ನಿರ್ಧರಿಸಿದ್ದೇವೆ. ಇಷ್ಟು ಪ್ರೀತಿಯಿಂದ ನಮ್ಮನ್ನು ಸದಾ ಬೆಂಬಲಿಸಿದ ನಿಮಗೆ ಧನ್ಯವಾದಗಳು. ನೀವು ನಮ್ಮ ಜೀವನದ ಒಂದು ಭಾಗ ಸದಾಕಾಲ. ದೊಡ್ಡ ಅಪ್ಪುಗೆ ಮತ್ತು ತುಂಬು ಪ್ರೀತಿ! ಎಂದು ವಿಜಯ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಂನಲ್ಲಿ ವಿಶೇಷ ಪೋಸ್ಟ್ ಮಾಡಿದ್ದಾರೆ.
ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಮದುವೆ ಯಾವಾಗ
ಇನ್ನು ಈಗಲೂ ವಿಜಯ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ತಮ್ಮ ವಿವಾಹ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಈ ಜೋಡಿಯು ಫೆಬ್ರವರಿ 26, 2026 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಮದುವೆಗಾಗಿ ರಾಜಮನೆತನವನ್ನು ಆಯ್ಕೆ ಮಾಡಿಕೊಂಡರು, ಅಲ್ಲಿ ಕುಟುಂಬ ಸದಸ್ಯರು ಮತ್ತು ಅತ್ಯಂತ ಆಪ್ತರು ಮಾತ್ರ ಭಾಗವಹಿಸುತ್ತಾರೆ ಎಂದು ಹೇಳಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications