ನಟ ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಬಗ್ಗೆ ಮೃತ ರೇಣುಕಾಸ್ವಾಮಿ ತಂದೆ ಹೇಳಿದ್ದೇನು?
ಚಿತ್ರದುರ್ಗ, ಅಕ್ಟೋಬರ್, 14: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ಕೋರ್ಟ್ ವಜಾಗೊಳಿಸಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೃತ ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯಿಸಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇಂದು (ಅಕ್ಟೋಬರ್ 14) ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಕೊಲೆ ಆರೋಪಿಗಾಳಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇನ್ನು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ಬಳ್ಳಾರಿ ಜೈಲೇ ಗತಿಯಾಗಿದ್ದು, ಮತ್ತೊಂದೆಡೆ ಪವಿತ್ರಾ ಗೌಡ ಈ ಸುದ್ದಿ ಕೇಳಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ನಿಂದ ಈ ತೀರ್ಪು ಹೊರ ಬರುತ್ತಿದ್ದಂತೆಯೇ ಮೃತನ ತಂದೆ ಕಾಶಿನಾಥ್ ಭಾವುಕರಾಗಿದ್ದಾರೆ. "ನ್ಯಾಯಾಂಗದ ಬಗ್ಗೆ ನನಗೆ ಗೌರವ ಇದೆ. ಪೊಲೀಸರು ಪ್ರಕರಣದಲ್ಲಿ ತುಂಬಾ ಚನ್ನಾಗಿ ಕೆಲಸ ಮಾಡಿದ್ದಾರೆ. ನ್ಯಾಯಾಂಗದ ತೀರ್ಪನ್ನು ಸ್ವಾಗತಿಸುತ್ತೇನೆ," ಎಂದು ಹೇಳುತ್ತಲೇ ಕಣ್ಣೀರಿಟ್ಟರು.
"ಅಲ್ಲದೆ, ಕೋರ್ಟ್‌ನಲ್ಲಿ ಎಸ್‌ಪಿಪಿ ಪ್ರಸನ್ನ ಕುಮಾರ್ ಕೂಡ ತಮ್ಮ ಪರವಾಗಿ ಉತ್ತಮವಾಗಿ ವಾದ ಮಂಡನೆ ಮಾಡುತ್ತಿದ್ದಾರೆ," ಎಂದು ಚಿತ್ರದುರ್ಗದ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ರೇಣುಕಾಸ್ವಾಮಿ ತಂದೆ ಹೇಳಿದರು.












Click it and Unblock the Notifications