Happy Birthday Yash: ರಾಕಿಂಗ್ ಸ್ಟಾರ್ ಯಶ್‌ಗೆ 39ರ ಸಂಭ್ರಮ: ‘ಟಾಕ್ಸಿಕ್’ ಸಿನಿಮಾ ಟೀಸರ್ ರಿಲೀಸ್
ರಾಕಿಂಗ್ ಸ್ಟಾರ್ ಯಶ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಜನವರಿ 8ರಂದು ನಟ ಯಶ್ 39ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇವರ ಹುಟ್ಟುಹಬ್ಬದಂದೇ ಅವರ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್' ಟೀಸರ್ ರಿಲೀಸ್ ಆಗಲಿದೆ. ಇನ್ನೂ ಈ ಬಾರಿ ರಾಕಿ ಬಾಯ್ ತಮ್ಮ ಹುಟ್ಟುಹಬ್ಬವನ್ನು ಸಿಂಪಲ್ಲಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ.
ಯಾರೂ ಕೂಡ ಮನೆ ಬಳಿ ಬಂದು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಲು ಮುಂದಾಗಬಾರದು. ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸುವಂತೆ ಅಭಿಮಾನಿಗಳಿಗೆ ಯಶ್ ಮನವಿ ಮಾಡಿದ್ದಾರೆ. ಈ ಮೂಲಕ ಅವರು ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಸ್ಪಷ್ಟಣೆ ನೀಡಿದ್ದಾರೆ.

ಇನ್ನೂ ಯಶ್ ಜನ್ಮದಿನದ ಸಂಭ್ರಮದಲ್ಲಿ ಅವರು ಅಭಿನಯದ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ. ಇಂದು ಬೆಳಿಗ್ಗೆ 10:25ಕ್ಕೆ ಟೀಸರ್ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ಟೀಸರ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಕೆಜಿಎಫ್ ಸಿನಿಮಾ ಮೂಲಕ ಭಾರತಾದ್ಯಾಂತ ಅಪಾರ ಅಭಿಮಾನಿಗಳನ್ನು ಸಂಪಾದನೆ ಮಾಡಿದ ನಟ 'ರಾಕಿಂಗ್ ಸ್ಟಾರ್' ಯಶ್ ಅವರಿಗೆ ಕಳೆದ ದಿನ ರಾತ್ರಿ 12 ಗಂಟೆಯಿಂದರೇ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಭಿಮಾನಿಗಳು ಮತ್ತು ಚಿತ್ರರಂಗ ಗಣ್ಯರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಹೀಗಾಗಿ ಎಕ್ಸ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಟ್ರೆಂಡ್ ಆಗಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ 1986 ಜನವರಿ 8ರಂದು ಹಾಸನ ಜಿಲ್ಲೆಯ ಭುವನಹಳ್ಳಿಯಲ್ಲಿ ಜನಿಸಿದರು. ಅವರ ಮೊದಲ ಹೆಸರು ನವೀನ್ ಕುಮಾರ್ ಗೌಡ. ಅಭಿನಯ ಹಾಗೂ ನಾಟಕದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಅವರು ಮೊದಲು ಧಾರವಾಹಿಗಳಲ್ಲಿ ಗುರುತಿಸಿಕೊಂಡು ನಂತರ ಕನ್ನಡ ಚಿತ್ರರಂಗದಲ್ಲಿ ಮಿಂಚಿದರು. ಬಳಿಕ ಅವರಿಗೆ ಯಶ್ ಎಂದು ಕರೆಯಲಾಯಿತು. ಕೆಜಿಎಫ್ ಚಾಪ್ಟರ್ 1 ಮೂಲಕ ಅವರು ಇಡೀ ಭಾರತೀಯ ಚಿತ್ರರಂಗದ ಸ್ಟಾರ್ ನಟ ಎಂದೆನಿಸಿಕೊಂಡಿದ್ದಾರೆ.
