Rashmika Mandanna: ಉದಯಪುರಕ್ಕೆ ಬಂದಿಳಿದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ; ಹೇಗಿದೆ ಮದುವೆ ತಯಾರಿ?
ಬಹುಕಾಲದಿಂದ ಗಾಸಿಪ್‌ಗಳಿಗೆ ಕಾರಣವಾಗಿದ್ದ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೋಡಿ ಇದೀಗ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಇದೇ ಫೆಬ್ರವರಿ 26ರಂದು ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಲಿದ್ದು, ಈ ಹಿನ್ನೆಲೆ ರಾಜಸ್ಥಾನದ ಉದಯಪುರ ನಗರಕ್ಕೆ ಆಗಮಿಸಿದ್ದಾರೆ. ನಿನ್ನೆಯಷ್ಟೇ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ತಮ್ಮ ಮದುವೆ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದರು.
ಅಭಿಮಾನಿಗಳು ಹೇಳಿದ್ದೇ ಮದುವೆಗೆ ಶೀರ್ಷಿಕೆ
ಇಬ್ಬರೂ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮದುವೆಯನ್ನು ಅಧಿಕೃತವಾಗಿ ಘೋಷಿಸಿದ್ದು, ತಮ್ಮ ಜೋಡಿಗೆ ಅಭಿಮಾನಿಗಳು ನೀಡಿದ "ವಿರೋಷ್" ಎಂಬ ಹೆಸರನ್ನೇ ಮದುವೆ ಸಮಾರಂಭದ ಶೀರ್ಷಿಕೆಯಾಗಿಸಿಕೊಂಡಿದ್ದಾರೆ. "ನಮ್ಮ ಮೇಲೆ ನೀವು ತೋರಿದ ಪ್ರೀತಿಗೆ ಗೌರವವಾಗಿ ನಮ್ಮ ಒಂದಾಗುವಿಕೆಯನ್ನು 'ವಿರೋಷ್ ವಿವಾಹ' ಎಂದು ಕರೆಯಲು ಬಯಸುತ್ತೇವೆ" ಎಂದು ಈ ಜೋಡಿ ಭಾವನಾತ್ಮಕವಾಗಿ ಹಂಚಿಕೊಂಡಿದೆ. ಕೊನೆಗೆ ಮದುವೆ ವಿಚಾರದ ಬಗ್ಗೆ ಅಪ್‌ಡೇಟ್ ಕೊಟ್ಟಿದ್ದರಿಂದ ಅಭಿಮಾನಿಗಳಲ್ಲಿದ್ದ ಗೊಂದಲ ದೂರವಾಗಿದೆ.

ಮ್ಯಾಚಿಂಗ್ ಬಟ್ಟೆ ಧರಿಸಿ ಉದಯಪುರಕ್ಕೆ ಎಂಟ್ರಿ
ಉದಯಪುರ ವಿಮಾನ ನಿಲ್ದಾಣದಲ್ಲಿ ಇಬ್ಬರೂ ಪ್ರತ್ಯೇಕವಾಗಿ ಹೊರಬಂದರೂ, ಒಂದೇ ಬಣ್ಣದ ಉಡುಪಿನಲ್ಲಿ ಕಾಣಿಸಿಕೊಂಡಿದ್ದು ಗಮನಸೆಳೆದಿದೆ. ಇಬ್ಬರ ಬಟ್ಟೆಗಳು ಮ್ಯಾಚಿಂಗ್‌ನಲ್ಲಿದ್ದು, ಒಟ್ಟಿಗೆ ಬಂದು ಪ್ರತ್ಯೇಕವಾಗಿ ಅಲ್ಲಿಂದ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ಅಲ್ಲಿದ್ದ ಅಭಿಮಾನಿಗಳು ಮತ್ತು ಛಾಯಾಗ್ರಾಹಕರು ಇವರ ಫೋಟೋಗಳನ್ನು ಕ್ಲಿಕ್ಕಿಸಿಕೊಂಡರು. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಇವು ವೈರಲ್ ಆಗಿವೆ.
