ರಶ್ಮಿಕಾ ತಾಯಿಯದ್ದೆ ಎನ್ನಲಾದ ಆಡಿಯೋ ವೈರಲ್
ದಕ್ಷಿಣ ಭಾರತದ ಖ್ಯಾತ ನಟಿ, 'ನ್ಯಾಷನಲ್ ಕ್ರಶ್' ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಅದ್ಧೂರಿ ವಿವಾಹ ಹಾಗೂ ರಿಸೆಪ್ಷನ್ ಫೋಟೋಗಳು ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಲಿವೆ. ಈ ಸಂತಸದ ನಡುವೆಯೇ ರಶ್ಮಿಕಾ ಅವರ ತಾಯಿ ಸುಮನ್ ಮಂದಣ್ಣ ಅವರದ್ದೆನ್ನಲಾದ ಹಳೆಯ ಆಡಿಯೋವೊಂದು ಈಗ ಮತ್ತೆ ವೈರಲ್ ಆಗುತ್ತಿದ್ದು, ಹೊಸ ಸಂಚಲನ ಸುಷ್ಟಿಸಿದೆ.
ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್ ಮಂದಣ್ಣ ಅವರದ್ದೇ ಎನ್ನಲಾದ ಹಳೆಯ ಸಂದರ್ಶನದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು. ಇದರಲ್ಲಿ ರಕ್ಷಿತ್ ಶೆಟ್ಟಿ ಅವರ ಕುಟುಂಬದವರ ಬಗ್ಗೆ ಮಾತನಾಡಿರುವುದು ಕೂಡ ಇದೆ ಎಂದು ವರದಿಯಾಗಿತ್ತು. ಈ ಬಗ್ಗೆ ರಶ್ಮಿಕಾ ಆಗಲಿ ಅಥವಾ ರಕ್ಷಿತ್ ಶೆಟ್ಟಿ ಕುಟುಂಬಸ್ಥರಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ರಶ್ಮಿಕಾ ತಾಯಿಯೇ ಮಾತನಾಡಿದ್ದಾರೆ ಎನ್ನುವ ಆಡಿಯೋ ಮಾತ್ರ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಅವರ ಕುರಿತಾದ ಹಳೆಯ ವಿಷಯಗಳನ್ನು ಮರುಕಳಿಸುತ್ತಿರುವ ಚರ್ಚೆಗಳ ನಡುವೆ, ಒಬ್ಬ ಯಶಸ್ವಿ ಕಲಾವಿದೆಯಾಗಿ ಅವರ ಸಾಧನೆ ಮತ್ತು ವ್ಯಕ್ತಿತ್ವವನ್ನು ಗಮನಿಸುವುದು ಬಹಳ ಮುಖ್ಯ. ಇಂದು ಅವರು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಮಿಂಚುವವರೆಗೆ ಬೆಳೆದುಬಂದಿದ್ದು ಅವರ ಅದಮ್ಯ ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಚಿತ್ರರಂಗಕ್ಕೆ ಪ್ರವೇಶಿಸಿದ ಬಳಿಕ ರಶ್ಮಿಕಾ, ತಮ್ಮ ಪ್ರತಿಭೆ ಮತ್ತು ಶ್ರಮದಿಂದಲೇ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿದ್ದಾರೆ.
ಕಳೆದ 9 ವರ್ಷಗಳಲ್ಲಿ ಅವರು ಕನ್ನಡ, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿ ತಮ್ಮನ್ನು ತಾವು ಸಾಬೀತುಪಡಿಸಿದ್ದಾರೆ. ಕೇವಲ ಯಶಸ್ಸಿನ ಹಿಂದೆಯೇ ಓಡದೆ, ಸವಾಲಿನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾ, ತಮ್ಮ ವೃತ್ತಿಪರ ಬದ್ಧತೆಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಈಗ ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದ್ದು, ಅಭಿಮಾನಿಗಳು ಶುಭಹಾರೈಕೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.












Click it and Unblock the Notifications