ನಟ ದರ್ಶನ್‌ ಜಾಮೀನು ರದ್ದಾಗುತ್ತಾ? ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಏನಾಯ್ತು?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ತೂಗುದೀಪ ಹಾಗೂ ಇನ್ನಿತರ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ದರ್ಶನ್ ಸೇರಿದಂತೆ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಬೇಕು ಎಂದು ಪೊಲೀಸರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಕೈಗೆತ್ತಿಕೊಂಡಿದೆ. ಪೊಲೀಸರು ಹೆಚ್ಚುವರಿ ಸಾಕ್ಷ್ಯಾಧಾರಗಳೊಂದಿಗೆ ಮತ್ತೊಂದು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಬೇಲ್‌ ರದ್ದು ಮಾಡುವಂತೆ ಕೋರಿದ್ದರು. ಸುಪ್ರೀಂಕೋರ್ಟ್‌ನಲ್ಲಿ ನಡೆದ ಈ ವಿಚಾರಣೆಯಲ್ಲಿ ಏನಾಯ್ತು ಎಂಬ ಮಾಹಿತಿ ಇಲ್ಲಿದೆ..

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಇದರ ನಡುವೆಯೇ ಅವರ ಜಾಮೀನು ರದ್ದು ಮಾಡುವಂತೆ ಕೋರಿ ಪೊಲೀಸರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ದರ್ಶನ್‌ ಹಾಗೂ ಪ್ರಕರಣದ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

Renukaswamy Murder Case Actor Darshan Thoogudeepa Pavithra Gowda Supreme Court Relief

ರೇಣುಕಾಸ್ವಾಮಿ ಕೊಲೆ ಕೇಸ್‌ನ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಸದ್ಯ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮುಂದೂಡಿದೆ. ಈಗ ಸುಪ್ರೀಂಕೋರ್ಟ್‌ಗೆ ಬೇಸಿಗೆ ರಜೆ ಇದ್ದು, ಜುಲೈ 14ಕ್ಕೆ ರಜೆ ಮುಗಿಯಲಿದೆ. ಈ ರಜೆ ಮುಗಿದ ನಂತರ ಈ ಕೇಸ್‌ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಹಾಗಾಗಿ ದರ್ಶನ್‌ ಹಾಗೂ ಆರೋಪಿಗಳಿಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಿದೆ. ಬೇಸಿಗೆ ರಜೆ ಬಳಿಕವೇ ವಿಚಾರಣೆ ನಡೆಸುವುದಾಗಿ ಹೇಳಿದ್ದು, ಅಲ್ಲಿಯವರೆಗೆ ನಟ ದರ್ಶನ್‌ ನಿರಾತಂಕ ಎನ್ನಲಾಗಿದೆ.

Take a Poll

ಹೆಚ್ಚುವರಿ ಚಾರ್ಜ್‌ಶೀಟ್‌ ಕಂಟಕ?

ಕೊಲೆ ಕೇಸ್‌ ಸಂಬಂಧ ಈಗಾಗಲೇ ಚಾರ್ಜ್‌ಶೀಟ್‌ ಸಲ್ಲಿಸಿರುವ ಪೊಲೀಸರು ಇದೀಗ ಮತ್ತೆ 132 ಪುಟಗಳ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಎಸಿಪಿ ಚಂದನ್ ಅವರು ಕೋರ್ಟ್ಗೆ ಈ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಕೊಲೆ ಬಳಿಕ ಶೆಡ್ನಲ್ಲಿ ಏನೆಲ್ಲ ಆಯ್ತು ಎಂಬ ಬಗ್ಗೆ ಇದರಲ್ಲಿ ಮಹತ್ವದ ಮಾಹಿತಿ ಇದ್ದು, ತನಿಖಾಧಿಕಾರಿಗಳು ಆರೋಪಿಗಳ ಮೊಬೈಲ್‌ ಅನ್ನು ಲ್ಯಾಬ್ಗೆ ಕಳುಹಿಸಿದ್ದರು. ಇದನ್ನು ರಿಟ್ರೀವ್‌ ಮಾಡಿದಾಗ ಕೆಲ ಡಿಲೀಟ್ ಆಗಿದ್ದ ಫೋಟೋಗಳು ಮತ್ತೆ ಪತ್ತೆಯಾಗಿವೆ. ಪಟ್ಟಣಗೆರೆ ಶೆಡ್ಗೆ ಸಂಬಂಧಿಸಿದ ಮಹತ್ವದ ಸಾಕ್ಷಿಗಳು ಸಿಕ್ಕ ಹಿನ್ನೆಲೆ ಇದನ್ನು ಹೆಚ್ಚುವರಿಯಾಗಿ ಚಾರ್ಜ್‌ಶೀಟ್‌ನಲ್ಲಿ ಸಲ್ಲಿಸಿ, ಇದನ್ನು ಸುಪ್ರೀಂಕೋರ್ಟ್ನಲ್ಲಿ ವಾದಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.

Renukaswamy Murder Case Actor Darshan Thoogudeepa Pavithra Gowda Supreme Court Relief

ಈ ಕೇಸ್‌ ಕುರಿತಂತೆ ಮೊದಲ ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಉಲ್ಲೇಖಿಸಲಾಗಿತ್ತು. ಈಗ 10 ಮಂದಿ ಹೆಚ್ಚುವರಿ ಸಾಕ್ಷಿದಾರರ ಹೇಳಿಕೆಯನ್ನು ಕೂಡ ಇದರಲ್ಲಿ ದಾಖಲಿಸಲಾಗಿದೆ. ಮುಖ್ಯವಾಗಿ ಈ ಕೇಸ್‌ಗೆ ತಿರುವು ನೀಡಬಲ್ಲ ಕೆಲವು ಪೋಟೋಗಳು, ಎಫ್‌ಎಸ್‌ಎಲ್‌ ವರದಿ, ದೂರವಾಣಿ ಕರೆಗಳ ವಿವರ ಸೇರಿಗಳು ಸೇರಿ ಹಲವು ದಾಖಲೆಗಳನ್ನು ಸೇರ್ಪಡೆ ಮಾಡಲಾಗಿದೆ. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಸ್ತಾಪಿಸಿ, ಆರೋಪಿಗಳ ಜಾಮೀನು ರದ್ದು ಮಾಡುವಂತೆ ವಾದಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+