ಪರಿಚಯದಿಂದ ಮದುವೆವರೆಗೆ
ಗೀತಗೋವಿಂದಂ ಚಿತ್ರದ ಮೂಲಕ ಮೊದಲ ಬಾರಿ ಒಂದಾಗಿ ತೆರೆ ಮೇಲೆ ಕಾಣಿಸಿಕೊಂಡ ಈ ಜೋಡಿ, ನಂತರ ಡಿಯರ್ ಕಾಮ್ರೇಡ್ ಚಿತ್ರದಲ್ಲೂ ಜೊತೆಯಾಗಿ ನಟಿಸಿತ್ತು. ಈ ಅವಧಿಯಲ್ಲೇ ಇಬ್ಬರ ಸಂಬಂಧದ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡಿದ್ದವು. ಈಗ ಆ ವದಂತಿಗಳಿಗೆ ತೆರೆ ಎಳೆದು, ಇಬ್ಬರೂ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಹೈದರಾಬಾದ್‌ನಲ್ಲಿ ಆರತಕ್ಷತೆ
ಮದುವೆ ಸಮಾರಂಭ ಆತ್ಮೀಯರ ಸಮ್ಮುಖದಲ್ಲಿ ಫೆಬ್ರವರಿ 26ರಂದು ಉದಯಪುರದಲ್ಲಿ ನಡೆಯಲಿದ್ದು, ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ಭವ್ಯ ಸ್ವಾಗತ ಸಮಾರಂಭ ನಡೆಯುವ ನಿರೀಕ್ಷೆಯಿದೆ. ಆಗ ಚಿತ್ರರಂಗದ ಗಣ್ಯರೆಲ್ಲರೂ ಈ ಜೋಡಿಗೆ ಶುಭಕೋರಲಿದ್ದಾರೆ ಎನ್ನಲಾಗಿದೆ. ಚಿತ್ರರಂಗದ ಜನಪ್ರಿಯ ಜೋಡಿ 'ವಿರೋಷ್' ವಿವಾಹ ಸಂಭ್ರಮಕ್ಕೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ವಿವಾಹದ ಸ್ಥಳ
ವರದಿಗಳ ಪ್ರಕಾರ, ಮದುವೆ ಸಮಾರಂಭವು ನಗರದಿಂದ ಸುಮಾರು 25 ಕಿಮೀ ದೂರದಲ್ಲಿರುವ ಐಟಿಸಿ ಹೋಟೆಲ್ಸ್ ಆವರಣದಲ್ಲಿ ನಡೆಯಲಿದೆ. ಇದು ಸುಂದರ ಅರಾವಳಿ ಪರ್ವತ ಶ್ರೇಣಿಯ ಮಧ್ಯೆ ನೆಲೆಸಿದ್ದು, ಸಾರ್ವಜನಿಕ ದೃಷ್ಟಿಯಿಂದ ಸಂಪೂರ್ಣ ದೂರದಲ್ಲಿರುವುದರಿಂದ ಖಾಸಗಿ ಹಾಗೂ ಆತ್ಮೀಯ ಸಮಾರಂಭಕ್ಕೆ ಸೂಕ್ತ ಸ್ಥಳವೆಂದು ಹೇಳಲಾಗಿದೆ.
ಜೋಡಿ ಆಗಮನದ ಹಿನ್ನೆಲೆಯಲ್ಲಿ ಉದಯಪುರ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅತಿಥಿಗಳು ವಾಣಿಜ್ಯ ವಿಮಾನಗಳ ಮೂಲಕ ಉದಯಪುರಕ್ಕೆ ಆಗಮಿಸಲಿದ್ದಾರೆ. ಫೆಬ್ರವರಿ 26ರಂದು ರಾಜಸ್ಥಾನದ ಪರಂಪರೆಯ ಅರಮನೆ ಶೈಲಿಯ ಸ್ಥಳದಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಕೇವಲ ಕುಟುಂಬ ಸದಸ್ಯರು ಹಾಗೂ ಆಪ್ತರು ಮಾತ್ರ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಕಠಿಣ 'ನೋ-ಫೋನ್' ನೀತಿ ಜಾರಿಯಾಗಿದ್ದು, ಸಂಪೂರ್ಣ ಗೌಪ್ಯತೆ ಕಾಪಾಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾರೂ ಮೊಬೈಲ್ ಬಳಸುವಂತಿಲ್ಲ. ಕಠಿಣ ಭದ್ರತೆ ಮತ್ತು ಸಂಪೂರ್ಣ ಗೌಪ್ಯತೆಯೊಂದಿಗೆ ನಡೆಯಲಿರುವ 'ವಿರೋಷ್' ಮದುವೆ ಈಗಾಗಲೇ ದೇಶದಾದ್ಯಂತ ಕುತೂಹಲ ಹುಟ್ಟಿಸಿದೆ.
ಸಾಲು ಸಾಲು ಸಿನಿಮಾ
ವಿವಾಹದ ಬಳಿಕವೂ ಇಬ್ಬರೂ ಚಿತ್ರರಂಗದಲ್ಲಿ ಬ್ಯುಸಿಯಾಗಲಿದ್ದಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿರುವ 'ರಣಬಾಲಿ' ಚಿತ್ರ ಸೆಪ್ಟೆಂಬರ್ 11ಕ್ಕೆ ಬಿಡುಗಡೆಯಾಗಲಿದೆ. ಇದು ಇವರ ವಿವಾಹದ ಬಳಿಕ ಬಿಡುಗಡೆಯಾಗುವ ಮೊದಲ ಚಿತ್ರವಾಗಲಿದೆ. ಇದಲ್ಲದೆ ವಿಜಯ್ ಅವರ 'ರೌಡಿ ಜನಾರ್ಧನ್' ಚಿತ್ರ ಈ ವರ್ಷದ ಡಿಸೆಂಬರ್‌ನಲ್ಲಿ ತೆರೆಗೆ ಬರಲಿದ್ದು, ರಶ್ಮಿಕಾ ಅವರು ಅಲ್ಲು ಅರ್ಜುನ್ ನಟನೆಯ AA22xA6 ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications