Darshan Thoogudeepa: ನಟ ದರ್ಶನ್‌ ಅಂಧಾಭಿಮಾನಿಗಳಿಗೆ ಆರ್‌ಟಿಓ ಎಚ್ಚರಿಕೆ ಸಂದೇಶ

Actor Darshan Prisoner Number: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದಶ್‌ನ್‌ಗೆ ನೀಡಿರುವ ಕೈದಿ ನಂಬರ್‌ ಅನ್ನು ಕೆಲವರು ವಾಹನಗಳ ಮೇಲೆ ಹಾಕಿಸಿಕೊಂಡು ಅಂಧಾಭಿಮಾನ ಮೆರೆಯುತ್ತಿದ್ದಾರೆ. ಸಾಲದೆಂಬಂತೆ ಬೇರೆ ನಟರ ಬಗ್ಗೆಯೂ ಕೆಟ್ಟದಾಗಿ ಸ್ಟಿಕ್ಕರ್‌ ಹಾಕಿಸಿಕೊಡು ಪ್ರಚೋದನೆ ನೀಡುವಂತಹ ಕೆಲಸ ಮಾಡುತಿದ್ದು, ಇಂತಹವರ ವಿರುದ್ಧ ಆರ್‌ಟಿಓ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿದಾಗಿನಿಂದಲೂ ಕೆಲವರು ಅಂಧಾಭಿಮಾನ ಮೆರೆಯುವ ಮುಲಕ ಇನ್ನಿತರರಿಗೂ ತೊಂದರೆ ಮಾಡಿದ ಘಟನೆಗಳು ನಡೆದಿದ್ದು, ಈಗಾಗಲೇ ಅಂತಹವರನ್ನು ಪೊಲೀಸರು ಹೆಡೆಮುರಿ ಕಟ್ಟುವ ಕೆಲಸವನ್ನು ಕೂಡ ಮಾಡಿದ್ದಾರೆ.

RTO warns actor Darshan fans Know details

ಬಳಿಕ ಪರಪ್ಪನ ಅಗ್ರಹಾರದಲ್ಲಿ ರೌಡಿ ಶೀಟರ್‌ ನಾಗನ ಜೊತೆ ರೌಂಡ್‌ ಟೇಬಲ್‌ ಪಾರ್ಟಿ ಮಾಡುವ ಮೂಲಕ ನಟ ದರ್ಶನ್‌ ಒಂದು ಕೈಯಲ್ಲಿ ಕಾಫಿ ಮಗ್‌ ಹಿಡಿದು, ಮತ್ತೊಂದು ಕೈಯಲ್ಲಿ ಸಿಗರೇಟ್‌ ಹಿಡಿದ ಫೋಟೋ ಹಾಗೂ ರೌಡಿ ಶೀಟರ್‌ಗಳ ಜೊತೆ ವಿಐಪಿ ಸೆಲ್‌ನಿಂದಲೇ ವಿಡಿಯೋ ಕಾಲ್‌ನಲ್ಲಿ ಮಾತನಾಡಿರುವ ವಿಡಿಯೋ ಭಾರೀ ವೈರಲ್‌ ಆಗಿದ್ದವು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು.

