Pavithra Gowda: ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ ಪವಿತ್ರಾ ಗೌಡ ಪೋಸ್ಟ್ ವೈರಲ್: ನಂಬಿಕೆ ಸುಳ್ಳಾಯ್ತು!
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನ ಎ1 ಪವಿತ್ರಾ ಗೌಡ ಹಾಗೂ ಎ2 ದರ್ಶನ್ಗೆ ಇಂದು ಮಹತ್ವದ ದಿನವಾಗಿತ್ತು. ಈ ಹಿಂದೆ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದು ಮಾಡಬೇಡಿ ಎಂದು ನಟ ದರ್ಶನ್ ಹಾಗೂ ನಟಿ ಪವಿತ್ರ ಗೌಡ ಅವರು ಮನವಿ ಮಾಡಿದ್ದರು. ಇದೀಗ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಭವಿಷ್ಯ ಹೊರಬಿದಿದ್ದು, ದರ್ಶನ್ ಹಾಗೂ ಪವಿತ್ರಗೌಡಗೆ ಬಿಗ್ ಶಾಕ್ ಎದುರಾಗಿದೆ. ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಗೊಂಡವಾಗುವ ಮುನ್ನವೇ ಪವಿತ್ರಾ ಗೌಡ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿದ್ದು, ನಟಿಯ ಪೋಸ್ಟ್ ಎಲ್ಲರ ಗಮನ ಸೆಳೆದಿದೆ. ಅಲ್ಲದೇ ಪವಿತ್ರಾ ಗೌಡ ಅವರ ನಿರೀಕ್ಷೆ ಸುಳ್ಳಾಗಿದೆ.
ನಟಿ ಹಾಗೂ ದರ್ಶನ್ ಆಪ್ತೆ ಎನಿಸಿಕೊಂಡಿದ್ದ ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಆರೋಪಿ ಆಗಿದ್ದಾರೆ. ಆದರೆ, ತಮಗೂ ರೇಣುಕಾಸ್ವಾಮಿ ಕೊಲೆಗೂ ಯಾವುದೇ ಸಂಬಂಧ ಇಲ್ಲ ಎಂದು ಪವಿತ್ರಾ ಗೌಡ ಹೇಳುತ್ತಲೇ ಬರುತ್ತಿದ್ದಾರೆ. ರೇಣುಕಾಸ್ವಾಮಿ ಸಾವಿಗೆ ತಾವು ಕಾರಣರಲ್ಲ ಎಂಬುದು ಪವಿತ್ರಾ ಗೌಡ ಅವರ ವಾದ. ಇಂದು ಸುಪ್ರೀಂಕೋರ್ಟ್ನಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಏಳು ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿಗೂ ಮೊದಲು ಪವಿತ್ರಾ ಗೌಡ ಅವರು ನ್ಯಾಯ ಸಿಗೋ ಭರವಸೆಯಲ್ಲಿ ಎಂದು ಪೋಸ್ಟ್ ಮಾಡಿದ್ದರು.

ಇತ್ತೀಚೆಗೆ, ಪವಿತ್ರಾ ಸತ್ಯವೇ ಜಯಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇಂದು ಪವಿತ್ರಾ ಗೌಡ ಅವರು 'ಸತ್ಯ ಎಲ್ಲಕ್ಕಿಂತ ಶಕ್ತಿಯುತವಾದುದ್ದು. ನ್ಯಾಯ ಸಿಕ್ಕೇ ಸಿಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಅವರು ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಪವಿತ್ರಾ ಗೌಡ ಅವರು ಜಡ್ಜ್ಗಳ ಮುಂದೆ ತಮ್ಮ ಜಾಮೀನು ರದ್ದು ಮಾಡದಂತೆ ಕೋರಿದ್ದಾರೆ. ತಮಗೆ ಒಂದು ಮಗಳಿದ್ದಾಳೆ,ಅವರು 10 ನೇ ತರಗತಿ ಹಾಗೂ ವಯಸ್ಸಾದ ಪೋಷಕರಿದ್ದಾರೆ, ಅವರನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿ ನನ್ನದೇ. ಹೀಗಾಗಿ, ಜಾಮೀನು ರದ್ದುಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು.
ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದ್ದು, ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್ ಪೀಠವು ಈ ಮಹತ್ವದ ತೀರ್ಪು ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.












Click it and Unblock the Notifications