ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 7 ಮಂದಿಗೆ ಸಿಗಲಿದೆಯಾ ಜಾಮೀನು?

Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಇಂದು (ಸೆಪ್ಟೆಂಬರ್‌ 27) ಕೋರ್ಟ್‌ನಲ್ಲಿ ಈ ಇಬ್ಬರು ಸೇರಿದಂತೆ 7 ಮಂದಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮಾಹಿತಿ ಇಲ್ಲಿ ನೀಡಲಾಗಿದೆ ಗಮನಿಸಿ.

ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಮೂವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಎ15 ಆರೋಪಿ ಕಾರ್ತಿಕ್‌, ಎ17 ಆರೋಪಿ ನಿಖಿಲ್‌ಗೆ 57ನೇ ಸಿಸಿಎಚ್‌ ಕೋರ್ಟ್‌ ಜಾಮೀನು ನೀಡಿದ್ದು, ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.

Renukaswamy murder Actor Darshan Pavithra Gowda with 7 accused bail application hearing today

ಇದೀಗ ಇಂದು ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಟ ದರ್ಶನ್‌, ಲಕ್ಷ್ಮಣ್, ನಾಗರಾಜ್, ವಿನಯ್, ರವಿಶಂಕರ್ ಮತ್ತು ಪವನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ಸೆಪ್ಟೆಂಬರ್‌ 25ರಂದು ಪವಿತ್ರಾ ಗೌಡಳ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಕೋರ್ಟ್‌ ವಿಚಾರಣೆಯನ್ನು ಸೆಪ್ಟಂಬರ್‌ 27ಕ್ಕೆ ಮುಂದೂಡಿತ್ತು.

ಇಂದು ನಟ ದರ್ಶನ್‌ ಜೊತೆಗೆ ಪವಿತ್ರಾ ಗೌಡಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇನ್ನು ಒಂದೇ ದಿನ ಪವಿತ್ರಾ ಗೌಡ & ದರ್ಶನ್‌ಗೆ ಜಾಮೀನು ಸಿಗುವ ಸಾಧ್ಯತೆಯಿದೆ ಎಂದು ಅಂದಜಿಸಲಾಗುತ್ತಿದೆ. ಮತ್ತೊಂದೆಡೆ ಈಗಾಗಲೇ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಸಿಗುತ್ತಿದ್ದಂತೆಯೇ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಮುಖದಲ್ಲಿ ನಗು ಕಾಣುತ್ತಿದೆ. ಇದನ್ನು ಗಮನಿಸಿದರೆ ವಕೀಲವರು ಹೇಳುವ ಹಾಗೆ ಜಾಮೀನು ಸಿಗೋದು ಖಚಿತ ಎಂದು ಹೇಳಲಾಗ್ತಿದೆ.

57ನೇ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಲಿದ್ದು, ಪವಿತ್ರಾಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಲಿದ್ದಾರೆ. ಇನ್ನು ಸರ್ಕಾರದ ಪರ ವಕೀಲ ಎಸ್‌ಪಿಪಿ ಪ್ರಸನ್ನಕುಮಾರ್‌ ಆಕ್ಷೇಪಣೆ ಸಲ್ಲಿಸಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿ ಕಾಲಾವಕಾಶ ಕೇಳಿದ ಹಿನ್ನೆಲೆ ಈ ಇಬ್ಬರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿಕೆ ಮಾಡಿತ್ತು. ಆದ್ದರಿಂದ ಇಂದು ಎಸ್‌ಪಿಪಿ ಆಕ್ಷೇಪಣೆ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+