ಅವಕಾಶ ಸಿಕ್ಕ ವರ್ಷಗಳೆಲ್ಲಾ ಅಭಿಮಾನಿಗಳು ಯಶ್ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಆದರೆ ಈ ವರ್ಷ ಯಶ್ ಬರ್ತಡೇಯನ್ನು ಸಾರ್ವಜನಿಕವಾಗಿ ಆಚರಿಸಲು ಅವಕಾಶ ಸಿಕ್ಕಿಲ್ಲ. ದೂರದಿಂದಲೇ ಶುಭಾಶಯ ತಿಳಿಸಿ ಎಂದು ಸ್ವತ: ಯಶ್ ಅವರೇ ಮನವಿ ಮಾಡಿದ್ದಾರೆ.
ಹೀಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳು ಶುಭಾಶಯಗಳನ್ನು ಹೇಳುತ್ತಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ಯಶ್ ಅಭಿಮಾನಿಗಳು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಇನ್ನು ಯಶ್‌ಗೆ ಮಕ್ಕಳ ಕಡೆಯಿಂದಲೂ ವಿಶೇಷವಾದ ಉಡುಗೊರೆ ಸಿಕ್ಕಿದೆ. ಯಥರ್ವ್ ಮತ್ತು ಆಯ್ರಾ ಇಬ್ಬರು ಅಪ್ಪನಿಗೆ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ.
ಇನ್ನು ಯಶ್ ಹುಟ್ಟು ಹಬ್ಬ ಅಂದರೆ ಅವರ ಸಿನಿಮಾದ ಕಡೆಯಿಂದ ಏನಾದರೂ ಒಂದು ಅಪ್ಡೇಟ್‌ಗಾಗಿ ಅವರ ಅಭಿಮಾನಿಗಳು ಎದುರು ನೋಡುತ್ತಿರುತ್ತಾರೆ. ಅಂತೆಯೇ 'ಟಾಕ್ಸಿಕ್' ಸಿನಿಮಾ ತಂಡದಿಂದ ಯಾವ ಅಪ್ಡೇಟ್ ಹೊರ ಬರದೆ ಎಂದು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. 'ಟಾಕ್ಸಿಕ್' ಸಿನಿಮಾ ತಂಡ ಯಶ್ ಗೆ ಸರ್ಪ್ರೈಸ್ ಕೊಡಲಿದ್ದು, ಇಂದು ಸಿನಿಮಾದ ಟೀಸರ್ ಬಿಡುಗಡೆ ಮಾಡಲಿದೆ.
ಸ್ಟಾರ್ ನಟರ ಹುಟ್ಟು ಹಬ್ಬ ಬಂತು ಅಂದ್ರೆ ಸಾಕು ಅದು ಅಭಿಮಾನಿಗಳ ಪಾಲಿನ ದೊಡ್ಡ ಹಬ್ಬ. ಕ್ಯಾಲೆಂಡರ್‌ನಲ್ಲಿ ಹಬ್ಬಗಳನ್ನು ಮನೆಯಲ್ಲಿ ಮಾಡುತ್ತಾರೋ ಇಲ್ಲವೋ, ಆದರೆ ತಮ್ಮ ನೆಚ್ಚಿನ ಸಿನಿಮಾ ನಟರ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಆದರೆ ಈ ಬಾರಿ ಯಶ್ ಹುಟ್ಟುಹಬ್ಬವನ್ನು ಸಾರ್ವಜನಿಕವಾಗಿ ಆಚರಿಸಿಕೊಳ್ಳುತ್ತಿಲ್ಲ. ಒಂದು ವೇಳೆ ಯಶ್ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಅವಕಾಶ ನೀಡಿದ್ದರೆ ರಾತ್ರಿ 12 ಗಂಟೆಯಿಂದಲೇ ಅವರ ಅಭಿಮಾನಿಗಳು ಅವರ ಮನೆ ಬಳಿ ಹೋಗಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಬರುತ್ತಿದ್ದರು.
ಆದರೆ ಇದಕ್ಕೆ ಈ ಬಾರಿ ಅವಕಾಶ ಸಿಕ್ಕಿಲ್ಲವಾದ್ದರಿಂದ ತಮ್ಮ ನೆಚ್ಚಿನ ನಾಯಕನ ಫೋಟೋ ಹಂಚಿಕೊಂಡು ತಾವಿರುವ ಸ್ಥಳದಿಂದಲೇ ಕೇಕ್ ಕತ್ತರಿಸಿ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.












Click it and Unblock the Notifications