Sabarimala Gold Case: ಶಬರಿಮಲೆ ಚಿನ್ನ ಕಳವು ಪ್ರಕರಣ: ಕಾಂತಾರ: ಚಾಪ್ಟರ್ 1 ನಟ ಜಯರಾಮ್ ವಿಚಾರಣೆ
Sabarimala Gold Theft Case: ಶಬರಿಮಲೆ ಚಿನ್ನ ಕಳವು ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಈ ಸಂಬಂಧ ಕಾಂತಾರ: ಚಾಪ್ಟರ್ 1 ಚಿತ್ರದಲ್ಲಿ ನಟಿಸಿರುವ ನಟ ಜಯರಾಮ್ ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಜೊತೆ ಜಯರಾಮ್ ಅವರಿಗೆ ಸಂಪರ್ಕ ಇರಬಹುದೆಂಬ ಅನುಮಾನ ಹಿನ್ನೆಲೆಯಲ್ಲಿ ಈ ವಿಚಾರಣೆ ನಡೆದಿದೆ ಎಂದು ತಿಳಿದುಬಂದಿದೆ.
ಶಬರಿಮೆಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳ್ಳತನ ಸಂಬಂಧ ಸದ್ದಿಲ್ಲದೆ, ಎಸ್‌ಐಟಿ ತನಿಖೆಯನ್ನು ಚುರುಕುಪಡಿಸಿದ್ದು, ಇದೀಗ ಪ್ರಕರಣ ಸಂಬಂಧ ಮಲಯಾಳಂ ನಟ ಜಯರಾಮ್ ಅವರನ್ನು ವಿಚಾರಣೆ ನಡೆಸಿದೆ. ಇವರು ಮೂಲತಃ ಮಲಯಾಳಂ ನಟರಾಗಿದ್ದರೂ ಸಹ ಹಲವು ಭಾಷೆಗಳ ಚಿತ್ರಗಳಲ್ಲಿ ನಟನೆ ಮಾಡಿದವರಾಗಿದ್ದಾರೆ.

2019ರಲ್ಲಿ ಶಬರಿಮಲೆ ದೇವಸ್ಥಾನದ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ವೇಳೆ ಸುಮಾರು 4.5 ಕೆಜಿ ಚಿನ್ನ ಕಾಣೆಯಾಗಿತ್ತು. ಈ ಪ್ರಕರಣದಲ್ಲಿ ಉನ್ನಿಕೃಷ್ಣನ್ ಪೊಟ್ಟಿ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ. ಉನ್ನಿಕೃಷ್ಣನ್ ಜೊತೆ ಜಯರಾಮ್ ಅವರ ಪರಿಚಯ ಮತ್ತು ಒಡನಾಟದ ಬಗ್ಗೆ ಮಾಹಿತಿ ಪಡೆಯಲು ಎಸ್‌ಐಟಿ ಅವರನ್ನು ಕರೆಸಿ ಪ್ರಶ್ನಿಸಿದೆ ಎನ್ನಲಾಗಿದೆ.
ವಿಚಾರಣೆಗೆ ಇಳಿದಿದ್ದು ಯಾವಾಗ?: ತನಿಖಾ ಮೂಲಗಳ ಪ್ರಕಾರ, 2019ರಲ್ಲಿ ಚೆನ್ನೈನಲ್ಲಿ ಉನ್ನಿಕೃಷ್ಣನ್ ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಜಯರಾಮ್ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಇದೇ ವಿಡಿಯೋ ಎಸ್‌ಐಟಿ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವಿಚಾರಣೆ ವೇಳೆ ಉನ್ನಿಕೃಷ್ಣನ್ ಆಯೋಜಿಸಿದ್ದ ಇತರ ಪೂಜೆಗಳಲ್ಲಿ ಜಯರಾಮ್ ಎಷ್ಟು ಬಾರಿ ಭಾಗವಹಿಸಿದ್ದರು, ಅವರಿಬ್ಬರ ನಡುವೆ ಆರ್ಥಿಕ ಅಥವಾ ವೈಯಕ್ತಿಕ ಸಂಬಂಧವಿದೆಯೇ ಎಂಬ ಪ್ರಶ್ನೆಗಳನ್ನೂ ಕೇಳಲಾಗಿದೆ. ಆದರೆ, ಈ ವಿಚಾರಣೆ ಸಂಪೂರ್ಣವಾಗಿ ಪೂಜಾ ಕಾರ್ಯಕ್ರಮಗಳು ಮತ್ತು ಪರಿಚಯದ ಮಟ್ಟಕ್ಕೆ ಮಾತ್ರ ಸೀಮಿತವಾಗಿತ್ತು ಎನ್ನಲಾಗಿದೆ.
ಹಲವು ಭಾಷೆಗಳ ಸಿನಿಮಾಗಳಲ್ಲಿ ನಟನೆ: ನಟ ಜಯರಾಮ್ ಕನ್ನಡ ಚಿತ್ರರಂಗಕ್ಕೂ ಚಿರಪರಿಚಿತರು. ಇತ್ತೀಚೆಗೆ ಅವರು ಘೋಸ್ಟ್ ಸಿನಿಮಾದಲ್ಲಿ ನಟಿಸಿದ್ದರು. ಮೂಲತಃ ಮಲಯಾಳಂ ನಟರಾಗಿರುವ ಅವರು, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವಲ್ಲೂ ಪರಿಣಿತರಾಗಿದ್ದು, ಪರಭಾಷಾ ಚಿತ್ರಗಳಿಗೂ ಸ್ವತಃ ಡಬ್ಬಿಂಗ್ ಮಾಡುವ ಮೂಲಕ ಮೆಚ್ಚುಗೆ ಪಡೆದಿದ್ದಾರೆ. ಇನ್ನೂ ಇತ್ತೀಚೆಗಷ್ಟೇ ತೆರೆಗೆ ಅಪ್ಪಳಿಸಿದ ರಿಷಭ್ ಶೆಟ್ಟಿ ನಟನೆಯ ಕಾಂತಾರ: ಚಾಪ್ಟರ್ 1 ಚಿತ್ರದಲ್ಲಿ ಅವರು ರಾಜಶೇಖರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನೂ ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ ಕುರಿತು ಎಸ್‌ಐಟಿ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಗಳು ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಚುರುಕುಪಡಿಸಿದ್ದು, ಸದ್ದಿಲ್ಲದೆ ವಿಚಾರಣೆ ನಡೆಸುತ್ತಲೇ ಬಂದಿದೆ. ಇದು ಮುಂದಿನ ದಿನಗಳಲ್ಲಿ ಮತ್ತೆ ಯಾವ ತಿರುವುದು ಪಡೆದಯಲಿದೆ ಎಂದು ಕಾದುನೋಡಬೇಕಿದೆ.
-
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
Gold Price: ಸತತ 2ನೇ ದಿನವು ಬಂಗಾರದ ಬೆಲೆ ಭಾರೀ ಏರಿಕೆ, ದಾಖಲೆ ಬರೆದ ಬೆಳ್ಳಿ -
Akshaya Tritiya Special: ಅಕ್ಷಯ ತೃತೀಯ ಸ್ಪೆಷಲ್: ಪುರುಷರ ಚಿನ್ನದ ಆಭರಣಗಳಲ್ಲಿ ಹೊಸ ಟ್ರೆಂಡ್ಸ್ ವಿವರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications