ಗಣರಾಜ್ಯೋತ್ಸವ ಸಂಭ್ರಮಕ್ಕೆ ಕನ್ನಡಿಗರ ರಾಜಧಾನಿ ಬೆಂಗಳೂರು...
ಬೆಂಗಳೂರು: ಈ ಬಾರಿ ಗಣರಾಜ್ಯೋತ್ಸವ ದಿನಾಚರಣೆ ಆದ್ಧೂರಿಯಾಗಿ ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧೆತೆ ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ರಾಜ್ಯ ಮಟ್ಟದ ಸಮಾರಂಭದ ಸಿದ್ಧತೆಗಳ ಕುರಿತು ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜನವರಿ 26 ರಂದು ಬೆಳಗ್ಗೆ 8.58 ಕ್ಕೆ ರಾಜ್ಯಪಾಲರು ಮೈದಾನದಕ್ಕೆ ಆಗಮಿಸಲಿದ್ದು 9 ಗಂಟೆ ವೇಳೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣ ಬಳಿಕ ಮಾನ್ಯ ರಾಜ್ಯಪಾಲರು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸುವರು. ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶವನ್ನ ಆ ನಂತರ ನೀಡಲಿದ್ದಾರೆ ಎಂದು ತಿಳಿಸಿದರು.

1500 ಮಕ್ಕಳು ಕಾರ್ಯಕ್ರಮಕ್ಕೆ ಹಾಜರ್
ಪಂಥ ಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನ ಒಳಗೊಂಡಂತೆ ಕವಾಯತು ಮತ್ತು ಬ್ಯಾಂಡ್‌ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1,150 ಜನರು ಭಾಗವಹಿಸಲಿದ್ದಾರೆ. ಹಾಗೂ ಶಾಲಾ ಮಕ್ಕಳ ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಗಳಲ್ಲಿ ಸುಮಾರು 1500 ಮಕ್ಕಳು ಭಾಗವಹಿಸಲಿದ್ದಾರೆ, ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.
ಶಾಲಾ ವಿದ್ಯಾರ್ಥಿಗಳಿಗೆ ಅವಕಾಶ
ಶಂಕರ್ ಭಾರತಿಪುರ & ತಂಡದಿಂದ ನಾಡಗೀತೆ ಹಾಗೂ ರೈತಗೀತೆ ಜೊತೆಗೆ ಈ ಕಾರ್ಯಕ್ರಮವು ಆರಂಭ ಆಗಲಿದೆ. ಬೆಂಗಳೂರು ಉತ್ತರ ಜಿಲ್ಲೆಯ ಹೆಗ್ಗನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ 700 ಮಕ್ಕಳು "ಈ ದೇಶವು ನಮಗಾಗಿಯೇ ಎಂದೆಂದಿಗೂ" ಹಾಗೂ. ಬೆಂಗಳೂರು ದಕ್ಷಿಣ ಜಿಲ್ಲೆಯ ಪಿಳ್ಳಣ್ಣ ಗಾರ್ಡನ್ ನ ಬಿಬಿಎಂಪಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 700 ಮಕ್ಕಳು 'ಅಕ್ಷರದವ್ವ ಸಾವಿತ್ರಿಬಾಯಿ ಪುಲೆ" ಕುರಿತು ನೃತ್ಯ ಪ್ರದರ್ಶಿಸಲಿದ್ದಾರೆ ಎಂದರು.
ಎಷ್ಟು ಆಸನದ ವ್ಯವಸ್ಥೆ ಇರಲಿದೆ?
ಗಣರಾಜ್ಯೋತ್ಸವ ದಿನಾಚರಣೆ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದ್ದು. ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ, ಅಗತ್ಯ ಇರುವಷ್ಟು ಆಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿ ನಿಯೋಜಿಸಲಾಗಿದೆ ಹಾಗೂ ನಗರದ ಹಲವು ಆಸ್ಪತ್ರೆ ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪೊಲೀಸರಿಂದ ಬೆಂಗಳೂರಲ್ಲಿ ಭಾರಿ ಭದ್ರತೆ
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ ಮಾತನಾಡಿ, ಗಣರಾಜ್ಯೋತ್ಸವ ದಿನಾಚರಣೆಗಾಗಿ ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲ ವಿಭಾದಿಂದ 09 ಡಿಸಿಪಿ, 16 ಎಸಿಪಿ, 46 ಪಿಐ, 109 ಪಿಎಸ್ಐ, 77 ಎಎಸ್‌ಐ, 594 ಎಚ್‌ಸಿ/ಪಿಸಿ, 87-ಮಹಿಳಾ ಸಿಬ್ಬಂದಿ ಜೊತೆಗೆ 184 ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿ ಮತ್ತು 56 ಕ್ಯಾಮರಾ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮೈದಾನದ ಸುತ್ತಲೂ ಸಿಸಿ ಕ್ಯಾಮೆರಾ
ಸಂಚಾರ ನಿರ್ವಹಣೆಗಾಗಿ 04 ಡಿಸಿಪಿ, 06 ಎಸಿಪಿ, 21 ಪಿಐ, 33 ಪಿಎಸ್ ಐ & 97-ಎಎಸ್ ಐ, 414 ಎಚ್‌ಸಿ/ಪಿಸಿ ಒಟ್ಟಾರೆ 575 ಅಧಿಕಾರಿ ಹಾಗೂ ಸಿಬ್ಬಂದಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದರು. ಮೈದಾನ ಬಂದೋಬಸ್ತ್ ಕರ್ತುವ್ಯಕ್ಕೆ 10 ಕೆಎಸ್‌ಆರ್‌ಪಿ / ಸಿಎಆರ್ ತುಕಡಿ, 2 ಅಗ್ನಿ ಶಾಮಕ ವಾಹನಗಳು, 2 ಅಂಬುಲೆನ್ಸ್, 4- ಖಾಲಿ ವಾಹನಗಳು, 1 ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಡಿ ಸ್ವಾಟ್, 1 ಆರ್.ಐ.ಪಿ ಭದ್ರತೆಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮೈದಾನ ಸುತ್ತ ಭದ್ರತೆ ಮತ್ತು ಸುರಕ್ಷತೆಗೆ 100 ಸಿಸಿ ಕ್ಯಾಮೆರಾ ವ್ಯವಸ್ಥೆ ಹಾಗೂ 3 ಬ್ಯಾಗೇಜ್ ಸ್ಕ್ಯಾನರ್, 20 ಡಿಎಫ್ಎಂಡಿ, 40 ಎಚ್‌ಎಚ್‌ಎಂಡಿ ಕೂಡ ಅಳವಡಿಸಲಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications