ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ & ನಟ ದರ್ಶನ್ ಬಗ್ಗೆ ನಟಿ ರಮ್ಯಾ ಪೋಸ್ಟ್ ವೈರಲ್ !
ನಟಿ ರಮ್ಯಾ ಅವರು ಮತ್ತೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಧ್ವನಿ ಎತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದರು. ಈ ಹಿಂದೆಯೂ ಅವರು ದರ್ಶನ್ ಅವರ ಬಗ್ಗೆ ನಟಿ ರಮ್ಯಾ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿರುವುದು ಇದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದು. ಸುಪ್ರೀಂ ಕೋರ್ಟ್‌ನ ವಿಚಾರಣೆಯ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ನಟಿ ರಮ್ಯಾ ಅವರು ಬರೆದುಕೊಂಡಿದ್ದಾರೆ. ಈ ಮೂಲಕ ಮತ್ತೆ ನಟಿ ರಮ್ಯಾ ಅವರು ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ.
ಈ ಹಿಂದೆ ಹಲವು ಹಿರಿಯ ಹಾಗೂ ಪ್ರಭಾವಿಗಳೇ ನಟ ದರ್ಶನ್ ಅವರ ಪರವಾಗಿ ಬ್ಯಾಟಿಂಗ್ ಮಾಡಿದರೂ ಸಹ ನಟಿ ರಮ್ಯಾ ಅವರು ಮಾತ್ರ ನಟ ದರ್ಶನ್ ಅವರ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದರು. ಇದೀಗ ಮತ್ತೆ ರಮ್ಯಾ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನ ಬಗ್ಗೆ ಎರಡು ಸಾಲುಗಳನ್ನು ತಮ್ಮ ಸೋಷಿಯಲ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಎರಡು ಪೋಸ್ಟ್‌ಗಳನ್ನು ನಟಿ ರಮ್ಯಾ ಅವರು ಹಂಚಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಅವರು ಈ ಹಿಂದೆ ಜೈಲು ಸೇರಿದ್ದ ಸಂದರ್ಭದಲ್ಲಿ ನಟ ದರ್ಶನ್ ಅವರನ್ನು ಹಲವರು ಜೈಲಿಗೆ ಭೇಟಿ ನೀಡಿ ವಿಚಾರಿಸಿದ್ದರು. ಕನ್ನಡ ಚಿತ್ರರಂಗದ ಹಲವು ಗಣ್ಯರು ಜೈಲಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಅಲ್ಲದೇ ಹಂಸಲೇಖ ಅವರಂತಹ ಘಟಾನುಘಟಿಗಳೇ ಅವರ ಪರ ಮೃದುಧೋರಣೆಯನ್ನು ಅನುಸರಿಸಿದ್ದರು. ರಕ್ಷಿತಾ, ಪ್ರೇಮ್ ಹಾಗೂ ಸುಮಲತಾ ಅಂಬರೀಷ್ ಸೇರಿದಂತೆ ಹಲವರು ದರ್ಶನ್ ಭೇಟಿ ಮಾಡಿದ್ದರು. ಅವರ ಪರವಾಗಿ ಹಲವರು ಮಾಧ್ಯಮಗಳ ಮುಂದೆ ಮಾತನಾಡಿದ್ದರು. ಇನ್ನೂ ಹಲವರು ಯಾವುದೇ ಹೇಳಿಕೆ ನೀಡದೆ ಮೌನಕ್ಕೆ ಜಾರಿದ್ದರು. ಆದರೆ ನಟಿ ರಮ್ಯಾ ಅವರು ಪ್ರಾರಂಭದಲ್ಲೇ ಈ ಪ್ರಕರಣದ ಬಗ್ಗೆ ಗಂಭೀರವಾಗಿ ರಿಯಾಕ್ಟ್ ಮಾಡಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪ ಹೊತ್ತಿರುವಂತಹ ನಟ ದರ್ಶನ್‌ಗೆ ತನಿಖೆ ಆಗುವುದಕ್ಕಿಂತ ಮುಂಚಿತವಾಗಿಯೇ ಈ ಪ್ರಕರಣದಲ್ಲಿ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು. ಈ ನಡುವೆ ಅವರು ನಟ ದರ್ಶನ್ ಅವರ ಬಗ್ಗೆ ಕೇಳಿದ್ದ ಪ್ರಶ್ನೆಗೆ ನೋ ಕಮೆಂಟ್ಸ್ ಎಂದಿದ್ದರು. ಇದೀಗ ಸುಪ್ರೀಂ ಕೋರ್ಟ್‌ನ ವಿಚಾರಣೆಯ ಬಗ್ಗೆ ಸಂತೋಷ ಹಂಚಿಕೊಂಡಿದ್ದಾರೆ. ಅಲ್ಲದೇ ಸುಪ್ರೀಂ ಕೋರ್ಟ್ ವಿಚಾರಣೆಯ ಅಂಶಗಳು ಹೊಸ ಆಶಾಕಿರಣ ಮೂಡಿಸಿದೆ ಎಂದು ನಟಿ ರಮ್ಯಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ನಟಿ ರಮ್ಯಾ ಹೇಳಿದ್ದೇನು: ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ನಟ ದರ್ಶನ್ ವಿಚಾರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅಂತರ ಕಾಪಾಡಿಕೊಂಡಿದ್ದರು. ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ - ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ವಿಶೇಷವಾದ ಟ್ವೀಟ್ ಹಂಚಿಕೊಂಡಿದ್ದಾರೆ.
SC is a ray of hope for the common people of India- justice for the family of Renukaswamy 🤞🏽https://t.co/Qr0biXBYgY pic.twitter.com/wSSi3klhTv
— Ramya/Divya Spandana (@divyaspandana) July 24, 2025
"ಭಾರತದ ಸಾಮಾನ್ಯ ಜನರಿಗೆ ಎಸ್‌ಸಿ (ಸುಪ್ರೀಂ ಕೋರ್ಟ್) ಒಂದು ಆಶಾಕಿರಣ- ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ 🤞🏽" ಎಂದು ಬರೆದುಕೊಂಡಿದ್ದಾರೆ. ಇದೀಗ ನಟಿ ರಮ್ಯಾ ಅವರ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.












Click it and Unblock the Notifications