ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಕಾಡ್ತಿದೆ ಕೆಟ್ಟ ಸಮಸ್ಯೆ: ನಿದ್ದೆ ಇಲ್ಲದ ರಾತ್ರಿ ಕಳೆಯಲು ಕಾರಣವೇನು?
ಬೆಂಗಳೂರು, ಆಗಸ್ಟ್ 31: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಸುಮಾರು ಮೂರು ತಿಂಗಳು ಸಮೀಪಿಸುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಆರೋಪದ ಮೇಲೆ ಸದ್ಯ ದರ್ಶನ್‌ನನ್ನು ಬೆಂಗಳೂರಿನಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಜೈಲಿನಲ್ಲಿ ಎರಡು ರಾತ್ರಿ ಕಳೆದಿರುವ ದರ್ಶನ್‌ಗೆ ಇದೀಗ ಹೊಸ ಸಮಸ್ಯೆ ಎದುರಾಗಿದೆ.
ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುವ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ದರ್ಶನ್ ಒಲ್ಲೆ ಎಂದಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ತೆರಳಲು ಹಿಂದೇಟು ಹಾಕಿದ್ದರು. ಆದರೆ ನ್ಯಾಯಾಲಯದ ಆದೇಶದ ಮೇರೆಗೆ ದರ್ಶನ್‌ನನ್ನು ಸ್ಥಳಾಂತರ ಮಾಡಲಾಗಿದೆ. ಒಬ್ಬಂಟಿಯಾಗಿ ಬಳ್ಳಾರಿಗೆ ಬಂದ ದರ್ಶನ್‌ಗೆ ಈಗ ಜೈಲಿನ ಸೆಲ್‌ನಲ್ಲಿ ಹೊಸ ಕೆಟ್ಟ ಸಮಸ್ಯೆ ಕಾಡುತ್ತಿದ್ದು, ಈ ಸಮಸ್ಯೆಯಿಂದ ಪಾರು ಮಾಡುವಂತೆ ದರ್ಶನ್ ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

ಬಳ್ಳಾರಿ ಕೇಂದ್ರ ಕಾರಾಗೃಹದ ಹೈಸೆಕ್ಯೂರಿಟಿ ಸೆಲ್ನ 15ನೇ ಕೋಣೆಯಲ್ಲಿರುವ ದರ್ಶನ್ ಸೊಳ್ಳೆ ಕಾಟಕ್ಕೆ ಹೈರಾಣಾಗಿದ್ದಾರೆ. ಎರಡು ರಾತ್ರಿಗಳನ್ನು ಕಳೆದಿರುವ ದರ್ಶನ್ಸೊಳ್ಳೆಯಿಂದ ನಿದ್ದೆ ಮಾಡಲಾಗದೇ ಒದ್ದಾಡಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಎರಡು ರಾತ್ರಿಗಳನ್ನು ದರ್ಶನ್ ಸೊಳ್ಳೆ ಕಾಟದಿಂದ ನಿದ್ದೆ ಇಲ್ಲದೇ ಕಳೆಯುವಂತಾಗಿದೆ. ಹೀಗಾಗಿ ಸೊಳ್ಳೆ ಕಾಟಕ್ಕೆ ಮುಕ್ತಿ ಕೊಡುವಂತೆ ಏನಾದರೂ ವ್ಯವಸ್ಥೆ ಮಾಡಿ ಎಂದು ದರ್ಶನ್ ಜೈಲು ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ದರ್ಶನ್ ಬಳ್ಳಾರಿ ಜೈಲು ಸೇರಲು ಕಾರಣವೇನು..?
ಇತ್ತೀಚಿಗೆ ದರ್ಶನ್ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಫೋಟೋವೊಂದು ವೈರಲ್ ಆಗಿತ್ತು. ದರ್ಶನ್ ಟೀ ಕುಡಿಯುತ್ತಾ, ಸಿಗರೇಟ್ ಸೇದುತ್ತಾ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನಾ ಎನ್ನುವ ರೌಡಿಶೀಟರ್ ಜೊತೆಗೆ ಜೈಲಿನ ಆವರಣದ ಒಳಗೆ ಕುಳಿತಿರುವ ಫೋಟೋ ಎಲ್ಲೆಡೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಮತ್ತೊಬ್ಬ ಆರೋಪಿ ಜೊತೆಗೂಡಿ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ ವಿಡಿಯೋ ಕೂಡ ವೈರಲ್ ಆಗಿತ್ತು.

ಈ ಫೋಟೋ ಹಾಗೂ ವಿಡಿಯೋ ವೈರಲ್ ಆದ ಬಳಿಕ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನುವ ಆರೋಪ ಜೋರಾಗಿತ್ತು. ಈ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಮಾಡಿದ ಮನವಿ ಮೇರೆಗೆ ನ್ಯಾಯಾಲಯ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಿತ್ತು. ಕೋರ್ಟ್ ಪ್ರಕರಣದ ಎ-2 ಆರೋಪಿ ದರ್ಶನ್‌ನನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಶಿಫ್ಟ್ ಮಾಡಲು ಅನುಮತಿ ನೀಡಿತ್ತು.












Click it and Unblock the Notifications