Rocking Star Yash: ಪ್ಯಾನ್ ಇಂಡಿಯಾ 'ರಾಮಾಯಣ' ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ನಿರ್ಮಾಪಕ!
ಬೆಂಗಳೂರು, ಏಪ್ರಿಲ್. 12: 'ಆದಿಪುರುಷ್' ಎಂಬ ಕಳಪೆ ಸಿನಿಮಾ ನೀಡಿ ಸಿನಿ ಪ್ರೇಕ್ಷಜರ ಆಕ್ರೋಶಕ್ಕೆ ಗುರುಯಾಗಿದ್ದ ಬಾಲಿವುಡ್ ಮತ್ತೊಮ್ಮೆ ರಾಮಾಯಣವನ್ನು ತೆರೆಮೇಲೆ ತರಲು ಚಿಂತಿಸುತ್ತಿದೆ. ಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ 'ರಾಮಾಯಣ' ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ.
ನಿತೀಶ್ ತಿವಾರಿ ಅವರ 'ರಾಮಾಯಣ' ಸಿನಿಮಾದಲ್ಲಿ ನಟ ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ಅವರು ರಾಮ - ಸೀತೆ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅಂದಹಾಗೆ, ರಾವಣನ ಪಾತ್ರದಲ್ಲಿ ನಟ ಯಶ್ ನಟಿಸಲಿದ್ದಾರೆ ಎಂಬ ಸುದ್ದಿ ಚಿತ್ರದ ಅಪ್‌ಡೇಟ್ ಬಂದಾಗಲೆಲ್ಲಾ ಬರುತ್ತಲೇ ಇದೆ. ಈಗ ಹೊಸ ಅಪ್‌ಡೇಟ್ ಪ್ರಕಾರ ಈ ಸಿನಿಮಾಕ್ಕೆ 'ರಾಕಿಂಗ್ ಸ್ಟಾರ್' ಯಶ್ ಹಣ ಹಾಕಲಿದ್ದಾರೆ. ಬಹುಕೋಟಿ ವೆಚ್ಚದ 'ರಾಮಾಯಣ' ಸಿನಿಮಾಕ್ಕೆ ಯಶ್ ಕೂಡ ನಿರ್ಮಾಪಕ.

ರಾಮಾಯಣಕ್ಕೆ ಯಶ್ ಕೂಡ ನಿರ್ಮಾಪಕ
ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಪಣ ತೊಟ್ಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ 'ರಾಮಾಯಣ' ಸಿನಿಮಾವನ್ನು ನಿರ್ಮಿಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ,"ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದೆ ವಿಚಾರವನ್ನು ಕಂಡುಕೊಂಡಿದ್ದೇನೆ. ಅವರ ಸಿನಿಮಾ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿನ ಪ್ಲ್ಯಾನ್ ತಿಳಿದುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ" ಎಂದಿದ್ದಾರೆ.
ನಿರ್ಮಾಪಕ ಯಶ್ ಮನದಾಳ
ಈ ಬಗ್ಗೆ ನಟ ಯಶ್ ಮಾತನಾಡಿ, "ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ VFC ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ಬ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ತಿಳಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ" ಎಂದು ತಿಳಿಸಿದ್ದಾರೆ.

ನಮಿತ್ ಮಲ್ಹೋತ್ರಾ ಒಡೆತನದ ಪ್ರೈಮ್ ಫೋಕಸ್ ಸ್ಟುಡಿಯೋ ಜಾಗತಿಕ ಮಟ್ಟದ ಕಂಟೆಂಟ್ ಹಾಗೂ ವಿಭಿನ್ನ ಬಗೆಯ ಕ್ರಿಯೇಟ್ ಮಾಡುವ ಸ್ವತಂತ್ರ ನಿರ್ಮಾಣ ಕಂಪನಿಯಾಗಿದೆ. ಈ ಸಂಸ್ಥೆ ಸದ್ಯ ಮೂರು ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ. ಆ ಪೈಕಿ ರಾಮಾಯಣ ಕೂಡ ಒಂದು.
ಇನ್ನು, ಯಶ್ ತಮ್ಮದೇ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ ಎಂಬ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಬ್ಯಾನರ್ ನಡಿ 'ಟಾಕ್ಸಿಕ್' ನಿರ್ಮಾಣ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ 'ಮಾನ್ಸ್ಟರ್ ಮೈಂಡ್' ಕ್ರಿಯೇಷನ್ಸ್ ಕೂಡ 'ಟಾಕ್ಸಿಕ್' ಸಿನಿಮಾದ ನಿರ್ಮಾಣದಲ್ಲಿ ಪಾಲುದಾರಿಕೆಯನ್ನು ಹೊಂದಿದೆ. ಇದೇ ಬ್ಯಾನರ್ ನಡಿ 'ರಾಮಾಯಣ' ಸಿನಿಮಾಗೂ ಯಶ್ ಬಂಡವಾಳ ಹೂಡಲಿದ್ದಾರೆ












Click it and Unblock the Notifications