Rakshak Bullet: ಈ ವರ್ಷ ಬರ್ತ್‌ಡೇ ಸೆಲೆಬ್ರೇಷನ್ ಬೇಡ ಎಂದ R BOSS ರಕ್ಷಕ್ ಬುಲೆಟ್: ಯಾಕೆ ಗೊತ್ತಾ?
ಕನ್ನಡ ಚಿತ್ರರಂಗದ ಭರವಸೆಯ ನಟ ರಕ್ಷಕ್ ಬುಲೆಟ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೇ ಇರಲು ನಿರ್ಧರಿಸಿದ್ದಾರೆ. ಜೂನ್ 21 ರಕ್ಷಕ್ ಬುಲೆಟ್ ಅವರ ಜನ್ಮದಿನವಾಗಿದ್ದು, ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಬೇಕು ಎಂದುಕೊಂಡಿದ್ದ ಅಭಿಮಾನಿಗಳು, ಆಪ್ತರು ಹಾಗೂ ಗೆಳೆಯರಿಗೆ ನಿರಾಸೆಯಾಗಿದೆ.
ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎಂದಿರುವ ರಕ್ಷಕ್ ಬುಲೆಟ್ ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಪಂದಿರ ದಿನದ ವಿಶೇಷವಾಗಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

'ಎಲ್ಲರಿಗೂ ನಮಸ್ಕಾರ ಹಾಗೂ 'ಫಾದರ್ಸ್ ಡೇ'ನ ಶುಭಾಶಯಗಳು, ಇವತ್ತು ಬೆಳಗ್ಗೆಯಿಂದ ನನ್ನ ತಂದೆಯ ನೆನಪು ನನ್ನನ್ನು ತುಂಬಾ ಕಾಡುತ್ತಿದೆ. ಎಲ್ಲರಂತೆ ನನಗೂ ಕೂಡ ನನ್ನ ತಂದೆಯೇ ಮೊದಲ ಹೀರೋ. ಹೀರೋ ಅಷ್ಟೇ ಅಲ್ಲ ಒಳ್ಳೆಯ ಮಾರ್ಗದರ್ಶಕರು ಹಾಗೂ ಸ್ನೇಹಿತರು ಕೂಡ ಆಗಿದ್ದರು.
ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ.

ಮುಂದಿನ ವರ್ಷದ ಹುಟ್ಟು ಹಬ್ಬದಷ್ಟರಲ್ಲಿ ಏನಾದರೂ ಒಂದು ಸಾಧನೆ ಮಾಡಿರುತ್ತೇನೆ. ಆಗ ನನ್ನ ಎಲ್ಲ ಸ್ನೇಹಿತರು, ಹಿತೈಷಿಗಳು, ಗುರು-ಹಿರಿಯರು ಹಾಗೂ ಪ್ರೀತಿ ಪಾತ್ರರೊಂದಿಗೆ ಆಚರಣೆ ಮಾಡುತ್ತೇನೆ. ಹೀಗೆ ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲಿರಲಿ ನನ್ನನ್ನು ಬೆಂಬಲಿಸುತ್ತಿರುವ ಎಲ್ಲ ನನ್ನ ಸ್ನೇಹಿತರು, ಪ್ರೀತಿ ಪಾತ್ರರು, ಮಾಧ್ಯಮ ಮಿತ್ರರು, ಟ್ರೋಲ್ ಪೇಜ್‌ಗಳು, ಯೂಟ್ಯೂಬ್‌ರ್ಸ್ ಹಾಗೂ ಎಲ್ಲಾ ಸಾಮಾಜಿಕ ಜಾಲತಾಣದ ಸ್ನೇಹಿತರಿಗೆ ಧನ್ಯವಾದಗಳು. ಇಂತಿ ನಿಮ್ಮ ಪ್ರೀತಿಯ ರಕ್ಷಕ್ ಬುಲೆಟ್ ಎಂದು ಬರೆದುಕೊಂಡಿದ್ದಾರೆ.
ರಕ್ಷಕ್ ಮನಸ್ಸಿಗೆ ಹತ್ತಿರವಾದವರು ಯಾರು?
ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದು ರಕ್ಷಕ್ ಬುಲೆಟ್ ಬರೆದುಕೊಂಡಿದ್ದಾರೆ. ಹಾಗಾದರೆ ರಕ್ಷಕ್ ಮನಸ್ಸಿಗೆ ಹತ್ತಿರವಾದವರು ಯಾರು, ಅವರಿಗೆ ಕಷ್ಟ ಕಷ್ಟ ಏನು ಎನ್ನುವ ಪ್ರಶ್ನೆ ಮೂಡಿದೆ.
ಸದ್ಯ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಕಳೆದೊಂದು ವಾರದಿಂದ ದರ್ಶನ್ ಪೊಲೀಸರ ವಶದಲ್ಲಿದ್ದಾರೆ. ಹೀಗಾಗಿ ರಕ್ಷಕ್ ಬುಲೆಟ್ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ. ಬುಲೆಟ್ ಪ್ರಕಾಶ್ ಮತ್ತು ದರ್ಶನ್ ಆಪ್ತರಾಗಿದ್ದು, ರಕ್ಷಕ್ ಕೂಡ ದರ್ಶನ್‌ನನ್ನು ಗೌರವಿಸುತ್ತಾರೆ. ಹೀಗಾಗಿ ದರ್ಶನ್ ಸಂಕಷ್ಟದಲ್ಲಿರುವಾಗ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವ ತೀರ್ಮಾನಕ್ಕೆ ರಕ್ಷಕ್ ಬಂದಿದ್ದಾರೆ ಎನ್ನಲಾಗಿದೆ.












Click it and Unblock the Notifications