ಬಳಿಕ ಎಚ್ಚೆತ್ತ ಸರ್ಕಾರ ಪರಪ್ಪನ ಅಗ್ರಹಾರದ 9 ಜೈಲಾಧಿಕಾರಿಗಳನ್ನು ಸಸ್ಪೆಂಡ್‌ ಮಾಡಿದ್ದು, ಬಳಿಕ ಕೋರ್ಟ್‌ ಆದೇಶದ ಮೇರೆಗೆ ಪೊಲೀಸರು ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿದ್ದರು. ಅಲ್ಲದೆ, ಕೈದಿ ನಂಬರ್‌ ಕೂಡ ಚೇಂಜ್‌ ಆಗಿದೆ. ಇದನ್ನು ಕೂಡ ಕೆಲವರು ವಾಹನಗಳ ಮೇಲೆ ಹಾಕಿಸಿಕೊಳ್ಳುವುದಲ್ಲದೆ, ಬೇರೆಯವರಿಗೂ ತೊಂದರೆ ಮಾಡಿ ದರ್ಪ ಮೆರೆಯುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಇನ್ನು ದರ್ಶನ್‌ಗೆ ನೀಡಿರುವ ಕೈದಿ ನಂಬರ್‌ ಸೇರಿದಂತೆ ವಾಹನಗಳ ಮೇಲೆ ಪ್ರಚೋದನಕಾರಿ, ಬೇರೆ ನಟರ ಅಭಿಮಾನಿಗಳಿಗೆ ಟಾಂಗ್ ಕೊಡುವಂತ ಬರಹಗಳ ಸ್ಟಿಕರ್‌ ಅಳವಡಿಸಿಕೊಂಡಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಗಾ ವಹಿಸಿರುವ ಪೊಲೀಸರು ಹಾಗೂ ಆರ್‌ಟಿಒ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ನಟ ದರ್ಶನ್‌ ಅಭಿಮಾನಿಗಳಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ವಾಹನಗಳ ಮೇಲೆ ಅನವಶ್ಯಕ ಬರಹಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳೂತ್ತೇವೆ. ನೆಚ್ಚಿನ ನಟರ ಫೋಟೋಗಳನ್ನು ವಾಹನಗಳ ಮೇಲೆ ಹಾಕುವುದಲ್ಲೆದೆ, ಬೇರೆಯವರಿಗೆ ತೊಂದರೆ ಕೊಡುವುದು ಕಾನೂನು ಬಾಹಿರ ಎಂದು ಹೆಚ್ಚುವರಿ ಸಾರಿಗೆ ಆಯುಕ್ತ ಸಿ.ಮಲ್ಲಿಕಾರ್ಜುನ್ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

ಇಲ್ಲಿಯವರೆಗೆ ನಂಬರ್ ಪ್ಲೇಟ್ ಮೇಲೆ ಹೆಚ್ಚು ಒತ್ತು ನೀಡಿದ್ದೆವು. ಇದೀಗ ಕಾನೂನು ಪ್ರಕಾರ ವಾಹನಗಳ ಮೇಲೆ ಪ್ರಚೋದನೆ ನೀಡುವ ಬರಹ ಮಾತ್ರ ಅಲ್ಲ, ಯಾವುದೇ ಸ್ಟಿಕ್ಕರ್‌ಗಳಿಗೂ ಅವಕಾಶ ಇಲ್ಲ. ಆದ್ದರಿಂದ ಇನ್ಮುಂದೆ ಅನಧಿಕೃತ ಬರಹ ಹಾಕಿದರೆ, ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಒಂದು, ಎರಡು ಬಾರಿ ಎಚ್ಚರಿಕೆ ಕೊಡುತ್ತೇವೆ. ಎಚ್ಚೆತ್ತುಕೊಳ್ಳದಿದ್ದರೆ ವಾಹನ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ನಂಬರ್ ಪ್ಲೇಟ್ ಯಾವ ರೀತಿ ಇರಬೇಕೆಂದು ಸುಪ್ರೀಂ ಕೋರ್ಟ್‌ ಆರ್‌ಟಿಒ ಇಲಾಖೆಗಳಿಗೆ ಸೂಚನೆ ನೀಡಿದೆ. ಅದರ ಅನ್ವಯವೇ ಅಧಿಕಾರಿಗಳು ಪ್ರಕರಣ ದಾಖಲು ಮಾಡುತ್ತಾ ಬಂದಿದ್ದಾರೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಹಾಗೂ ಪ್ರಚಾರ ಮಾಡುವ ಕೆಲಸ ಆರ್‌ಟಿಒ ಇಲಾಖೆ ಮಾಡಿದೆ.

ಕಳೆದ 3 ವರ್ಷಗಳಲ್ಲಿ ಈ ಸಂಬಂಧ ಹಲವು ಪ್ರಕರಣಗಳನ್ನು ದಾಖಲು ಮಾಡಿದ್ದೇವೆ. ವಾಹನಗಳ ಮೇಲೆ ತರವಲ್ಲದ ಬರಹಗಳನ್ನು ಬರೆಯುತ್ತಿದ್ದಾರೆ. ಇನ್ಮುಂದೆ ವಾಹನಗಳ ಮೇಲೆ ಅನಾವಶ್ಯಕ ಬರಹಗಳು, ಸ್ಟಾರ್ ವಾರ್ ರೀತಿ ಅನಾವಶ್ಯಕ ಬರಹ, ಟಾಂಗ್‌ ಕೊಡುವ ಬರಹಗಳನ್ನು ಇದ್ದರೆ ತೆಗೆದು ಹಾಕಿ. ಇಲ್ಲದಿದ್ದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+